TV9 Kannada News Live: ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಅಕ್ಸಿಜನ್ ಸಿಲಿಂಡರ್ ಸ್ಫೋಟ

Karnataka News Today Live Updates: ಕರ್ನಾಟಕದಲ್ಲಿ ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಮತ್ತೊಂದೆಡೆ, ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಮುನ್ನೆಲೆಗೆ ಬಂದಿದೆ. ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಗರಣ ಕುರಿತ ಅಪ್​ಡೇಟ್​ಗಳೂ ಸೇರಿದಂತೆ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ, ಕ್ರೀಡೆ, ಸಿನಿಮಾದ ಕ್ಷಣಕ್ಷಣದ ಮಾಹಿತಿ ಇಲ್ಲಿ ಲಭ್ಯ.

TV9 Kannada News Live: ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಅಕ್ಸಿಜನ್ ಸಿಲಿಂಡರ್ ಸ್ಫೋಟ
ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಅಕ್ಸಿಜನ್ ಸಿಲಿಂಡರ್ ಸ್ಫೋಟ
Image Credit source: tv9

Updated on: Jun 30, 2026 | 10:49 AM

LIVE NEWS & UPDATES

  • 30 Jun 2026 10:49 AM (IST)

    ಮೋದಿ ಕೈ ಕತ್ತರಿಸುತ್ತೇವೆಂದು ಪರೋಕ್ಷವಾಗಿ ಪಾಕ್ ಬೆದರಿಕೆ

    ಸಿಂಧೂ ನದಿ ಹಂಚಿಕೆ ವಿಚಾರವಾಗಿ ಪಾಕಿಸ್ತಾನ ಮತ್ತೆ ಉದ್ಧಟತನ ಮೆರೆದಿದೆ. ‘ನಮಗೆ ಸೇರಬೇಕಾದ ನೀರು ತಡೆದವರ ಕೈ ಕತ್ತರಿಸುತ್ತೇವೆ’ ಎಂದು ಪಾಕಿಸ್ತಾನದ ಹವಾಮಾನ ಬದಲಾವಣೆ ಸಚಿವ ಮುಸಾದಿಕ್ ಮಲಿಕ್ ಬೆದರಿಕೆ ಹಾಕಿದ್ದಾರೆ. ಮತ್ತಷ್ಟು ಓದಿ

  • 30 Jun 2026 09:48 AM (IST)

    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಅಕ್ಸಿಜನ್ ಸಿಲಿಂಡರ್ ಸ್ಫೋಟ

    ಚಿಗಟೇರಿಯಲ್ಲಿರುವ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಅಕ್ಸಿಜನ್ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಆಪರೇಷನ್ ಥಿಯೇಟರ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಯಿತು. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

  • 30 Jun 2026 09:42 AM (IST)

    ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಇಂದು ಉನ್ನತಾಧಿಕಾರ ಸಮಿತಿ ಸಭೆ

    ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿವಾದ ಸಂಬಂದ ಇಂದು ಮಹಾರಾಷ್ಟ್ರ ಸಿಎಂ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ಸಭೆ ನಡೆಯಲಿದೆ.
    Karnataka-Maharashtra Border Row: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಉನ್ನತಾಧಿಕಾರ ಸಮಿತಿ ಸಭೆ

  • 30 Jun 2026 09:34 AM (IST)

    ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ

    ಮಂಗಳೂರಿನ ಆಳ ಸಮುದ್ರದಲ್ಲಿ ಐಎಫ್‌ಬಿ ಮಂಜುಮಾತಾ ಮೀನುಗಾರಿಕಾ ಬೋಟ್ ಒಂದು ಮುಳುಗಿ ಅವಘಡ ಸಂಭವಿಸಿದೆ. ಸದ್ಯ ಭಾರತೀಯ ಕರಾವಳಿ ರಕ್ಷಣಾ ಪಡೆ ಆರು ಜನ ಮೀನುಗಾರರ ರಕ್ಷಣೆ ಮಾಡಿದೆ. Indian Coast Guardಗೆ ಸೇರಿದ ಐಸಿಜಿಎಸ್ ಸಚೇತ್ (ICGS Sachet) ಹಡಗಿನಿಂದ ರಕ್ಷಣಾ ಕಾರ್ಯ ನೆರವೇರಿದೆ. ಪ್ರಕ್ಷುಬ್ಧ ವಾತಾವರಣ ಹಿನ್ನೆಲೆ ಸಮುದ್ರದಲ್ಲಿ ಅವಘಡ ನಡೆದು ಬೋಟ್​​ಗೆ ನೀರು ನುಗ್ಗಿ ಅನಾಹುತವಾಗಿದೆ.

  • 30 Jun 2026 09:29 AM (IST)

    ಉಚಿತ ಸಮವಸ್ತ್ರವೇ ಹೊರೆ!

    ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ಉಚಿತ ಸಮವಸ್ತ್ರವೇ ಈಗ ಹೊರೆಯಾಗಿ ಪರಿಣಮಿಸಿದೆ. ಅದಕ್ಕೆ ಕಾರಣ, ಹೊಲಿಗೆ ವೆಚ್ಚವೇ ಹೆಚ್ಚಾಗಿರುವುದು. ಪ್ರಸ್ತುತ ಬೆಂಗಳೂರಿನಲ್ಲಿ ಒಂದು ಜೊತೆ ಶರ್ಟ್ ಹಾಗೂ ಪ್ಯಾಂಟ್ ಅಥವಾ ಚಡ್ಡಿ ಹೊಲಿಸಲು ಕನಿಷ್ಠ 1,300 ರಿಂದ 1,500 ರೂಪಾಯಿಗೂ ಅಧಿಕ ಹಣವಿದೆ. ಹೀಗಾಗಿ, ಬಟ್ಟೆ ಕೊಡುವ ಬದಲು ನಮಗೆ ದುಡ್ಡು ಕೊಟ್ಟರೆ ರೆಡಿಮೇಡ್ ಬಟ್ಟೆಯೇ ಖರೀದಿಸುತ್ತೇವೆ ಎಂಬ ಮಾತು ಪೋಷಕರಿಂದ ಕೇಳಿಬಂದಿದೆ.

  • 30 Jun 2026 09:25 AM (IST)

    ಪ್ಯಾರಿಸ್‌ನಲ್ಲಿ ಸುದೀಪ್ ‘ಈಗ’ ಚಿತ್ರಕ್ಕೆ ಭಾರಿ ಪ್ರಶಂಸೆ

    ಕಿಚ್ಚ ಸುದೀಪ್ ಅಭಿನಯದ ‘ಈಗ’ ಚಿತ್ರದ ದೃಶ್ಯವೊಂದಕ್ಕೆ ಪ್ಯಾರಿಸ್​​ನಲ್ಲಿ ಪ್ರೇಕ್ಷಕರು ಹುಚ್ಚೆದ್ದು ಸಂಭ್ರಮಿಸಿದ್ದಾರೆ. ಪ್ಯಾರಿಸ್‌ನಲ್ಲಿ ‘ಈಗ’ ಸಿನಿಮಾದ ಪ್ರದರ್ಶನ ನಡೆದಿದ್ದು, ಕ್ಲೈಮ್ಯಾಕ್ಸ್ ದೃಶ್ಯಕ್ಕೆ ಫ್ರೆಂಚ್ ಪ್ರೇಕ್ಷಕರು ಫಿದಾ ಆಗಿದ್ದಾರೆ. ಮತ್ತಷ್ಟು ಓದಿ

  • 30 Jun 2026 09:23 AM (IST)

    ಭಾರತ vs ಇಂಗ್ಲೆಂಡ್ ಟಿ20 ಸರಣಿ ನಾಳೆಯಿಂದ ಶುರು

    ಭಾರತ vs ಇಂಗ್ಲೆಂಡ್ ಟಿ20 ಸರಣಿ ಜುಲೈ ಒಂದರಿಂದ ಶುರುವಾಗಲಿದೆ. ಇದೇ ಸಂದರ್ಭದಲ್ಲಿ, ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ವಿರುದ್ಧ ಮಾಜಿ ನಾಯಕ ಸುನಿಲ್ ಗಾವಸ್ಕರ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐರ್ಲೆಂಡ್ ಪ್ರವಾಸದಲ್ಲಿ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿಗೆ ಪೆಡ್ಲರ್ಸ್ ಮೈದಾನದಲ್ಲಿ ಆಡಲು ಅವಕಾಶ ನೀಡದಿರುವುದು ಮ್ಯಾನೇಜ್‌ಮೆಂಟ್ ಮಾಡಿದ “ದೊಡ್ಡ ತಪ್ಪು” ಎಂದು ಗಾವಸ್ಕರ್ ಗುಡುಗಿದ್ದಾರೆ. ಮತ್ತಷ್ಟು ಓದಿ

  • 30 Jun 2026 09:20 AM (IST)

    ಇಂದಿನಿಂದ ಕರ್ನಾಟಕದಾದ್ಯಂತ SIR ಆರಂಭ

    ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಇಂದಿನಿಂದ (ಜೂನ್ 30) ಶುರುವಾಗಿದೆ. ಜುಲೈ 29ರವರೆಗೆ ಮೊದಲ ಹಂತದ ಪ್ರಕ್ರಿಯೆ ನಡೆಯಲಿದೆ. ಮತ್ತಷ್ಟು ಓದಿ

ಕರ್ನಾಟಕದಲ್ಲಿ ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು, ಪಾರದರ್ಶಕತೆಗಾಗಿ ಚುನಾವಣಾ ಆಯೋಗ ಹಾಗೂ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿವೆ. ಬೆಂಗಳೂರಿನಲ್ಲಿ ಸಾರ್ವಜನಿಕರ ನೆರವಿಗಾಗಿ ಕಂಟ್ರೋಲ್ ರೂಂ, ಸಹಾಯವಾಣಿ ಆರಂಭಿಸಲಾಗಿದೆ. ರಾಜ್ಯಾದ್ಯಂತ ಇದೇ ಕ್ರಮ ಅನುಸರಿಸಲಾಗುವುದು ಎಂದು ಆಯೋಗ ತಿಳಿಸಿದೆ. ಮತ್ತೊಂದೆಡೆ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ವೈರಲ್ ಆಗಿರುವ ಆಡಿಯೋ ಬಿಸಿಬಿಸಿ ರಾಜಕೀಯ ಚರ್ಚೆಗಳಿಗೆ ಗ್ರಾಸವಾಗಿದೆ. ಮತ್ತೊಂದೆಡೆ, ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಇನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ, ವೆನೆಜುವೆಲಾದ ಭೀಕರ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 1,719ಕ್ಕೆ ಏರಿಕೆಯಾಗಿದೆ. ಪ್ಯಾರಿಸ್‌ನಲ್ಲಿ ಸುದೀಪ್ ‘ಈಗ’ ಚಿತ್ರಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗಿದ್ದರೆ, ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯು ನಾಳೆಯಿಂದ (ಜುಲೈ 1) ಶುರುವಾಗಲಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳ ಲೇಟೆಸ್ಟ್ ಅಪ್​ಡೇಟ್ಸ್​ಗಾಗಿ ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Published On - 9:17 am, Tue, 30 June 26

Follow Us