TV9 Kannada Live: ಜೂನ್ 11ರ ಪ್ರಮುಖ ಸುದ್ದಿಗಳು
Karnataka News Today Live Updates: ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಎರಡನೇ ಹಂತದಲ್ಲಿ ಹೊರಬೀಳಲಿರುವ ಮಂತ್ರಿಗಳ ಹೆಸರಿನ ಬಗ್ಗೆ ಕುತೂಹಲ ಹೆಚ್ಚಿದೆ. ಮತ್ತೊಂದೆಡೆ ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಎಲ್ಲ ಪ್ರಮುಖ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ಸ್ ಇಲ್ಲಿವೆ.

ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಎನ್ಡಿಎ ನಾಯಕರ ಜೊತೆ ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ತನ್ನದೇ ಆದ ರಾಜಕೀಯ ಲೆಕ್ಕಾಚಾರಗಳನ್ನು ಹಾಕುತ್ತಿದ್ದು, ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿಗಳ ಜೊತೆಗಿನ ಸಭೆ ಕುತೂಹಲ ಮೂಡಿಸಿದೆ. ಇತ್ತ ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದ್ದು, ಸಚಿವಾಕಾಂಕ್ಷಿಗಳಿಂದ ಲಾಬಿ ಜೋರಾಗಿದೆ. ಯುವ ಮುಖಗಳಿಗೆ ಹೈಕಮಾಂಡ್ ಪ್ರಾಧಾನ್ಯತೆ ನೀಡಬಹುದೆಂಬ ಬಗ್ಗೆಯೂ ಮಾತುಗಳು ಕೇಳಿಬಂದಿವೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - 9:23 am, Thu, 11 June 26




