ಟಿವಿ9 ವರದಿ ಫಲಶೃತಿ: ಗೌರಿ ಗಣೇಶ ಹಬ್ಬಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಬಿಡುಗಡೆ
ಬೆಂಗಳೂರು ಗ್ರಾಮಾಂತರದಲ್ಲಿ ಕೋಲಾರ ಸೇರಿದಂತೆ ಹಲವು ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ಮೂರು ನಾಲ್ಕು ತಿಂಗಳಿಂದ ಗೌರವಧನ ಬಂದಿಲ್ಲ. ಹೀಗಾಗಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪರದಾಡಿದ್ದರು. ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡುತ್ತಿದ್ದಂತೆ ಎಚ್ಚೆತ್ತ ಮಹಿಳಾ ಮತ್ತು ಮಕ್ಕಳ ಇಲಾಖೆ ಅಂಗನವಾಡಿ ಕಾರ್ಯ ಕರ್ತೆಯರಿಗೆ ಒಂದು ತಿಂಗಳ ಗೌರವಧನ ಬಿಡುಗಡೆ ಮಾಡಿದೆ.
ದೇವನಹಳ್ಳಿ, ಸೆಪ್ಟೆಂಬರ್ 05: ಕಳೆದ ಮೂರು ನಾಲ್ಕು ತಿಂಗಳಿಂದ ಗೌರವಧನ ಬಾರದೆ ಅಂಗನವಾಡಿ (Anganwadi) ಕಾರ್ಯಕರ್ತೆಯರು ಪರದಾಡುತ್ತಿದ್ದ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿದ್ದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ನಮಗೆ ಸಂಬಳ ಬಂದರೆ ಇನ್ನೂ ಅನುಕೂಲವಾಗುತ್ತೆ ಅಂತ ಅಂಗನವಾಡಿ ಕಾರ್ಯಕರ್ತೆಯರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕೋಲಾರ ಸೇರಿದಂತೆ ಹಲವು ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನದ ಜೊತೆಗೆ ಮೊಟ್ಟೆ ಬಿಲ್ ಪಾವತಿಯಾಗದ ಕಾರಣ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪರದಾಟ ಅನುಭವಿಸುತ್ತಿದ್ದರು. ಹೀಗಾಗೆ ಅಂಗನವಾಡಿ ಕಾರ್ಯಕರ್ತೆಯರ ಪರದಾಟದ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡುತ್ತಿದ್ದಂತೆ ಎಚ್ಚೆತ್ತ ಮಹಿಳಾ ಮತ್ತು ಮಕ್ಕಳ ಇಲಾಖೆ ಇದೀಗ ಅಂಗನವಾಡಿ ಕಾರ್ಯ ಕರ್ತೆಯರಿಗೆ ಒಂದು ತಿಂಗಳ ಗೌರವಧನ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಯಾದಗಿರಿಯಲ್ಲಿ ಅಂಗನವಾಡಿಯ ಕರ್ಮಕಾಂಡ ಬಯಲು: ಕಾರ್ಯಕರ್ತೆಯಿಂದ ಕಾಳಸಂತೆಯಲ್ಲಿ ಆಹಾರ ಪದಾರ್ಥಗಳ ಮಾರಾಟ
ಜೊತೆಗೆ ಉಳಿದು ಎರಡು ಮೂರು ತಿಂಗಳ ಸಂಬಳವು ಶೀಘ್ರದಲ್ಲೇ ಬಿಡುಗಡೆ ಮಾಡುವ ಭರವಸೆ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೂ ಗೌರಿ ಗಣೇಶ ಹಬ್ಬಕ್ಕೆ ಸಂಬಳವಿಲ್ಲದೆ ಪರದಾಡುತ್ತಿದ್ದ ನಮಗೆ ಟಿವಿನೈನ್ ವರದಿಯಿಂದ ಒಂದು ತಿಂಗಳ ಸಂಬಳ ಬಿಡುಗಡೆಯಾಗಿದ್ದಕ್ಕೆ ಟಿವಿ9 ಗೆ ಧನ್ಯವಾದ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ವಿಳಂಬ
ವಿಜಯಪುರ: ಜಿಲ್ಲೆಯಲ್ಲಿ ಕೂಡ ಅಂಗವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಗೆ ಕಳೆದ ಎರಡು ತಿಂಗಳುಗಳಿಂದ ಸಂಬಳ ಇಲ್ಲದೇ ಪರದಾಡುವಂತಾಗಿದೆ. ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದು ಇದೇ ಸಂಬಳ ನೆಚ್ಚಿಕೊಂಡು ಸಂಸಾರ ನಡೆಸುತ್ತಿರುವ ಇವರಿಗೆ ಸರ್ಕಾರದಿಂದ ಎರಡು ತಿಂಗಳುಗಳಿಂದ ಸಂಬಳ ಬಂದಿಲ್ಲ.
ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಕೈ ಸೇರದ 3 ತಿಂಗಳ ಗೌರವ ಧನ, 1 ವರ್ಷದಿಂದ ಸರ್ಕಾರ ಅನುದಾನ ನೀಡಿಲ್ಲ ಎಂದ ಅಧಿಕಾರಿಗಳು
ಹಾಗೂ ಹೀಗೂ ಮಾಡಿಕೊಂಡು ಬದುಕಿನ ಬಂಡಿಯನ್ನು ಎಳೆಯುತ್ತಿದ್ದಾರೆ. ಇದರ ನಡುವೆ ವಿಜಯಪುರ ಜಿಲ್ಲೆಯಲ್ಲಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಹೊಸ ಸಂಕಷ್ಟ ಎದುರಾಗಿದೆ. ಜಿಲ್ಲೆಯಲ್ಲಿರುವ ಬಾಡಿಗೆ ಕಟ್ಟಡದಲ್ಲಿ ನಡೆಸುವ ಅಂಗನವಾಡಿ ಕೇಂದ್ರಗಳನ್ನು ಖಾಲಿ ಮಾಡುವಂತೆ ಕಟ್ಟಡಗಳ ಮಾಲೀಕರು ಒತ್ತಡ ಹಾಕುತ್ತಿದ್ದರು. ಪ್ರತಿ ತಿಂಗಳು ಅಂಗನವಾಡಿ ಕೇಂದ್ರಗಳ ಬಾಡಿಗೆ ಭರಿಸಿ ಇಲ್ಲವೇ ಕಟ್ಟಡ ಖಾಲಿ ಮಾಡಿ ಎಂದು ಹೇಳುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.