ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಕೊಠಡಿಯಿಂದಲೇ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರೊಡನೆ ಸಿಎಂ ಯಡಿಯೂರಪ್ಪ ವಿಡಿಯೋ ಸಂವಾದ
ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಕೊಠಡಿಯಿಂದಲೇ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರೊಡನೆ ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಸಂವಾದ

ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಕೊಠಡಿಯಿಂದಲೇ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರೊಡನೆ ಸಿಎಂ ಯಡಿಯೂರಪ್ಪ ವಿಡಿಯೋ ಸಂವಾದ

|

Updated on: Apr 22, 2021 | 9:31 AM

ಕೊವಿಡ್ 19 ರ ಸೋಂಕಿನಿಂದ ದೃಢಪಟ್ಟು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಯ ಕೊಠಡಿಯಿಂದಲೇ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರೊಡನೆ ವಿಡಿಯೋ ಸಂವಾದ ನಡೆಸಿದರು.

ಬೆಂಗಳೂರು: ರಾಜ್ಯದಲ್ಲಿ ರೆಮ್‍ಡೆಸಿವಿರ್ ಇಂಜಕ್ಷನ್‍ನ ದಾಸ್ತಾನು ಕೊರತೆ ಇಲ್ಲ. ಇನ್ನು 15 ದಿನಗಳಲ್ಲಿ ರೆಮ್‍ಡೆಸಿವಿರ್ ಇಂಜೆಕ್ಷನ್ ದಾಸ್ತಾನು ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲಾಗುವುದು. ರಾಜ್ಯದ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯೂ ಇಲ್ಲ. ರೆಮ್‍ಡೆಸಿವಿರ್ ಇಂಜೆಕ್ಷನ್‍ನ ದಾಸ್ತಾನು ಮಾಡುವ ನಿಟ್ಟಿನಲ್ಲಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹಲವು ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರು ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರಿಗೆ ಸ್ಪಷ್ಟಪಡಿಸಿದರು.

ಕೊವಿಡ್ 19 ರ ಸೋಂಕಿನಿಂದ ದೃಢಪಟ್ಟು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಯ ಕೊಠಡಿಯಿಂದಲೇ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರೊಡನೆ ವಿಡಿಯೋ ಸಂವಾದ ನಡೆಸಿದರು. ದೇವರಿಗೆ ಸರಿಸಮಾನರೆಂದೇ ಪರಿಗಣಿಸುವ ವೈದ್ಯ ವೃಂದ ರಾಜ್ಯದ ಜನತೆಗೆ, ಅದರಲ್ಲೂ ವಿಶೇಷವಾಗಿ ಬಡಜನತೆಗೆ, ಸಂಕಷ್ಟದ ಈ ಕಾಲದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಸೇವೆಯನ್ನು ಅತ್ಯಂತ ಪ್ರೀತಿಯಿಂದ ಒದಗಿಸಿ ವೃತ್ತಿಧರ್ಮದ ಕೀರ್ತಿ-ಗೌರವಗಳನ್ನು ಕಾಪಾಡಬೇಕು ಎಂದು ಸಿಎಂ ಯಡಿಯೂರಪ್ಪ ಈ ಸಂದರ್ಭದಲ್ಲಿ ಮನವಿ ಮಾಡಿದರು.
(TV9 Special: CM Yediyurappa Interaction With Covid Hospitals Doctors Over Current Situation)

Published on: Apr 22, 2021 09:29 AM