TV9 Kannada News Live: ಡಿಕೆಶಿ v/s ಹೆಚ್ಡಿಕೆ ವಾರ್; ಗೊಡ್ಡು ಬೆದರಿಕೆಗೆಲ್ಲ ಬಗ್ಗಲ್ಲ, ಕುಮಾರಸ್ವಾಮಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ತಿರುಗೇಟು!
Karnataka News Today Live Updates: ಕದ್ದು ಆಸ್ತಿ ಮಾಡಿಲ್ಲ, ಯಾವುದೇ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ಸಚಿವ ಕುಮಾರಸ್ವಾಮಿ ಆರೋಪಕ್ಕೆ ಡಿಕೆ ಶಿವಕುಮಾರ್ ಖಡಕ್ ತಿರುಗೇಟು, ಬೆಂಗಳೂರಿನಲ್ಲಿ ಮುಂದುವರಿದ ಭಾರಿ ಮಳೆಯ ಆರ್ಭಟ ಹಾಗೂ ಜಮ್ಮು-ಕಾಶ್ಮೀರದ ಸಿಐಎಸ್‌ಎಫ್ ಕ್ಯಾಂಪ್‌ನಲ್ಲಿ ಯೋಧನಿಂದ ಗುಂಡಿನ ದಾಳಿ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ಕ್ಷಣಕ್ಷಣದ ಲೈವ್ ಅಪ್‌ಡೇಟ್ಸ್ ಇಲ್ಲಿದೆ.

LIVE NEWS & UPDATES
-
ಚಿಕ್ಕಮಗಳೂರು: 25ಕ್ಕೂ ಹೆಚ್ಚು ಜನರಿಗೆ ಕೋಟಿ ಕೋಟಿ ವಂಚಿಸಿದ ನಕಲಿ ಲೇಡಿ ಪಿಎಸ್ಐ ಬಂಧನ
ತಾನು ಬೆಂಗಳೂರಿನ ಪಿಎಸ್ಐ ಎಂದು ನಂಬಿಸಿ 25ಕ್ಕೂ ಹೆಚ್ಚು ಜನರಿಗೆ ಕೋಟ್ಯಾಂತರ ರೂಪಾಯಿ ಹಣ, ಚಿನ್ನ ಹಾಗೂ ಐಷಾರಾಮಿ ಕಾರು ವಂಚಿಸಿದ್ದ ನಿವೇದಿತಾ ಗೌಡಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ವಂಚಿಸಿದ ಹಣವನ್ನು ತನ್ನ ಪ್ರಿಯಕರ ದೇವುಗೆ ನೀಡಿರುವುದಾಗಿ ಆಕೆ ತಿಳಿಸಿದ್ದು, ಪೊಲೀಸರು ಆತನ ಬಂಧನಕ್ಕೆ ಜಾಲ ಬೀಸಿದ್ದಾರೆ.
Breaking News Today Live Updates in Kannada: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾಡಿರುವ ಆಸ್ತಿ ಆರೋಪಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಕಾನೂನು ಚೌಕಟ್ಟಿನಲ್ಲೇ ಆಸ್ತಿ ಮಾಡಿದ್ದು, ಯಾವುದೇ ಬೆದರಿಕೆಗೆ ಹೆದರುವುದಿಲ್ಲ ಎಂದು ಸ್ಪಷ್ಟಪಡಿಸಿ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲು ಸವಾಲು ಹಾಕಿದ್ದಾರೆ. ಶಾಂತಿನಗರ, ಮೆಜೆಸ್ಟಿಕ್, ಮಲ್ಲೇಶ್ವರಂ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು ರಸ್ತೆಗಳು ಜಲಾವೃತಗೊಂಡಿವೆ. ಮುಂದಿನ ಕೆಲವು ಗಂಟೆಗಳಲ್ಲಿ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಕಥುವಾ ಜಿಲ್ಲೆಯ ಬಸೋಲಿಯಲ್ಲಿ ಯೋಧ ಅವಧೇಶ್ ಕುಮಾರ್ ಜಗಳದ ಬಳಿಕ ತನ್ನ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿ, ಅಸಿಸ್ಟೆಂಟ್ ಕಮಾಂಡೆಂಟ್ ಸೇರಿದಂತೆ ನಾಲ್ವರನ್ನು ಹತ್ಯೆ ಮಾಡಿದ್ದಾನೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Sep 30,2026 8:58 AM




