
ಬೆಂಗಳೂರು, ಮೇ 22: ಬೆಂಗಳೂರಲ್ಲಿ (Bengaluru) ನಿನ್ನೆ ( ಮೇ 21) ಸುರಿದ ಧಾರಾಕಾರ ಮಳೆಯ ಅಬ್ಬರಕ್ಕೆ ನಗರದಲ್ಲಿ ಸಾಲು ಸಾಲು ಅವಾಂತರಗಳು ನಡೆದಿವೆ. ಗಾಳಿ ಮಳೆಯ ಹಿನ್ನೆಲೆ ಮಹಾಲಕ್ಷ್ಮಿ ಲೇಔಟ್ನ ಪೈಪ್ ಲೈನ್ ರಸ್ತೆಯಲ್ಲಿ ಮರ ಧರೆಗುರುಳಿದ ಪರಿಣಾಮ ರಸ್ತೆಬದಿ ನಿಲ್ಲಿಸಿದ್ದ ಮೂರು ಕಾರುಗಳು ಸಂಪೂರ್ಣ ಜಖಂ ಆಗಿವೆ. ಬಳಿಕ ಬೃಹತ್ ಗಾತ್ರದ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿ ತೆರವು ಮಾಡಿದ್ದಾರೆ. ಹಲವೆಡೆ ರಸ್ತೆಯ ಮೇಲೆಯೇ ನದಿಯಂತೆ ನೀರು ಹರಿದ ಪರಿಣಾಮ ವಾಹನಗಳ ಸಂಚಾರವೂ ಅಸ್ತವ್ಯಸ್ತಗೊಂಡ ಪ್ರಸಂಗ ನಡೆದಿದೆ.
ಇದನ್ನೂ ಓದಿ: ಮರಗಳು ಧರೆಗೆ, ನೀರು ರಸ್ತೆಗೆ; ಬೆಂಗಳೂರಿನಲ್ಲಿ ಮಳೆಯ ಅವಾಂತರಗಳು ಒಂದೆರಡಲ್ಲ
ಕಾರು ಡಿಕ್ಕಿಯಾಗಿ ಸ್ಕೂಟಿಯಲ್ಲಿದ್ದ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾರು ಚಾಲಕ ಸಿಗ್ನಲ್ ಜಂಪ್ ಮಾಡಿ ಬಂದಿದ್ದಾನೆ ಎನ್ನಲಾಗಿದ್ದು, ಘಟನೆಯಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ. ನಿನ್ನೆ ರಾತ್ರಿ 11.40ರ ಸುಮಾರಿಗೆ ಘಟನೆ ನಡೆದಿದ್ದು, ಗಾಯಾಳುವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಕಾರು ಚಾಲಕ ಕುಡಿದು ವಾಹನ ಓಡಿಸಿರುವ ಮಾಹಿತಿ ಇದ್ದು, ಘಟನೆ ಸಂಬಂಧ ಸದ್ಯ ಕಾರು ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಸಚಿವ ಸಂಪುಟಕ್ಕೆ ಇಂದು ಮತ್ತಿಬ್ಬರ ಸೇರ್ಪಡೆಯಾಗಲಿದೆ. ವಿಸಿಕೆ ಮತ್ತು ಐಯುಎಮ್ಎಲ್ ಪಕ್ಷಗಳ ತಲಾ ಒಬ್ಬ ಸಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಿನ್ನೆಯಷ್ಟೇ ಕಾಂಗ್ರೆಸ್‌ನ 2 ಶಾಸಕರು ಸೇರಿ ಒಟ್ಟು 23 ಮಂದು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಬರೋಬ್ಬರಿ 59 ವರ್ಷಗಳ ನಂತರ ಕಾಂಗ್ರೆಸ್ ತಮಿಳುನಾಡಿನಲ್ಲಿ ಸರ್ಕಾರದ ಭಾಗವಾಗಿದ್ದು, ಕಾಂಗ್ರೆಸ್‌ನ ಒಟ್ಟು 5 ಶಾಸಕರಲ್ಲಿ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿತ್ತು.
ಇದನ್ನೂ ಓದಿ: ತಮಿಳುನಾಡು ಸರ್ಕಾರದ ಸಂಪುಟ ವಿಸ್ತರಣೆ, ವಿಜಯ್ ಸಂಪುಟ ಸೇರಿದ 23 ಶಾಸಕರು, ಕಾಂಗ್ರೆಸ್ ಶಾಸಕರಿಗೂ ಸಚಿವ ಸ್ಥಾನ
2021ರ ಚುನಾವಣೆ ಬಳಿಕ ಹಿಂಸಾಚಾರದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಆರೋಪ ಸಂಬಂಧ ಬಂಗಾಳಿ ನಟರಾದ ಪರಂಬ್ರತ ಚಟ್ಟೋಪಾಧ್ಯಾಯ ಮತ್ತು ಸ್ವಸ್ತಿಕಾ ಮುಖರ್ಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 2021ರ ವಿಧಾನಸಭೆ ಚುನಾವಣಾ ಫಲಿತಾಂಶಗಳ ಬಳಿಕ ಉಂಟಾದ ಉದ್ವಿಗ್ನ ರಾಜಕೀಯ ವಾತಾವರಣದಲ್ಲಿ ಹಿಂಸೆಗೆ ಪ್ರಚೋದನೆ ನೀಡುವಂತ ಸಾಮಾಜಿಕ ಜಾಲತಾಣ ಪೋಸ್ಟ್‌ಗಳನ್ನು ನಟರು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ವಕೀಲ ಜೋಯ್‌ದೀಪ್ ಸೇನ್ ಗರಿಯಾಹಾಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:00 am, Fri, 22 May 26