AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಕೆಪಿಎಸ್​ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಸದಸ್ಯೆ ಗೀತಾ ಇಡಿ ಕಸ್ಟಡಿಗೆ; ಇಂದೇ ಓಪನ್ ಕೋರ್ಟ್‌ಗೆ ಹಾಜರುಪಡಿಸಲು ಜಡ್ಜ್ ಸೂಚನೆ

Karnataka News Today Live Updates: KPSC ನೇಮಕಾತಿ ಹಗರಣದಲ್ಲಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ED ಕಸ್ಟಡಿಗೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 7-8 ರಂದು ಗುಡುಗು ಸಹಿತ ಮಳೆಯ ಮುನ್ಸೂಚನೆ ಹಾಗೂ ಪ್ರಧಾನಿ ಮೋದಿ ಸಾರ್ವಜನಿಕ ಸೇವೆಗೆ 25 ವರ್ಷ ಪೂರ್ಣಗೊಳಿಸಿರುವ ಇಂದಿನ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು ಇಲ್ಲಿವೆ.

TV9 Kannada News Live: ಕೆಪಿಎಸ್​ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಸದಸ್ಯೆ ಗೀತಾ ಇಡಿ ಕಸ್ಟಡಿಗೆ; ಇಂದೇ ಓಪನ್ ಕೋರ್ಟ್‌ಗೆ ಹಾಜರುಪಡಿಸಲು ಜಡ್ಜ್ ಸೂಚನೆ
ಕೆಪಿಎಸ್​ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಸದಸ್ಯೆ ಗೀತಾ ಇಡಿ ಕಸ್ಟಡಿಗೆ
ಭಾವನಾ ಹೆಗಡೆ
|

Updated on:Oct 07, 2026 | 8:10 AM

Share

LIVE NEWS & UPDATES

  • 07 Oct 2026 08:10 AM (IST)

    KPSC ಹಗರಣ: ಅಭ್ಯರ್ಥಿಗಳನ್ನು ಸಾಕ್ಷಿಯಾಗಿಸಲು CID ಪ್ಲಾನ್!

    KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆ ಚುರುಕುಗೊಳಿಸಿರುವ CID, ಪ್ರಕರಣದಲ್ಲಿ ಭಾಗಿಯಾದ ಅಭ್ಯರ್ಥಿಗಳನ್ನೇ ಸಾಕ್ಷಿಗಳನ್ನಾಗಿ ಪರಿಗಣಿಸಲು ನಿರ್ಧರಿಸಿದೆ. ಮೂವರು ಅಭ್ಯರ್ಥಿಗಳ ವಿಚಾರಣೆ ವೇಳೆ ಹಣ ನೀಡಿರುವುದು ಬೆಳಕಿಗೆ ಬಂದಿದ್ದು, ಈಗಾಗಲೇ ವಿಚಾರಣೆ ನಡೆಸಲಾಗಿರುವ 8ಕ್ಕೂ ಹೆಚ್ಚು ಅಭ್ಯರ್ಥಿಗಳು ನ್ಯಾಯಾಲಯದ ಮುಂದೆ ಹೇಳಿಕೆ ನೀಡಲು ಒಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಂದ ಕೋರ್ಟ್‌ ಮುಂದೆ ಸೆಕ್ಷನ್ 164 ರಡಿ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಅಧಿಕೃತ ಹೇಳಿಕೆ ದಾಖಲಿಸಲು CID ಅರ್ಜಿ ಸಲ್ಲಿಸಲಿದೆ.

  • 07 Oct 2026 08:07 AM (IST)

    ಬಳ್ಳಾರಿ, ವಿಜಯನಗರದಲ್ಲಿಂದು ಪರಮೇಶ್ವರ್ ಬರ ಪರಿಶೀಲನೆ

    ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ, ಬರ ಪೀಡಿತ ಜಮೀನುಗಳನ್ನು ವೀಕ್ಷಿಸಿ ರೈತರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 11:30ಕ್ಕೆ ಜಿಂದಾಲ್ ಏರ್‌ಪೋರ್ಟ್‌ಗೆ ಆಗಮಿಸಲಿರುವ ಅವರು ಹಲಕುಂದಿ, ಬೆಳಗಲ್ ಮತ್ತು ಬಂಡ್ರಿ ಗ್ರಾಮಗಳಿಗೆ ಭೇಟಿ ನೀಡಲಿದ್ದು, ಸಂಜೆ 5:30ಕ್ಕೆ ಹೊಸಪೇಟೆ ಡಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

  • 07 Oct 2026 08:00 AM (IST)

    ಚಿತ್ರದುರ್ಗದಲ್ಲಿ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ’

    ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಬಿಜೆಪಿಯಿಂದ ಸೇವಾ ಸಂಕಲ್ಪ ಅಭಿಯಾನ ಆಯೋಜಿಸಲಾಗಿದೆ. ವಿಪಕ್ಷ ನಾಯಕ ಆರ್. ಅಶೋಕ್, ಸಂಸದ ಗೋವಿಂದ ಕಾರಜೋಳ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ವಾಲ್ಮೀಕಿ ಭವನದಿಂದ ನೀಲಕಂಠೇಶ್ವರ ದೇಗುಲದವರೆಗೆ ಸೇವಾ ಜ್ಯೋತಿ ಯಾತ್ರೆ ನಡೆಯಲಿದೆ.

  • 07 Oct 2026 07:59 AM (IST)

    ಇಂದು ಸುಪ್ರೀಂಕೋರ್ಟ್ನಲ್ಲಿ ದರ್ಶನ್ ವಿಚಾರಣೆ

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್‌ಗೆ ಮಾಫಿ ಸಾಕ್ಷಿ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಲಿದೆ. ನ್ಯಾ. ಜೆ.ಬಿ. ಪಾರ್ದಿವಾಲಾ ನೇತೃತ್ವದ ದ್ವಿಪೀಠದಲ್ಲಿ ಈ ಮಹತ್ವದ ವಿಚಾರಣೆ ನಡೆಯಲಿದೆ.

  • 07 Oct 2026 07:41 AM (IST)

    KPSC ಹಗರಣ: ಮಾಜಿ ಅಧ್ಯಕ್ಷ, ಸದಸ್ಯೆ ED ಕಸ್ಟಡಿಗೆ!

    KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಬಂಧಿತರಾದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಹಾಗೂ ಸದಸ್ಯೆ ಗೀತಾ ಅವರನ್ನು ಬೆಂಗಳೂರಿನ 4ನೇ CCH ಕೋರ್ಟ್‌ ಜಡ್ಜ್ ಮಂಜುನಾಥ್ ಇಂದು ಮಧ್ಯಾಹ್ನ 3 ಗಂಟೆಯವರೆಗೆ ED ಕಸ್ಟಡಿಗೆ ನೀಡಿದ್ದಾರೆ. 14 ದಿನಗಳ ಕಸ್ಟಡಿಗೆ ಕೋರಿದ್ದ ED ಅಧಿಕಾರಿಗಳಿಗೆ, ಮಧ್ಯಾಹ್ನ 3ಕ್ಕೆ ಓಪನ್ ಕೋರ್ಟ್‌ನಲ್ಲಿ ಹಾಜರುಪಡಿಸಲು ನ್ಯಾಯಾಧೀಶರು ಸೂಚಿಸಿದ್ದಾರೆ.

Breaking News Today Live Updates in Kannada: KPSC ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮತ್ತು ಸದಸ್ಯೆ ಗೀತಾ ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದ ಬಳಿಕ, ಬೆಂಗಳೂರಿನ 4ನೇ CCH ಕೋರ್ಟ್ ಜಡ್ಜ್ ಮಂಜುನಾಥ್ ಅವರು ಇಬ್ಬರನ್ನೂ ಮಧ್ಯಾಹ್ನ 3 ಗಂಟೆಯವರೆಗೆ ED ಕಸ್ಟಡಿಗೆ ನೀಡಿ, ನಂತರ ಓಪನ್ ಕೋರ್ಟ್‌ನಲ್ಲಿ ಹಾಜರುಪಡಿಸಲು ಆದೇಶಿಸಿದ್ದಾರೆ. ಅಕ್ಟೋಬರ್ 7 ಮತ್ತು 8ರಂದು ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರೈಸಿದ್ದಾರೆ. 2001ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಅವರು, ಸತತ 13 ವರ್ಷಗಳ ಕಾಲ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

LIVE TV

Published On - Oct 07,2026 7:41 AM

Follow Us