TV9 Kannada Live: ಇಂದಿನ ಇಡೀ ದಿನದ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು

Karnataka News Live Updates: ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಸಚಿವ ಸಂಪುಟದಲ್ಲಿನ ಖಾತೆ ಹಂಚಿಕೆ ಅಸಮಾಧಾನ, ಸಂಪುಟ ವಿಸ್ತರಣೆ ಕಸರತ್ತು, ಸುದೀರ್ಘ ಅವಧಿಗೆ ಪ್ರಧಾನಿಯಾದ ದಾಖಲೆ ನಿರ್ಮಿಸಿದ ನರೇಂದ್ರ ಮೋದಿ, ರಾಜ್ಯಸಭೆ ಚುನಾವಣೆ, ಇರಾನ್ ಯುದ್ಧ ಸೇರಿದಂತೆ ಪ್ರಮುಖ ವಿದ್ಯಮಾನಗಳ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.

TV9 Kannada Live: ಇಂದಿನ ಇಡೀ ದಿನದ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು
ಪಿಎಂ ಮೋದಿ ಫೈಲ್ ಚಿತ್ರ
Image Credit source: PTI
Edited By:

Updated on: Jun 10, 2026 | 9:55 PM

ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ಪಿಎಂ ಜವಾಹರ್​ಲಾಲ್ ನೆಹರು ಅವರ ದಶಕಗಳ ಹಿಂದಿನ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಸುದೀರ್ಘ ಅವಧಿಗೆ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ ದಾಖಲೆ ಇದೀಗ ಮೋದಿ ಅವರದ್ದಾಗಿದೆ. ಮತ್ತೊಂದೆಡೆ, ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿರುವುದು ತೀವ್ರ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಸಚಿವ ಸಂಪುಟದ ಖಾತೆ ಕ್ಯಾತೆ ಮುಂದುವರಿದಿರುವುದರ ಜತೆಗೆ, ಸಂಪುಟ ವಿಸ್ತರಣೆ ವೇಳೆ ಸಚಿವರಾಗಲು ಲಾಬಿ ಜೋರಾಗಿದೆ. ಮತ್ತೊಂದೆಡೆ, ಅಂತರರಾಷ್ಟ್ರೀಯ ಮಟ್ಟದಲ್ಲಿ, ಇರಾನ್ ಹಾಗೂ ಇಸ್ರೆಲ್ ಸಂಘರ್ಷ ಮತ್ತೆ ತೀವ್ರಗೊಳ್ಳುವ ಸುಳಿವು ದೊರೆತಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Published On - 9:07 am, Wed, 10 June 26

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us