AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಟೌನ್‌ಶಿಪ್‌ ವಿವಾದ; ನನ್ನ ಹೋರಾಟ ಪ್ರಾರಂಭ ಎಂದ ದೇವೇಗೌಡ; ಈ ಹೊತ್ತಿನ ಪ್ರಮುಖ ಸುದ್ದಿಗಳು

ಬಿಡದಿ ಟೌನ್‌ಶಿಪ್‌ ನಿರ್ಮಾಣಕ್ಕೆ ಸ್ಥಳೀಯ ರೈತರಿಂದ ವಿರೋಧ ವಿಚಾರವಾಗಿ ಮಾತನಾಡಿರುವ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಇದೊಂದು ದಂಧೆ, ರೈತರ ಜಮೀನನ್ನು ಇಟ್ಕೊಂಡು ದಂಧೆ ನಡೆಸುತ್ತಿದ್ದಾರೆ. ಈ ಬಗ್ಗೆ ನನ್ನ ಹೋರಾಟ ಇವತ್ತಿನಿಂದ‌ ಪ್ರಾರಂಭ ಆಗಿದೆ ಎಂದಿದ್ದಾರೆ. ಇನ್ನು ರಾಜ್ಯಾದ್ಯಂತ ವರುಣನ ಆರ್ಭಟದ ಮುನ್ಸೂಚನೆ ಇದ್ದು, ಮುಂದಿನ 4 ದಿನ ಭಾರಿ ಮಳೆ ಸಾಧ್ಯತೆ ಇದೆ. ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ.

TV9 Kannada News Live: ಟೌನ್‌ಶಿಪ್‌ ವಿವಾದ; ನನ್ನ ಹೋರಾಟ ಪ್ರಾರಂಭ ಎಂದ ದೇವೇಗೌಡ; ಈ ಹೊತ್ತಿನ ಪ್ರಮುಖ ಸುದ್ದಿಗಳು
ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡImage Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on:May 16, 2026 | 10:17 PM

Share

ಬೆಂಗಳೂರು, ಮೇ 16: ಬಿಡದಿ ಟೌನ್‌ಶಿಪ್‌ (Bidadi Township) ನಿರ್ಮಾಣಕ್ಕೆ ಸ್ಥಳೀಯ ರೈತರ ಜಮೀನನ್ನು ಇಟ್ಕೊಂಡು ದಂಧೆ ನಡೆಸುತ್ತಿದ್ದಾರೆ. ಕನಕಪುರದಲ್ಲಿ ಎಷ್ಟು ಜಮೀನು ವಶಪಡಿಸಿಕೊಂಡಿದ್ದಾರೆಂಬ ಮಾಹಿತಿ ಇದೆ. ಬಿಡದಿಯಲ್ಲಿ ಕಣ್ಣೀರು ಹಾಕ್ತಿದ್ದಾರೆ, ನಾನು ಸಿಎಂಗೆ ಪತ್ರ ಬರೆದಿದ್ದೇನೆ. ನನ್ನ ಹೋರಾಟ ಇವತ್ತಿನಿಂದ‌ ಪ್ರಾರಂಭ ಆಗಿದೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Deve Gowda) ಹೇಳಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳದೆ ವಾಗ್ದಾಳಿ ಮಾಡಿದ ಹೆಚ್‌ಡಿ ದೇವೇಗೌಡ

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಬಿಡದಿ ಬಳಿ ಹೋಗೋಣ, ನಾನು ಬರ್ತೀನಿ, ಸಿದ್ದರಾಮಯ್ಯ ನೀವು ಬನ್ನಿ. ಸ್ಥಳೀಯ ಶಾಸಕರು, ತಹಶೀಲ್ದಾರ್‌ ಇಲ್ಲಿಯವರೆಗೂ ಜನರ ಸಮಸ್ಯೆ ಕೇಳಿಲ್ಲ. ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರು ಹೇಳದೆ ತೀವ್ರ ವಾಗ್ದಾಳಿ ಮಾಡಿದ ಅವರು ಕನಕಪುರದಲ್ಲಿ ಎಷ್ಟು ಜಮೀನು ವಶಪಡಿಸಿಕೊಂಡಿದ್ದಾರೆಂಬ ಮಾಹಿತಿ ಇದೆ ಎಂದರು. ಸ್ಥಳಕ್ಕೆ ಹೋಗ್ತೀನಿ, ರೈತರು ಹೊಡೆದ್ರೂ ಹೊಡೆಸಿಕೊಳ್ಳುತ್ತೇನೆ ಎಂಬ ಡಿಕೆ ಶಿವಕುಮಾರ್​ ಹೇಳಿಕೆಗೆ ಕೌಂಟರ್ ನೀಡಿದ ದೇವೇಗೌಡರು, ಅವರು ಹೋಗಿ ರೈತರಿಂದ ಹೊಡೆಸಿಕೊಂಡು ಬರಲಿ, ಆಮೇಲೆ ಮಾತಾಡ್ತೇನೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಬಿಡದಿ ಟೌನ್‌ಶಿಪ್‌: ಜಮೀನು ಕೊಟ್ಟವರಿಗೆ 2 ಕೋಟಿ ಅಥವಾ 50*50 ನಿವೇಶನ: ರೈತರಿಗೆ ಡಿಕೆಶಿ ಆಫರ್

ಬೆಂಗಳೂರಿನಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ಮಾಗಡಿ, ಹೊಸಕೋಟೆ ಸೇರಿ ಬೆಂಗಳೂರು ಅಕ್ಕಪಕ್ಕದಲ್ಲಿ 5 ಟೌನ್‌ಶಿಪ್‌ಗಳನ್ನು ನಿರ್ಮಿಸಲು ಅಂದಿನ ಸಿಎಂ ಕುಮಾರಸ್ವಾಮಿ ಮುಂದಾಗಿದ್ದರು. ಆದರೆ ರೈತರು, ಸಾರ್ವಜನಿಕ ವಿರೋಧ ಹಿನ್ನೆಲೆ ಪ್ರಾಜೆಕ್ಟ್ ಕೈಬಿಡುತ್ತಾರೆ. ಈಗ ಬೇರೆ ಬೇರೆ ಪ್ರಾಜೆಕ್ಟ್ ಬಂದಿದೆ ಎಂದರು.

ಬಿಡಿಎನಲ್ಲಿ ಅಕ್ರಮ ನಡೆದಿದೆ, ಅದರ ಬಗ್ಗೆಯೂ ಹೋರಾಟ ಮಾಡುತ್ತೇನೆ: ದೇವೇಗೌಡ

ಬಿಡದಿ ಸುತ್ತಮುತ್ತ ದೊಡ್ಡ ಮಟ್ಟದಲ್ಲಿ ಹೈನುಗಾರಿಕೆ ಮಾಡ್ತಿದ್ದಾರೆ. ಈ ಭಾಗಕ್ಕೆ 250 ಕೋಟಿ ವೆಚ್ಚದ ನೀರಾವರಿ ಯೋಜನೆ ತಂದಿದ್ದಾರೆ. ಇಂತಹ ನೀರಾವರಿ ಜಾಗವನ್ನು ಸ್ವಾಧೀನ ಮಾಡಿಕೊಳ್ಳಲು ರಾಷ್ಟ್ರೀಯ ಪಕ್ಷದ ಅಧ್ಯಕ್ಷರು ಮುಂದಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ನನ್ನ ಜೊತೆಗೆ ಕೆಲಸ ಮಾಡಿದ್ದೀರಿ, ಬಡವರು, ಹಿಂದುಳಿದವರಿಗೆ ಸಾಮಾಜಿಕ ನ್ಯಾಯ ಕೊಡಬಾರದಾ? ಬೆಂಗಳೂರು ಹೊಣೆಗಾರಿಕೆ ಹೊತ್ತಿರುವ ಡಿಸಿಎಂ ಡಿಕೆ ಶಿವಕುಮಾರ್​ ಒತ್ತಡಕ್ಕೆ ಮಣಿದು ಜನ ಸಾಮಾನ್ಯರಿಗೆ ಆಗುತ್ತಿರುವ ಅನ್ಯಾಯ ತಡೆಗಟ್ಟಲು ಆಗುತ್ತಿಲ್ಲವಾ ಎಂದು ಪ್ರಶ್ನಿಸಿದರು. ಬಿಡಿಎನಲ್ಲಿ ಅಕ್ರಮ ನಡೆದಿದೆ, ಅದರ ಬಗ್ಗೆಯೂ ಹೋರಾಟ ಮಾಡುತ್ತೇನೆ ಎಂದರು.

ರಾಜ್ಯಾದ್ಯಂತ ವರುಣನ ಆರ್ಭಟದ ಮುನ್ಸೂಚನೆ: ಮುಂದಿನ 4 ದಿನ ಭಾರಿ ಮಳೆ

ಬಿಸಿಲಿನ ಬೇಗೆಯ ನಡುವೆ ರಾಜ್ಯದ ಜನತೆಗೆ ವರುಣನ ಆರ್ಭಟದ ಮುನ್ಸೂಚನೆ ಸಿಕ್ಕಿದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದೆ. ಮೇ 16ರಿಂದ ಮೇ 19 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ 64.5mm ನಿಂದ 115.5mm ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಇದನ್ನೂ ಓದಿ: Weather Forecast: ಇಂದಿನಿಂದ 4 ದಿನ ರಾಜ್ಯದ ಈ ಭಾಗಗಳಲ್ಲಿ ಭಾರಿ ಮಳೆ: ಆಲಿಕಲ್ಲು ಮಳೆ , ಬಿರುಗಾಳಿಯ ಮುನ್ನೆಚ್ಚರಿಕೆ!

ಮತ್ತೊಂದೆಡೆ, ಉತ್ತರ ಒಳನಾಡಿನಲ್ಲಿ ಗುಡುಗು, ಸಿಡಿಲು ಹಾಗೂ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಆ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಮತ್ತು ರೈತರು ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಇಲಾಖೆ ಸೂಚಿಸಿದೆ.

ಸಿಎಂ ಚಂದ್ರಬಾಬು ನಾಯ್ಡು ಬಂಪರ್ ಆಫರ್: 3ನೇ ಮಗುವಿಗೆ 30 ಸಾವಿರ, 4ನೇ ಮಗುವಿಗೆ 40 ಸಾವಿರ ರೂ.!

ಆಂಧ್ರಪ್ರದೇಶದಲ್ಲಿ ಕುಸಿಯುತ್ತಿರುವ ಜನನ ದರ ಹಾಗೂ ವಯಸ್ಸಾದವರ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಿಎಂ ಎನ್. ಚಂದ್ರಬಾಬು ನಾಯ್ಡು, ರಾಜ್ಯದಲ್ಲಿ ಜನಸಂಖ್ಯಾ ಬೆಳವಣಿಗೆಯನ್ನು ಉತ್ತೇಜಿಸಲು ಅತ್ಯಂತ ಕುತೂಹಲಕಾರಿ ಮತ್ತು ವಿನೂತನ ಯೋಜನೆಯೊಂದನ್ನು ಪ್ರಕಟಿಸಿದ್ದಾರೆ. ನರಸನ್ನಪೇಟೆಯಲ್ಲಿ ಶನಿವಾರ ನಡೆದ ‘ಸ್ವರ್ಣ ಆಂಧ್ರ-ಸ್ವಚ್ಛ ಆಂಧ್ರ’ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಯಾವುದೇ ಕುಟುಂಬದಲ್ಲಿ ಮೂರನೇ ಮಗುವಿನ ಜನನವಾದರೆ ಆ ಕುಟುಂಬಕ್ಕೆ ಸರ್ಕಾರದಿಂದ 30 ಸಾವಿರ ರೂ ಹಾಗೂ ನಾಲ್ಕನೇ ಮಗುವಿನ ಜನನಕ್ಕೆ 40 ಸಾವಿರ ರೂ ನಗದು ಪ್ರೋತ್ಸಾಹ ಧನ ನೀಡಲಾಗುವುದು ಎಂದು ಮಹತ್ವದ ಘೋಷಣೆ ಮಾಡಿದ್ದಾರೆ.

ಇನ್ಮುಂದೆ ಬೆಳ್ಳಿ ಬಾರ್‌ ಆಮದಿಗೆ ವಿಶೇಷ ಪರವಾನಗಿ ಕಡ್ಡಾಯ

ಇನ್ಮುಂದೆ ದೇಶಕ್ಕೆ ಆಮದು ಮಾಡಿಕೊಳ್ಳಲಾಗುವ ಬೆಳ್ಳಿ ಬಾರ್‌ಗಳ ಮೇಲಿನ ನಿಯಮಗಳನ್ನು ಕೇಂದ್ರ ಸರ್ಕಾರವು ಕಠಿಣಗೊಳಿಸಿದ್ದು, ಆಮದಿಗೆ ಕಡ್ಡಾಯ ನಿರ್ಬಂಧಗಳನ್ನು ಹೇರಲಾಗಿದೆ. ಈವರೆಗೂ ಭಾರತಕ್ಕೆ ಸಿಲ್ವರ್ ಬಾರ್ಸ್ ಆಮದು ಮಾಡಿಕೊಳ್ಳುವುದರ ಮೇಲೆ ಯಾವುದೇ ರೀತಿಯ ಕಠಿಣ ನಿರ್ಬಂಧಗಳು ಇರಲಿಲ್ಲ. ಆದರೆ, ಕೇಂದ್ರ ವಾಣಿಜ್ಯ ಸಚಿವಾಲಯದ ನೂತನ ಆದೇಶದ ಪ್ರಕಾರ, ಇನ್ನು ಮುಂದೆ ವಿದೇಶಗಳಿಂದ ಬೆಳ್ಳಿ ಬಾರ್ ಆಮದು ಮಾಡಿಕೊಳ್ಳಲು ವಿಶೇಷ ಪರವಾನಗಿ ಕಡ್ಡಾಯವಾಗಿದೆ. ವಿಶೇಷವಾಗಿ 99.9% ಅತ್ಯಂತ ಶುದ್ಧತೆಯ ಬೆಳ್ಳಿ ಬಾರ್ ಆಮದಿಗೆ ಈ ಪರವಾನಗಿ ನಿಯಮವನ್ನು ಕಡ್ಡಾಯವಾಗಿ ಅನ್ವಯಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:15 pm, Sat, 16 May 26

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!