ಅಪರಿಚಿತ ವಾಹನಕ್ಕೆ ಪಟ್ಟಣ ಪಂಚಾಯ್ತಿ ಸದಸ್ಯ ಬಲಿ

ವಿಜಯಪುರ ಜಿಲ್ಲೆ ಕೊಲ್ಹಾರದ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಟ್ಟಣ ಪಂಚಾಯ್ತಿ ಸದಸ್ಯನೊಬ್ಬ ಅಸುನೀಗಿದ್ದಾನೆ. ಬೈಕ್​ನಲ್ಲಿ ತೆರಳ್ತಿದ್ದ ವೇಳೆ ಸುರೇಶ ಕಾಳೆ ಎಂಬಾತನಿಗೆ ವಾಹನ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಬಗ್ಗೆ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈರುಳ್ಳಿ ತುಂಬಿದ್ದ ಲಾರಿ ಪಲ್ಟಿ: ಬಾಗಲಕೋಟೆ ಜಿಲ್ಲೆ ಬಾದಾಮಿಯ ಕೋಣಮ್ಮನ ಗುಡಿ ಬಳಿ ಈರುಳ್ಳಿ ತುಂಬಿದ್ದ ಲಾರಿಯೊಂದು ಪಲ್ಟಿ ಹೊಡೆದಿದೆ. ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದು ಲಾರಿ ಮಗುಚಿಕೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪಲ್ಟಿ […]

ಅಪರಿಚಿತ ವಾಹನಕ್ಕೆ ಪಟ್ಟಣ ಪಂಚಾಯ್ತಿ ಸದಸ್ಯ ಬಲಿ
Follow us
ಸಾಧು ಶ್ರೀನಾಥ್​
|

Updated on: Dec 02, 2019 | 2:45 PM

ವಿಜಯಪುರ ಜಿಲ್ಲೆ ಕೊಲ್ಹಾರದ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಟ್ಟಣ ಪಂಚಾಯ್ತಿ ಸದಸ್ಯನೊಬ್ಬ ಅಸುನೀಗಿದ್ದಾನೆ. ಬೈಕ್​ನಲ್ಲಿ ತೆರಳ್ತಿದ್ದ ವೇಳೆ ಸುರೇಶ ಕಾಳೆ ಎಂಬಾತನಿಗೆ ವಾಹನ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಬಗ್ಗೆ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಈರುಳ್ಳಿ ತುಂಬಿದ್ದ ಲಾರಿ ಪಲ್ಟಿ: ಬಾಗಲಕೋಟೆ ಜಿಲ್ಲೆ ಬಾದಾಮಿಯ ಕೋಣಮ್ಮನ ಗುಡಿ ಬಳಿ ಈರುಳ್ಳಿ ತುಂಬಿದ್ದ ಲಾರಿಯೊಂದು ಪಲ್ಟಿ ಹೊಡೆದಿದೆ. ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದು ಲಾರಿ ಮಗುಚಿಕೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪಲ್ಟಿ ಹೊಡೆದ ಲಾರಿ ಬಾದಾಮಿ ಮಾರ್ಗವಾಗಿ ಹಾಸನಕ್ಕೆ ಹೊರಟಿತ್ತು.

ದೇಗುಲದ ಹುಂಡಿಗೆ ಕನ್ನ: ತುಮಕೂರು ತಾಲೂಕಿನ ಚಿಕ್ಕಯ್ಯನಪಾಳ್ಯ ಮತ್ತು ಲಕ್ಕೆನಹಳ್ಳಿ ಗ್ರಾಮಗಳಲ್ಲಿ ದುಷ್ಕರ್ಮಿಗಳು ದೇವಾಲಯದ ಹುಂಡಿ ಹಣಕ್ಕೆ ಕನ್ನ ಹಾಕಿದ್ದಾರೆ. ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇಗುಲದಲ್ಲಿ ಸುಮಾರು 2 ಲಕ್ಷ ಹಣ ಕದ್ದೊಯ್ದಿದ್ದಾರೆ. ಅಲ್ಲದೆ, ಲಕ್ಷ್ಮೀ ಮಾರಮ್ಮ ದೇವಾಲಯದಲ್ಲಿ ಅಂದಾಜು 1ಲಕ್ಷ ರೂಪಾಯಿ ದೋಚಿದ್ದಾರೆ.

ನಕಲಿ ಲೈನ್​ಮನ್’​ಗಳು ಅರೆಸ್ಟ್: ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಗಿಟ್ಟಿಸಿದ್ದ ನಾಲ್ವರನ್ನ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎಸ್‌ಎಸ್‌ಎಲ್‌ಸಿ ನಕಲಿ ಅಂಕಪಟ್ಟಿ ನೀಡಿ ಕಪಿಟಿಸಿಎಲ್​ನಲ್ಲಿ ಲೈನ್‌ಮನ್​ಗಳಾಗಿ ಬಂಧಿತ ಆರೋಪಿಗಳು ಸೇರಿದ್ರು. ಸದ್ಯ ನಾಲ್ವರು ವಂಚಕರ ವಿರುದ್ಧ ದೂರು ದಾಖಲಾಗಿದೆ.

ಸಮಸ್ಯೆ ಪರಿಹಾರಕ್ಕೆ ಪ್ರತಿಭಟನೆ: ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಗಲ್​ನಲ್ಲಿ ವಿವಿಧ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಮೋರ್ಚಾ ಪ್ರತಿಭಟನೆ ನಡೆಸಿದೆ. ಕುಡಿಯೋ ನೀರು ಸೇರಿ ಮೂಲ ಸೌಲಭ್ಯಗಳ ಕೊರತೆಯಿದೆ. ಹೀಗಿದ್ರೂ ಯಾರೂ ಸಮಸ್ಯೆ ಆಲಿಸ್ತಿಲ್ಲ ಅಂತಾ ಗರಂ ಆದ್ರು. ಬಳಿಕ ತಾಲೂಕು ಪಂಚಾಯ್ತಿ ಸಿಇಒ ಸಮಸ್ಯೆ ಪರಿಹಾರದ ಭರವಸೆ ಕೊಟ್ರು.

ಅಪಾಯದ ರಸ್ತೆಗೆ ಬೇಕಿದೆ ದುರಸ್ತಿ: ಬೀದರ್ ತಾಲೂಕಿನ ಯಾಕತಪುರ-ತಡಪಳ್ಳಿ ಗ್ರಾಮಗಳನ್ನ ಸಂಪರ್ಕಿಸೋ ರಸ್ತೆ ಅಪಾಯಕ್ಕೆ ಆಹ್ವಾನ ನೀಡ್ತಿದೆ. ಸೇತುವೆ ಮಧ್ಯೆ ರಸ್ತೆ ಕುಸಿದಿದ್ದು, ಕೆಲ ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದಾರೆ. ವೇಗವಾಗಿ ಬರೋ ವಾಹನಗಳಿಗೂ ರಸ್ತೆ ಕಂಟಕವಾಗಿದ್ದು, ಸ್ಥಳೀಯರು ರಸ್ತೆ ದುರಸ್ತಿಗೆ ಆಗ್ರಹಿಸಿದ್ದಾರೆ.

ಕುಡುಕರ ಅಡ್ಡೆಯಾದ ‘ಹಸಿರ ಸಿರಿ’: ಚಿತ್ರದುರ್ಗ ಬಳಿಯ ಜೋಗಿಮಟ್ಟಿ ಅರಣ್ಯ ಪ್ರದೇಶದ ಅನೈತಿಕ ತಾಣವಾಗಿ ಮಾರ್ಪಾಡಾಗ್ತಿದೆ. ಹಸಿರ ಸಿರಿ ಹೊದ್ದು ಜೋಗಿಮಟ್ಟಿ ಪ್ರವಾಸಿಗರನ್ನ ಸೆಳೆಯುತ್ತಿದೆ. ಆದ್ರೆ ಪ್ರವೇಶ ದ್ವಾರದ ಬಳಿಯಿರೋ ಬಯಲು ಕುಡುಕರ ಅಡ್ಡೆಯಾಗಿದೆ. ಹೀಗಾಗಿ ಅಧಿಕಾರಿಗಳು ಕುಡುಕರಿಗೆ ಕಡಿವಾಣ ಹಾಕಬೇಕಿದೆ ಅಂತಾ ಪರಿಸರ ಪ್ರಿಯರು ಒತ್ತಾಯಿಸಿದ್ದಾರೆ.

ಅಂತಾರಾಷ್ಟ್ರೀಯ ಕುಸ್ತಿ ಸ್ಪರ್ಧೆಗೆ ಆಯ್ಕೆ: ದಾವಣಗೆರೆ ನಗರದ ಕ್ರೀಡಾ ಹಾಸ್ಟೆಲ್‌ನ ಕುಸ್ತಿಪಟುವೊಬ್ಬರು ಅಂತಾರಾಷ್ಟ್ರೀಯ ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕುಸ್ತಿಪಟು ಅರ್ಜುನ್ ರಾಷ್ಟ್ರೀಯ ಕುಸ್ತಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ಈ ಸಾಧನೆ ಮಾಡಿದ್ದಾರೆ. ಪಂಜಾಬ್‌ನ ಅಮೃತಸರದಲ್ಲಿ ನಡೆದ ಕುಸ್ತಿಸ್ಪರ್ಧೆಯಲ್ಲಿ ಹರಿಯಾಣದ ಅಜಯ್ ವಿರುದ್ಧ 8-0 ಅಂತರದಲ್ಲಿ ಜಯಿಸಿದ್ದಾರೆ.

ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಸಮ್ಮೇಳನ: ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿಂದು ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಸಮ್ಮೇಳನ ನಡೆಯಿತು. ಈ ವೇಳೆ ಸದ್ಯ ಸ್ಥಿತಿಯಲ್ಲಿ ಬ್ಯಾಂಕಿಂಗ್ ಕ್ಷೇತ್ರ ಎದುರಿಸುತ್ತಿರೋ ಸಮಸ್ಯೆ ಮತ್ತು ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲಾಯ್ತು. ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಬ್ಯಾಂಕ್ ಸಿಬ್ಬಂದಿ ಸಮ್ಮೇಳನದಲ್ಲಿ ಭಾಗಿಯಾಗಿದ್ರು.

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ