TV9 Karnataka Summit 2023; ಗ್ಯಾರಂಟಿಗಳ ಜಾರಿಯಿಂದ ರಾಜ್ಯ ದಿವಾಳಿಯಾಗೋದು ಸಾಧ್ಯವೇ ಇಲ್ಲ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Sep 15, 2023 | 1:56 PM

ಕನಸಿನ ಕರುನಾಡು ಟಿವಿ9 ಸಮ್ಮಿಟ್ 2023: ರಾಜ್ಯದ ಎಲ್ಲ ಸಮುದಾಯಗಳ ನಡುವೆ ಶಾಂತಿ ಸೌಹಾರ್ದತೆ ನೆಲೆಸುವಂತೆ ಮಾಡುವುದರ ಜೊತೆಗೆ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದಕ್ಕೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ಸಮಾಜಕ್ಕೆ ಉತ್ತಮ ಸೇವೆ ಒದಗಿಸುತ್ತಿರುವ ಮತ್ತು ಟಿವಿ9 ಶೃಂಗಸಭೆ ಆಯೋಜಿಸಿರುವ ಟಿವಿ9 ವಾಹಿನಿಯ ಇಡೀ ತಂಡಕ್ಕೆ ಅವರು ಧನ್ಯವಾದ ಸಲ್ಲಿಸಿದರು.

ಬೆಂಗಳೂರು: ನಗರದ ಲಲಿತ ಅಶೋಕ ಹೋಟೆಲ್ ನಲ್ಲಿ ಏರ್ಪಡಿಸಲಾಗಿರುವ ‘ಕನಸಿನ ಕರುನಾಡು ಟಿವಿ9 ಸಮ್ಮಿಟ್ 2023’ (TV9 Karnataka Summit 2023) ಉದ್ಘಾಟಿಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸರ್ಕಾರ ಘೋಷಿಸಿರುವ 5 ಗ್ಯಾರಂಟಿಗಳ (5 guarantees) ಅನುಷ್ಠಾನದಿಂದ ರಾಜ್ಯ ದಿವಾಳಿಯಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಆತ್ಮವಿಶ್ವಾಸದಿಂದ ಹೇಳಿದರು. ಗ್ಯಾರಂಟಿಗಳನ್ನು ಜಾರಿಗೊಳಿಸಿದ ಬಳಿಕ ರಾಜ್ಯ ದಿವಾಳಿಯಾಗುತ್ತದೆ, ಅಭಿವೃದ್ಧಿ ಕೆಲಸಗಳು ನಿಂತುಹೋಗುತ್ತವೆ ಅಂತ ವಿರೋಧ ಪಕ್ಷಗಳ ಜನರ ಮನಸ್ಸಿನಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಿದ್ದವು. ಆದರೆ, ಅಂಥದ್ದೇನೂ ಆಗದು, ತಮ್ಮ ಸರ್ಕಾರ ಎಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತದೆ, ಯಾವುದೇ ಅಭಿವೃದ್ಧಿ ಯೋಜನೆಯನ್ನು ಕೈ ಬಿಡುವುದಿಲ್ಲ ಮತ್ತು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗುತ್ತದೆ ಎಂದು ಟಿವಿ9 ಶೃಂಗಸಭೆಯಲ್ಲಿ ಸ್ಪಷ್ಟಪಡಿಸುವುದಾಗಿ ಸಿದ್ದರಾಮಯ್ಯ ಹೇಳಿದರು. ರಾಜ್ಯದ ಎಲ್ಲ ಸಮುದಾಯಗಳ ನಡುವೆ ಶಾಂತಿ ಸೌಹಾರ್ದತೆ ನೆಲೆಸುವಂತೆ ಮಾಡುವುದರ ಜೊತೆಗೆ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದಕ್ಕೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ಸಮಾಜಕ್ಕೆ ಉತ್ತಮ ಸೇವೆ ಒದಗಿಸುತ್ತಿರುವ ಮತ್ತು ಟಿವಿ9 ಶೃಂಗಸಭೆ ಆಯೋಜಿಸಿರುವ ಟಿವಿ9 ವಾಹಿನಿಯ ಇಡೀ ತಂಡಕ್ಕೆ ಅವರು ಧನ್ಯವಾದ ಸಲ್ಲಿಸಿದರು. ರಾಜದ ನಾನಾ ಕ್ಷೇತ್ರಗಳ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.