
ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿ ಲಾರಿಯನ್ನು ಜಪ್ತಿ ಮಾಡಿದ ನಂತರ ದಂಧೆಕೋರರೊಂದಿಗೆ ಶಾಮೀಲಾಗಿ ವಾಹನ ಬಿಟ್ಟು ಕಳುಹಿಸಿದ ಆರೋಪದಡಿ, ಕಲಬುರಗಿಯ ಆಳಂದ ಪೊಲೀಸ್ ಠಾಣೆಯ ಸಿಪಿಐ ಶರಣಬಸಪ್ಪ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. 112 ಸಿಬ್ಬಂದಿ ವಶಕ್ಕೆ ಪಡೆದು ಆಳಂದ ಟೌನ್ ಠಾಣೆಗೆ ಒಪ್ಪಿಸಿದ್ದ ಅಕ್ಕಿ ಲಾರಿಯನ್ನು ಕಳುಹಿಸಿಕೊಡಲು ಆರೋಪಿಗಳ ಜತೆ ಡೀಲ್ ಮಾಡಿಕೊಂಡಿದ್ದ ವಿಷಯ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಡ್ಡೂರು ಶ್ರೀನಿವಾಸಲು ಅವರು ತನಿಖೆಗೆ ಆದೇಶಿಸಿದ್ದು, ತನಿಖೆಯಲ್ಲಿ ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆಯಲ್ಲಿ ಸಿಪಿಐ ಶರಣಬಸಪ್ಪ ಹಾಗೂ ಪೊಲೀಸ್ ಕಾನ್‌ಸ್ಟೇಬಲ್‌ಗಳಾದ (ಪಿಸಿ) ಹಣಮಂತ್, ಮಲ್ಲಿಕಾರ್ಜುನ ಮತ್ತು ಸಾಯಬಣ್ಣ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ-ತಮಿಳುನಾಡು ಗಡಿ ಭಾಗವಾದ ಚಾಮರಾಜನಗರ ಜಿಲ್ಲೆಯ ಆಸನೂರು ಬಳಿ ಕಾಡಾನೆಗಳ ಉಪಟಳ ತೀವ್ರಗೊಂಡಿದೆ. ಆಸನೂರು ಚೆಕ್‌ಪೋಸ್ಟ್ ಬಳಿ ಬಂದ ಕಾಡಾನೆಯೊಂದು ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ, ಅದರಲ್ಲಿದ್ದ ಕಬ್ಬನ್ನು ಸೊಂಡಿಲಿನಿಂದ ಎಳೆದು ತಿಂದಿದೆ. ಮತ್ತೊಂದೆಡೆ, ಇದೇ ಮುಖ್ಯರಸ್ತೆಯಲ್ಲಿ ಎರಡೆರಡು ಕಾಡಾನೆಗಳು ಏಕಾಏಕಿ ಪ್ರತ್ಯಕ್ಷವಾಗಿ ಸಂಚರಿಸಿದ್ದರಿಂದ ವಾಹನ ಸವಾರರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಕಾಡಾನೆಗಳ ಈ ರಸ್ತೆ ತಡೆ ಹಾಗೂ ಸಂಚಾರದ ದೃಶ್ಯಗಳನ್ನು ಸವಾರರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ. ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ (SIR) ಪ್ರಕ್ರಿಯೆ ನೆಪದಲ್ಲಿ ಕಾಂಗ್ರೆಸ್ ಬೆಂಬಲಿತ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್ ಆರೋಪಿಸಿದ್ದಾರೆ. ಬಿಜೆಪಿ ಪ್ರತಿನಿಧಿ ಶ್ರೀನಿವಾಸ ಮೋತ್ಕರ್ ಎಂಬುವವರು 7,561 ಮತದಾರರ ಹೆಸರು ತೆಗೆಯುವಂತೆ ನೀಡಿದ ಪತ್ರದಲ್ಲಿ ಶೇ 98ರಷ್ಟು ಮುಸ್ಲಿಂ ಮತದಾರರಿದ್ದಾರೆ ಎಂದು ಕಿಡಿಕಾರಿದ್ದಾರೆ. ಈ ಸಂಬಂಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಸಾರ್ವಜನಿಕರೂ ಸಹ ಅಧಿಕಾರಿಗಳ ಕಿರುಕುಳದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ನೈಸ್ ಯೋಜನೆ ವಿರುದ್ಧ ಸಮರ ಮುಂದುವರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇಂದು ಭೂಮಿ ಕಳೆದುಕೊಂಡ ಸಂತ್ರಸ್ತ ರೈತರೊಂದಿಗೆ ಬೃಹತ್ ಸಂವಾದ ನಡೆಸಲಿದ್ದಾರೆ. ನೈಸ್ ರಸ್ತೆಯ ಮಾದವಾರ ಟೋಲ್ ಬಳಿಯಿಂದ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿರುವ ಈ ಕಾರ್ಯಕ್ರಮದಲ್ಲಿ, ಹೆಚ್‌ಡಿಕೆ ನೈಸ್ ರಸ್ತೆಗೆ ಹೊಂದಿಕೊಂಡಿರುವ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ರೈತರ ಅಹವಾಲು ಸ್ವೀಕರಿಸಲಿದ್ದಾರೆ. ದಿನವಿಡೀ ಸಮಾಲೋಚನೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಡೇಮನೆ ಗ್ರಾಮದಲ್ಲಿ ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಚೇತನ್ (26) ಎಂಬ ಯುವಕ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಕಳೆದ ರಾತ್ರಿ 7 ಜನ ಸ್ನೇಹಿತರ ತಂಡ ಶಿಕಾರಿಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಗಾಯಾಳು ಚೇತನ್‌ನನ್ನು ಆಸ್ಪತ್ರೆಗೆ ಕರೆತಂದ ಮೂವರು ಯುವಕರನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದು, ನಾಪತ್ತೆಯಾಗಿರುವ ಉಳಿದ ಮೂವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ದೊರೆತಿದೆ. ರಿಕರ್ವ್ ಬಿಲ್ಲುಗಾರಿಕೆ ಫೈನಲ್ನಲ್ಲಿ ಭಾರತ ಮಹಿಳಾ ತಂಡ ದಕ್ಷಿಣ ಕೊರಿಯಾವನ್ನು ಸೋಲಿಸಿ ಚಿನ್ನದ ಪದಕ ಗೆದ್ದುಕೊಂಡಿದೆ.
ಫ್ಲೈದುಬೈ ವಿಮಾನದಲ್ಲಿ ಭಾರತೀಯ ಕ್ಯಾಪ್ಟನ್ ಮೇಲೆ ಒಮಾನಿ ಸಹ-ಪೈಲಟ್ ದಾಳಿ ಮಾಡಿದ ಘಟನೆ ಸಂಬಂಧ ಸದ್ಯ ಓಮನ್ನ ಕೋ-ಪೈಲಟನ್ನು ಸೌದಿ ಅರೇಬಿಯಾ ಇದೀಗ ಯುಎಇಗೆ ಹಸ್ತಾಂತರಿಸಿದೆ. ಮತ್ತಷ್ಟು ಓದಿ
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಯ ನಂತರ ಬಿಪಿಎಲ್ ರೇಷನ್ ಕಾರ್ಡ್‌ಗಳಿಗೆ ಭಾರಿ ಬೇಡಿಕೆ ವ್ಯಕ್ತವಾಗಿದೆ. ಅನರ್ಹರ ಕಾರ್ಡ್ ರದ್ದುಪಡಿಸುವ ಪ್ರಕ್ರಿಯೆಯಿಂದಾಗಿ ಹೊಸ ಕಾರ್ಡ್‌ಗಳ ವಿತರಣೆ ಸ್ಥಗಿತಗೊಂಡಿತ್ತು. ಆದರೆ, ಕಳೆದ ಮೂರ್ನಾಲ್ಕು ವರ್ಷಗಳಿಂದ ಕಾಯುತ್ತಿರುವ ಬಡ ಜನರಿಗೆ ಆಹಾರ ಸಚಿವ ರಿಜ್ವಾನ್ ಅರ್ಷದ್ ಗುಡ್‌ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಖೋಟಾ ನೋಟು ಮುದ್ರಿಸುವ ಬಹು ದೊಡ್ಡ ಜಾಲವೊಂದನ್ನು ಚಾಮರಾಜಪೇಟೆ ಪೊಲೀಸರು ಬಯಲಿಗೆಳೆದಿದ್ದು, 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. 500 ರೂ. ಮುಖಬೆಲೆಯ 4,337 ನಕಲಿ ನೋಟುಗಳು, ತಮಿಳುನಾಡಿನಲ್ಲಿ ಹೆಚ್ಚುವರಿ 6 ಲಕ್ಷ ರೂ. ಮೌಲ್ಯದ ಖೋಟಾ ನೋಟುಗಳನ್ನು ಜಪ್ತಿ ಮಾಡಲಾಗಿದೆ. ಮತ್ತಷ್ಟು ಓದಿ
‘ಪ್ರೇಮದ ಊರಲಿ’ ಚಿತ್ರ ಬಿಡುಗಡೆಯಾದ ಮೊದಲ ವಾರದಲ್ಲೇ ಚಿತ್ರವು ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಸಕ್ಸಸ್ ಹಾದಿಯಲ್ಲಿ ಮುನ್ನುಗ್ಗುತ್ತಿದೆ. ಬಿಡುಗಡೆಯಾದ ಮೊದಲ ವಾರದಲ್ಲೇ ಚಿತ್ರವು ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಸಕ್ಸಸ್ ಹಾದಿಯಲ್ಲಿ ಮುನ್ನುಗ್ಗುತ್ತಿದೆ.
ಗುರುವಾರ ಬಂಪರ್ ಲಾಟರಿ ಹೊಡೆದ ‘ಪ್ರೇಮದ ಊರಲಿ’ ಚಿತ್ರ; ಕಲೆಕ್ಷನ್ ನೋಡಿ ಎಲ್ಲರೂ ದಂಗು#Premadaoorali #CinemaNews https://t.co/D1roLhG5w2
— TV9 Kannada (@tv9kannada) October 2, 2026
ಬೆಂಗಳೂರಿನ ವೈಟ್‌ಫೀಲ್ಡ್ ಭಾಗದಲ್ಲಿ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆಯಾದರೂ, ಅದೃಷ್ಟವಶಾತ್ ಚಾಲಕ ಸೇರಿದಂತೆ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ಅಧಿಕೃತ ಮಾಹಿತಿ ನೀಡಿದ್ದು, ನಿಯಮ ಉಲ್ಲಂಘಿಸುವ ಅಂಗಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಲಿದೆ. ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಯ ವಿರುದ್ಧ ಧರಣಿ ನಡೆಸಿರುವ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕರು ಆಯೋಗಕ್ಕೆ ದೂರು ಸಲ್ಲಿಸಿ ಒತ್ತಾಯಿಸಲಿದ್ದಾರೆ.
ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದಿದೆ. ಘಟನೆಯಲ್ಲಿ 12 ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಕುಮಟಾ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧ KPSC ಕಚೇರಿಯಲ್ಲಿ ಮಹಜರು ಮುಗಿಸಿ ಇಡಿ ಅಧಿಕಾರಿಗಳು ತೆರಳಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಯಿಂದ ಮಹಜರು ಕಾರ್ಯ ಆರಂಭವಾಗಿ ತಡರಾತ್ರಿ 1 ಗಂಟೆವರೆಗೂ ನಡೆದಿತ್ತು.
ದೇಶದೆಲ್ಲೆಡೆ ಇಂದು ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಗುತ್ತಿದೆ. ಇತ್ತ ಕರ್ನಾಟಕದಲ್ಲಿ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಜಾರಿ ನಿರ್ದೇಶನಾಲಯ ತನಿಖೆ ಚುರುಕುಗೊಂಡಿದೆ. ಮತ್ತೊಂದೆಡೆ, ಬಿಪಿಎಲ್ ಕಾರ್ಡ್ಗೆ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದು, ಇದೀಗ ಹೊಸ ಬಿಪಿಎಲ್ ಕಾರ್ಡ್ ವಿತರಣೆಗೆ ಸರ್ಕಾರ ಚಿಂತನೆ ನಡೆಸಿರುವುದಾಗಿ ಕರ್ನಾಟಕ ಆಹಾರ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ಸಿಂ ಡಿಕೆ ಶಿವಕುಮಾರ್ ಬಳಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರೊಂದಿಗೆ ಕರ್ನಾಟಕದ ಇತರ ವಿದ್ಯಮಾನಗಳು, ಬಿಗ್ ಬಾಸ್ ಹಾಗೂ ಸಿನಿಮಾ ಸಂಬಂಧಿತ ಸುದ್ದಿಗಳು, ರಾಷ್ಟ್ರ-ಅಂತರರಾಷ್ಟ್ರೀಯ ಮಾಹಿತಿ, ಕ್ರೀಡಾ ವಿಷಯಗಳಿಗೆ ಸಂಬಂಧಿಸಿದ ತಾಜಾ ಮಾಹಿತಿ ಇಲ್ಲಿ ಲಭ್ಯ. ಅದಕ್ಕಾಗಿ ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Published On - 7:32 am, Fri, 2 October 26