TV9 Karnataka Summit 2023: ಬೆಂಗಳೂರಿನಲ್ಲಿ ನಾಳೆ ಕನಸಿನ ಕರುನಾಡು ಟಿವಿ9 ಸಮ್ಮಿಟ್; ಸಿಎಂ, ಡಿಸಿಎಂ ಸೇರಿ ಗಣ್ಯರು ಭಾಗಿ
ಕನಸಿನ ಕರುನಾಡು ಟಿವಿ9 ಸಮ್ಮಿಟ್ 2023: ಕಾಂಗ್ರೆಸ್ ಸರ್ಕಾರಕ್ಕೆ ನೂರು ದಿನಗಳು ತುಂಬಿರುವ ಪ್ರಯುಕ್ತ ‘ಟಿವಿ9’ ವಾಹಿನಿಯು ಶುಕ್ರವಾರ ಇಡೀ ದಿನ ‘ಕನಸಿನ ಕರುನಾಡು, ಕರ್ನಾಟಕ ಸ್ಟೇಟ್ ಸಮ್ಮಿಟ್ 2023’ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಪ್ರಮುಖ ನಾಯಕರು, ವಿವಿಧ ಕ್ಷೇತ್ರದ ಪರಿಣಿತರು, ಹೆಸರಾಂತ ಗಣ್ಯರು ‘ಟಿವಿ9’ನ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 14: ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ (Karnataka Congress Government) ನೂರು ದಿನಗಳು ತುಂಬಿರುವ ಪ್ರಯುಕ್ತ ‘ಟಿವಿ9’ ವಾಹಿನಿಯು ಸೆಪ್ಟೆಂಬರ್ 15ರ ಶುಕ್ರವಾರ ಇಡೀ ದಿನ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ‘ಕನಸಿನ ಕರುನಾಡು, ಕರ್ನಾಟಕ ಸ್ಟೇಟ್ ಸಮ್ಮಿಟ್ 2023 (Karnataka State Summit)’ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು, ವಿವಿಧ ಕ್ಷೇತ್ರದ ಪರಿಣಿತರು, ಹೆಸರಾಂತ ಗಣ್ಯರು ‘ಟಿವಿ9’ನ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮಾತ್ರವಲ್ಲದೆ, ಸಚಿವರಾದ ಕೆಜೆ ಜಾರ್ಜ್, ರಾಮಲಿಂಗಾ ರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್, ಡಾ. ಜಿ. ಪರಮೇಶ್ವರ, ಎಂಬಿ ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ, ಮಧು ಬಂಗಾರಪ್ಪ, ಬಿಜೆಪಿ ನಾಯಕ ಅಶ್ವತ್ಥನಾರಾಯಣ, ಮಾಜಿ ಕ್ರಿಕೆಟಿಗ ಸಯ್ಯದ್ ಕೀರ್ಮಾನಿ, ಅಂತಾರಾಷ್ಟ್ರೀಯ ಹಾಕಿ ಆಟಗಾರ ಆಶಿಷ್ ಬಲ್ಲಾಳ್, ಅಂತಾರಾಷ್ಟ್ರೀಯ ಕ್ರೀಡಾಪಟು ಅರ್ಜುನ್ ದೇವಯ್ಯ, ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ, ನಟಿ ಶಾನ್ವಿ ಶ್ರೀವಾಸ್ತವ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಶುಕ್ರವಾರ ಇಡೀ ದಿನ ನಡೆಯಲಿರುವ ಕಾರ್ಯಕ್ರಮ ‘ಟಿವಿ9’ ಕನ್ನಡ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದ್ದು, ‘ಟಿವಿ9 ಕನ್ನಡ ಡಿಜಿಟಲ್’ನಲ್ಲಿಯೂ ಕ್ಷಣಕ್ಷಣದ ಮಾಹಿತಿ ಜನರಿಗೆ ಸಿಗಲಿದೆ.
ಇದನ್ನೂ ಓದಿ: ರಾಮನಗರ: ಮಳೆ ಬಂದ್ರೆ ಶಾಲೆ ಸೋರುತ್ತೆ, ನಮ್ಮ ಶಾಲೆಯನ್ನು ಸರಿಪಡಿಸಿ ಕೊಡಿ ಎಂದು ಸಿಎಂಗೆ ಮಕ್ಕಳ ಮನವಿ
ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಐದು ಉಚಿತ ಗ್ಯಾರಂಟಿಗಳ ಪೈಕಿ ಸ್ತ್ರೀಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ, ಬಿಪಿಎಲ್ ಕಾರ್ಡ್ದಾರರಿಗೆ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯನ್ನು ಆರಂಭದಲ್ಲೇ ಅನುಷ್ಠಾನಗೊಳಿಸಲಾಗಿದ್ದು, ಇತ್ತೀಚೆಗಷ್ಟೇ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:04 pm, Thu, 14 September 23