AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada Live: ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಕೋಲ್ಕತ್ತ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿ

ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಪಶ್ಚಿಮ ಬಂಗಾಳದ ಕೊಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್​​ ಪದಗ್ರಹಣಮಾಡುತ್ತಿದ್ದು, ರಾಜ್ಯ, ದೇಶ, ಅಂತಾರಾಷ್ಟ್ರೀಯ, ಸಿನಿಮಾ, ಕ್ರೀಡೆ ಸೇರಿ ಈ ದಿನದ ಪ್ರಮುಖ ಸುದ್ದಿಗಳ ಹೈಲೆಟ್ಸ್​ ಇಲ್ಲಿದೆ.

TV9 Kannada Live: ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಕೋಲ್ಕತ್ತ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿ
ಯೋಗ
ಪ್ರಸನ್ನ ಹೆಗಡೆ
|

Updated on:Jun 21, 2026 | 7:57 AM

Share

LIVE NEWS & UPDATES

  • 21 Jun 2026 07:51 AM (IST)

    ತುಮಕೂರಲ್ಲಿ ಯೋಗಾಭ್ಯಾಸ ಮಾಡಿದ ಸೋಮಣ್ಣ

    ತುಮಕೂರು ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆಯಿಂದ ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮ ನಡೆದಿದೆ. ಕೇಂದ್ರ ಸಚಿವ ವಿ. ಸೋಮಣ್ಣ, ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸೇರಿದಂತೆ ವಿವಿಧ ಗಣ್ಯರು ಯೋಗಾಭ್ಯಾಸದಲ್ಲಿ ಭಾಗಿಯಾಯಾಗಿದ್ದಾರೆ.

  • 21 Jun 2026 07:37 AM (IST)

    ಮಂಡ್ಯದಲ್ಲಿ ಯೋಗ ಮಾಡಿದ ಹೆಚ್​​ಡಿಕೆ

    ಮಂಡ್ಯ ನಗರದ ಪಿಇಟಿ ಆವರಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದ್ದಾರೆ. ಬಳಿಕ ಸಾರ್ವಜನಿಕರ‌ ಜೊತೆ ಕುಮಾರಸ್ವಾಮಿ ಯೋಗ ಮಾಡಿದ್ದು, ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದರು. ಚಂದ್ರವನ ಆಶ್ರಯದ ತ್ರಿನೇತ್ರ ಶಿವಯೋಗಿ ಸ್ವಾಮೀಜಿ, ಡಿಸಿ ಡಾ.ಕುಮಾರ್ ಪೊಲೀಸ್​ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಜಿಪಂ ಸಿಇಒ ನಂದಿನಿ ಉಪಸ್ಥಿತರಿದ್ದರು.

  • 21 Jun 2026 07:20 AM (IST)

    ಯೋಗ ದಿನಾಚರಣೆ ಅತಿದೊಡ್ಡ ಸಾಮೂಹಿಕ ಉತ್ಸವ

    ಯೋಗ ದಿನಾಚರಣೆ ಅತಿದೊಡ್ಡ ಸಾಮೂಹಿಕ ಉತ್ಸವ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಡೀ ದೇಶ ಇಂದು ಯೋಗ ದಿನಾಚರಣೆಯಲ್ಲಿ ತೊಡಗಿದೆ. ಯೋಗ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಮುನ್ನಡೆಯುತ್ತದೆ. ಇಡೀ ವಿಶ್ವದಲ್ಲಿ ಇವತ್ತು ಯೋಗ ಮಾಡುತ್ತಿರುವ ದೃಶ್ಯಗಳು ಕಾಣುತ್ತಿವೆ ಎಂದು ಕೋಲ್ಕತ್ತಾದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ತಿಳಿಸಿದ್ದಾರೆ.

  • 21 Jun 2026 07:17 AM (IST)

    ಸುವರ್ಣ ವಿಧಾನಸೌಧದ ಮುಂಭಾಗವೂ ಕಾರ್ಯಕ್ರಮ

    ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಯೋಗ ದಿನಾಚರಣೆ‌‌ ಆಚರಿಸಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿಸಿ ಮೊಹಮ್ಮದ್ ರೋಷನ್, ಕಮಿಷನರ್ ಭೂಷಣ ಬೋರಸೆ, ಜಿ.ಪಂ. ಸಿಇಒ ರಾಹುಲ್ ಶಿಂಧೆ, ಪೊಲೀಸ್​ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿ ಇತರ ಅಧಿಕಾರಿಗಳು ಭಾಗಿಯಾಗಿದ್ದಾರೆ.

  • 21 Jun 2026 07:13 AM (IST)

    ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಯೋಗ

    12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಆಯುಷ್ ಇಲಾಖೆ ವತಿಯಿಂದ ವಿಧಾನಸೌಧ ಮುಂಭಾಗದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದ್ದು, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಆರೋಗ್ಯ ಇಲಾಖೆ ಸಚಿವ ಯು. ಟಿ. ಖಾದರ್, ಆಯುಷ್ ಇಲಾಖೆ ಆಯುಕ್ತ ಡಾ. ಸುನೀಲ್ , ಸಿನಿ ತಾರೆಯರಾದ ಸುಧಾರಾಣಿ, ವಸಿಷ್ಠ ಸಿಂಹ, ಹರಿಪ್ರಿಯ ಸೇರಿದಂತೆ ಹಲವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದಾರೆ.

  • 21 Jun 2026 07:10 AM (IST)

    ಮುಂಜಾನೆ 5 ಗಂಟೆಯಿಂದಲೇ ನಮ್ಮ ಮೆಟ್ರೋ ಸಂಚಾರ

    ವಿಶ್ವಯೋಗ ದಿನಾಚರಣೆ ಹಿನ್ನೆಲೆ ಮುಂಜಾನೆ 5ರಿಂದಲೇ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭವಾಗಿದೆ. ಉಳಿದ ದಿನಗಳಲ್ಲಿ ಭಾನುವಾರ ಬೆಳಗ್ಗೆ 7 ಗಂಟೆಗೆ ಮೆಟ್ರೋ ಓಡಾಟ ಶುರುವಾಗುತ್ತಿತ್ತು. ಆದರೆ ಇಂದು ಪ್ರಯಾಣಿಕರ ಅನುಕೂಲಕ್ಕಾಗಿ ಬೇಗ ಆರಂಭಿಸಲಾಗಿದೆ.

  • 21 Jun 2026 07:09 AM (IST)

    ಬಾಬಾ ರಾಮದೇವ್​ ನೇತೃತ್ವದಲ್ಲಿ ಯೋಗ

    ಆಂಧ್ರದ ವಿಜಯವಾಡದ ಮುನ್ಸಿಪಲ್​​ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗಿದ್ದು, ಯೋಗ ಗುರು ಬಾಬಾ ರಾಮದೇವ್​ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದೆ. ಯೋಗ ದಿನಾಚರಣೆಯಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಕೇಂದ್ರ ಸಚಿವ ರಾಮ್​ಮೋಹನ್ ನಾಯ್ಡು, ಸಚಿವ ಲೋಕೇಶ್​ ಭಾಗಿಯಾಗಿದ್ದಾರೆ.

  • 21 Jun 2026 07:07 AM (IST)

    ಕಾರ್ಯಕ್ರಮದಲ್ಲಿ 35,000 ಜನ ಭಾಗಿ

    ಕೋಲ್ಕತ್ತಾದ ರೆಡ್​ ರೋಡ್​​ನಲ್ಲಿ ನಡೆಯುತ್ತಿರುವ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸೇರಿ 35,000 ಜನ ಭಾಗಿಯಾಗಿದ್ದಾರೆ.

  • 21 Jun 2026 07:03 AM (IST)

    ಮಾನವನ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಯೋಗ ದಿವ್ಯೌಷಧ

    ಮಾನವನ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಯೋಗ ದಿವ್ಯೌಷಧ.  ಯೋಗ ಕೇವಲ ಆಸನ ಮಾತ್ರವಲ್ಲ, ಮನುಷ್ಯರನ್ನು ಒಗ್ಗೂಡಿಸುತ್ತೆ ಎಂದು ಕೋಲ್ಕತ್ತಾದಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.  ಸಮತೋಲಿತ ಜೀವನಕ್ಕಾಗಿ ಯೋಗ ಅತಿ ಮುಖ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಭಾರತ ಸರ್ಕಾರವು ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಪಶ್ಚಿಮ ಬಂಗಾಳದ ಕೊಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿ ಆಯೋಜಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್​​ ಪದಗ್ರಹಣಮಾಡುತ್ತಿದ್ದು, ಮತ್ತೊಂದೆಡೆ ದೇಶಾದ್ಯಂತ ಇಂದು ನೀಟ್​​ ಮರುಪರೀಕ್ಷೆ ನಡೆಯುತ್ತಿದೆ. ರಾಜ್ಯ, ದೇಶ, ಅಂತಾರಾಷ್ಟ್ರೀಯ, ಸಿನಿಮಾ, ಕ್ರೀಡೆ ಸೇರಿ ಈ ದಿನದ ಪ್ರಮುಖ ಸುದ್ದಿಗಳ ಹೈಲೆಟ್ಸ್​ ಇಲ್ಲಿದೆ.

Published On - Jun 21,2026 7:01 AM

Follow Us