ಜಗತ್ತಿನೆಲ್ಲೆಡೆಯ ಸುದ್ದಿ ಕ್ಷಣಾರ್ಧದಲ್ಲಿ ಹರಿದು ಬಂದು ಅಂಗೈ ಸೇರುವಾಗ ಯಾವುದರತ್ತ ಕಣ್ಣು ಹಾಯಿಸಬೇಕು ಎಂಬ ಗೊಂದಲ ಸಹಜ.. ಎಷ್ಟೋ ಬಾರಿ ಸುದ್ದಿಯ ಹೆಸರಿನಲ್ಲಿ ಅಸಂಗತ ಸಂಗತಿಗಳೂ ತೇಲಿ ಬರುತ್ತವೆ. ಅವುಗಳನ್ನು ಸೋಸುವುದೇ ಹರಸಾಹಸ. ನಮ್ಮ ಓದುಗರನ್ನು ಇಂತಹ ಗೊಂದಲಗಳಿಂದ ಪಾರು ಮಾಡಲೆಂದೇ ಪ್ರತಿನಿತ್ಯ Live Blog ಮೂಲಕ ಆಯಾ ಕ್ಷಣದ ಮುಖ್ಯಾಂಶಗಳನ್ನು ನೀಡುವ ಪ್ರಯತ್ನ ಮಾಡುತ್ತಿದ್ದೇವೆ. ಇದು ನಿಮಗಿಷ್ಟವಾಗಿದೆ ಎನ್ನುವ ನಂಬಿಕೆ ನಮ್ಮದು.. ಬನ್ನಿ ಇಂದಿನ ಸುದ್ದಿಯ ಹರಿವನ್ನು ನೋಡೋಣ. ಸುದ್ದಿಯ ಸಂಪೂರ್ಣ ವಿವರ ವೆಬ್ಸೈಟ್ನ ವಿವಿಧ ವಿಭಾಗಗಳಲ್ಲಿ ಲಭ್ಯವಿರುತ್ತವೆ. ಓದಲು ಮರೆಯದಿರಿ.
ನಟ ವಿಕ್ಕಿ ಅಭಿನಯದ ಹೊಸ ಸಿನಿಮಾ ‘ಕಾಲಾಪತ್ಥರ್’ ವಿರುದ್ಧ ಅದೇ ಹೆಸರಿನ ಮಾಜಿ ರೌಡಿಶೀಟರ್ ಕಾಲಾಪತ್ಥರ್ ಸಿಟ್ಟಾಗಿದ್ದಾರೆ. ಬೆಳಗ್ಗೆಯಷ್ಟೇ ನಟ ವಿಕ್ಕಿ ಕಾಲಾಪತ್ಥರ್ ಸಿನಿಮಾದ ಟೈಟಲ್ ಪ್ರಕಟಿಸಿದ್ದರು. ಸಿನಿಮಾ ಹೆಸರು ಹಾಗೂ ಮಾಜಿ ರೌಡಿ ಶೀಟರ್ ಎರಡೂ ಹೆಸರು ಒಂದೇ ಇದೆ. ಇದಕ್ಕಾಗಿ ಕಾಲಾಪತ್ಥರ್ ಅಸಮಾಧಾನ ಹೊರ ಹಾಕಿದ್ದಾರೆ.
ಸ್ವಂತ ವಾಹನದಲ್ಲಿ ಸಂಚಾರ ಮಾಡುವಾಗ ಮಾಸ್ಕ್ ಹಾಕುವ ಅವಶ್ಯಕತೆ ಏನು? ಸಾಮಾನ್ಯವಾಗಿ ಸ್ವಂತ ವಾಹನದಲ್ಲಿ ಕುಟುಂಬದವರು ಹಾಗೂ ಆಪ್ತರೇ ಸಂಚಾರ ಮಾಡುತ್ತಾರೆ. ಹೀಗಾಗಿ, ಸ್ವಂತ ವಾಹನದಲ್ಲಿ ತೆರಳುವಾಗ ಮಾಸ್ಕ್ ಅವಶ್ಯತೆ ಇಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು. ಈ ವಿಚಾರವನ್ನು ಮನಗಂಡ ಬೃಹತ್ ಮುಂಬೈ ಮಹಾನಗರ ಪಾಲಿಕೆ, ಖಾಸಗಿ ವಾಹನದಲ್ಲಿ ತೆರಳುವವರಿಗೆ ಮುಖ ಧಿರಿಸು ಕಡ್ಡಾಯವಲ್ಲ ಎಂದು ಹೇಳಿದೆ.
ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸ್ನಲ್ಲಿ ಆದಿತ್ಯ ಆಳ್ವ ಜೈಲುಪಾಲಾಗಿದ್ದಾರೆ. ಆದಿತ್ಯ ಆಳ್ವ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲು ಸೇರಿದ್ದಾರೆ. ಆರೋಪಿ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇಂದು ಸಂಜೆ ಆರು ಗಂಟೆ ಹೊತ್ತಿಗೆ ಸಾಮಾಜಿಕ ಜಾಲತಾಣದಲ್ಲಿ ಧ್ರುವ ಸರ್ಜಾ ಲೈವ್ ಬರಲಿದ್ದಾರೆ. ಪೊಗರು ಸಿನಿಮಾದ ರಿಲೀಸ್ ಬಗ್ಗೆ ಮಾತನಾಡುವ ಸಾಧ್ಯತೆಯಿದೆ.
ರಷ್ಯಾದ ಸ್ಪುಟ್ನಿಕ್ ಲಸಿಕೆ ಸಂಶೋಧನೆ ನಡೆಸುತ್ತಿರುವ ಗಾಮಾಲೇಯಾ ಇನ್ಸ್ ಟಿಟ್ಯೂಟ್ ಅಂತಾರಾಷ್ಟ್ರೀಯ ಸಲಹಾ ಮಂಡಳಿಗೆ ಬೆಂಗಳೂರಿನ ನಿಮ್ಹಾನ್ಸ್ ವೈರಾಲಜಿ ತಜ್ಞ ವಿ.ರವಿ ನೇಮಕಗೊಂಡಿದ್ಧಾರೆ.
ಜಿಎಸ್‌ಟಿ ಪರಿಹಾರದಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ. ಈ ನಷ್ಟಕ್ಕೆ ಯಾರು ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪ್ರಶ್ನೆ ಮಾಡಿದ್ದಾರೆ.
ಯುಪಿಎ ಆಡಳಿತದ ಕಾಲದಲ್ಲಿ (2010/11- 2013/14) ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ಕೇಂದ್ರ ತೆರಿಗೆಗಳ ಪಾಲ ರೂ.45, 713 ಕೋಟಿ.
ನಾವು ಪಡೆದದ್ದು ರೂ.47,036 ಕೋಟಿ. ಇದು ನಿಗದಿಪಡಿಸಿದ್ದಕ್ಕಿಂತ ರೂ.1.323 ಕೋಟಿ (ಶೇಕಡಾ 2.9ರಷ್ಟು) ಹೆಚ್ಚು.@AmitShah#BJPBetraysKtaka
2/11— Siddaramaiah (@siddaramaiah) January 18, 2021
.@BJP4India ಆಡಳಿತದ ಕಾಲದಲ್ಲಿ (2014/15 -2019/20) 13 ಮತ್ತು 14ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.2,03,039 ಕೋಟಿ, ಸಿಕ್ಕಿದ್ದು ಕೇವಲ ರೂ.1,65 963 ಕೋಟಿ ರೂಪಾಯಿ ಮಾತ್ರ, ಅಂದರೆ ರೂ.48,768 ಕೋಟಿ (ಶೇಕಡಾ 18.2ರಷ್ಟು) ಕಡಿಮೆ.@AmitShah
#BJPBetraysKtaka
3/11— Siddaramaiah (@siddaramaiah) January 18, 2021
2019-20ರ ವರ್ಷಕ್ಕೆ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.48, 768 ಕೋಟಿ.
ನಮಗೆ ಸಿಕ್ಕಿರುವುದು ರೂ.30.919 ಕೋಟಿ ಮಾತ್ರ.ಇದರ ಜೊತೆಗೆ ಪ್ರತಿ ವರ್ಷ ಹೆಚ್ಚಾಗುವ ಕೇಂದ್ರ ಸರ್ಕಾರದ ಬಜೆಟ್ ಗಾತ್ರವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ.#BJPBitrayKtaka
4/11— Siddaramaiah (@siddaramaiah) January 18, 2021
ರಾಜ್ಯ ಬಜೆಟ್ ಪ್ರಕಾರ 2010-21ನೇ ವರ್ಷದಲ್ಲಿ ನಿರೀಕ್ಷಿತ ತೆರಿಗೆ ಪಾಲು ರೂ.28,591 ಕೋಟಿ.
ನನ್ನ ಪ್ರಕಾರ ಪ್ರಸಕ್ತ ವರ್ಷದ ಪಾಲು ರೂ.15,017 ಕೋಟಿಗೆ ಇಳಿದರೂ ಅಚ್ಚರಿ ಇಲ್ಲ.
ಹೀಗಾದರೆ ಇದು 2019-20ರ ಅಂದಾಜಿಗಿಂತ ನಮ್ಮ ಪಾಲು ರೂ.33,751 ಕೋಟಿ ಕಡಿಮೆ ಯಾಗುತ್ತದೆ.@AmitShah#BJPBbetrayKtaka
5/11— Siddaramaiah (@siddaramaiah) January 18, 2021
ಜಿಎಸ್ ಟಿ ಪರಿಹಾರದಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ.
ಇತ್ತೀಚಿನ ಅಂದಾಜಿನಂತೆ ಜಿಎಸ್ ಟಿ ಪರಿಹಾರದಲ್ಲಿ
25 ರಿಂದ 27 ಸಾವಿರ ಕೋಟಿ ರೂಪಾಯಿ ಖೋತಾ ಆಗಬಹುದು.ಕೇಂದ್ರ ಸರ್ಕಾರ ಇತ್ತೀಚೆಗೆ 18-19,000 ಕೋಟಿಯಷ್ಟೇ ಪರಿಹಾರ ನೀಡುವುದಾಗಿ ಹೇಳಿದೆ. ಈ ನಷ್ಟಕ್ಕೆ ಯಾರು ಹೊಣೆ?@AmitShah#BJPBitrayKtaka
6/11— Siddaramaiah (@siddaramaiah) January 18, 2021
ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಲಿರುವ ಅನುದಾನ ರೂ.31,570 ಕೋಟಿಗಳಷ್ಟಾಗಬಹುದೆಂದು ನಿರೀಕ್ಷಿಸಲಾಗಿತ್ತು.
ಈಗಿನ ಲೆಕ್ಕಾಚಾರದ ಪ್ರಕಾರ ಇದು ರೂ.17,372 ಕೋಟಿ ಮೀರಲಾರದು.
ಇದರಿಂದ ರೂ.14,198 ಕೋಟಿ ಖೋತಾ ಆಗಲಿದೆ. ರಾಜ್ಯದ ಹಣಕಾಸು ಪರಿಸ್ಥಿತಿಗೆ ಇದು ಮಾರಕ ಹೊಡೆತ.@AmitShah@CMofKarnataka
7/11— Siddaramaiah (@siddaramaiah) January 18, 2021
ಒಟ್ಟಾರೆಯಾಗಿ ಕರ್ನಾಟಕ ರಾಜ್ಯ ಕಳೆದ ವರ್ಷಕ್ಕಿಂತ ಸುಮಾರು 50,000 ಕೋಟಿಯಷ್ಟು ಕಡಿಮೆ ಅನುದಾನ ಪಡೆಯಬಹುದು.
ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದ ಆದಾಯ ರೂ.1,80,217 ಕೋಟಿಯಿಂದ ರೂ.1,14,758 ಕೋಟಿಗೆ ಇಳಿಯುವ ನಿರೀಕ್ಷೆ ಇದೆ.@AmitShah@CMofKarnataka#BJPBitrayKtaka
8/11— Siddaramaiah (@siddaramaiah) January 18, 2021
ದಶಕಗಳ ನಮ್ಮ ಒಟ್ಟು ಸಾಲ ಅಂದಾಜು ರೂ.3.2ಲಕ್ಷ ಕೋಟಿ.
ಆದರೆ ಈಗಿನ ಒಂದೇ ವರ್ಷದಲ್ಲಿ @CMofKarnataka ಸುಮಾರು ರೂ.90,000 ಕೋಟಿ ಸಾಲ ಪಡೆಯಲು ನಿರ್ಧರಿಸಿದ್ದಾರೆ.ಈ ಮೂಲಕ @BJP4Karnataka ಸರ್ಕಾರ ಕರ್ನಾಟಕವನ್ನು ಶಾಶ್ವತ ಸಾಲಗಾರ ರಾಜ್ಯವನ್ನಾಗಿ ಮಾಡಲು ಹೊರಟಿದೆ.@AmitShah#BJPBitrayKtaka
9/11— Siddaramaiah (@siddaramaiah) January 18, 2021
ಕರ್ನಾಟಕಕ್ಕೆ ವಿಶೇಷ ಅನುದಾನ ರೂ.5,495 ಕೋಟಿ ನೀಡಬೇಕೆಂದು ಹಣಕಾಸು ಆಯೋಗ ಶಿಫಾರಸು ಮಾಡಿತ್ತು.
ಈ ಅನುದಾನಕ್ಕೆ ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಈಗಿನ ಹಣಕಾಸು ಸಚಿವೆ @nsitharaman ಅಡ್ಡಗಾಲು ಹಾಕಿದ್ದಾರೆ.
ಇದು @AmitShah ಅವರ ಗಮನಕ್ಕೆ ಬಂದಿಲ್ಲವೇ?@CMofKarnataka#BJPBetrayKtaka
10/11— Siddaramaiah (@siddaramaiah) January 18, 2021
ಕರ್ನಾಟಕ ಪ್ರತಿವರ್ಷ ತೆರಿಗೆ-ಸುಂಕ ಮೂಲಕ ಕೇಂದ್ರಕ್ಕೆ ಪಾವತಿಸುವ ಅಂದಾಜು ಮೊತ್ತ ರೂ.2,20,000 ಕೋಟಿ.
ಹಣಕಾಸು ಆಯೋಗದ ಶಿಫಾರಸಿನಂತೆ ಅದರಲ್ಲಿ 42% ಹಣವನ್ನು ರಾಜ್ಯಕ್ಕೆ ಕೇಂದ್ರ ಹಿಂದಿರುಗಿಸಬೇಕು.
ಬಿಜೆಪಿ ಆಡಳಿತದ ಕಾಲದಲ್ಲಿ ನಮಗೆಂದೂ ಅಷ್ಟು ಪಾಲು ಸಿಕ್ಕಿಲ್ಲ. @AmitShah#BJPBetrayKtaka
11/11— Siddaramaiah (@siddaramaiah) January 18, 2021
ತಾಂಡವ್ ವೆಬ್ ಸಿರೀಸ್ಗೆ ಸಂಬಂಧಿಸಿದ 96 ಜನರ ವಿರುದ್ಧ ವಕೀಲರು ಮುಜಾಫರ್ಪುರದ ನ್ಯಾಯಾಲಯದಲ್ಲಿ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.
2021 ನ್ನು ಹೋರಾಟ ಮತ್ತು ಸಂಘಟನೆಗೆ ಮೀಸಲಿಡಲಾಗಿದೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳನ್ನು ಸರ್ಕಾರ ಕಡೆಗಣಿಸಿದೆ ಎಂದು ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪೆಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕೃತಿ ವಿಕೋಪವಾದರು ಕೂಡಾ ಸೂಕ್ತ ಪರಿಹಾರ ನೀಡಿಲ್ಲ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಎಲ್ಲರಿಗೂ ಆಕ್ರೋಶ ತರುತ್ತಿದೆ. ಕರ್ನಾಟಕದ ಒಂದಿಂಚು ಭೂಮಿ ಬಿಡುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಕನ್ನಡ ಪರ ಸಂಘಟನೆಗಳವರು ತಲೆ ಕೆಡಿಸಿಕೊಳ್ಳಬಾರದು ಎಂದು ಆದಿ ಉಡುಪಿಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ಧಾರೆ.
ಮಂಡ್ಯದಲ್ಲಿ ಎಸಿಬಿ ಡಿಎಸ್‌ಪಿ ಎಚ್.ಪರಶುರಾಮಪ್ಪ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಡಿಡಿಎಲ್‌ಆರ್ ಕಚೇರಿಯ ಮಹಿಳಾ ಅಧಿಕಾರಿಯೊಬ್ಬರ ಬಣ್ಣ ಬಯಲು ಮಾಡಿದ್ದಾರೆ. 25 ಸಾವಿರ ಲಂಚ ಪಡೆಯುವಾಗ ಕಚೇರಿಯಲ್ಲೇ ಎಸಿಬಿ ಬಲೆಗೆ ಬಿದ್ದ ಮಹಿಳಾ ಅಧಿಕಾರಿ ಎಲ್.ವಿಜಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸುಳ್ಳನೇ ದೇವರೆಂದು ನಂಬಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಮತ್ತೊಮ್ಮೆ ಬಂದು ಸುಳ್ಳುಗಳ ಮೂಟೆ ಉರುಳಿಸಿ ಕಾಂಗ್ರೆಸ್ನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸುಳ್ಳನ್ನೆ ದೇವರು ಎಂದು ನಂಬಿರುವ ಕೇಂದ್ರ ಗೃಹಸಚಿವ @AmitShah ರಾಜ್ಯಕ್ಕೆ ಬಂದು ಮತ್ತೊಮ್ಮೆ ಸುಳ್ಳುಗಳ ಮೂಟೆ ಉರುಳಿಸಿ ಕಾಂಗ್ರೆಸ್ನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ.
ಈಗ ನಾನು ಹೇಳುವ ಲೆಕ್ಕವನ್ನು ಅವರು ಗಮನವಿಟ್ಟು ಓದಿ, ತಾಳ್ಮೆಯಿಂದ ಉತ್ತರ ಕೊಡಬೇಕು.
1/11#BJPBetrayKtaka— Siddaramaiah (@siddaramaiah) January 18, 2021
ಈಗಾಗಲೇ ಎಲ್ಲ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿದ್ದೇವೆ. ಏಳು ವಿಭಾಗದಲ್ಲಿ ಉಸ್ತುವಾರಿ ಸಮಿತಿ ನೇಮಕ ಮಾಡಿದ್ದು, ಪ್ರತಿ ಜಿಲ್ಲೆಗೆ ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಕಳೆದ 6 ತಿಂಗಳಿಂದ ಸೈಲೆಂಟಾಗಿದ್ದ ಸ್ಯಾಟಲೈಟ್ ಫೋನ್ಗಳು ಕರಾವಳಿಯ ದಟ್ಟಾರಣ್ಯ ಪ್ರದೇಶದಲ್ಲಿ ಮತ್ತೆ ಸಕ್ರಿಯವಾಗಿದೆ.
ಸರ್ಕಾರದ ಪ್ರತಿನಿಧಿಯಾಗಿ ವಿಶ್ವನಾಥ್ ಸೂಕ್ತ ಭರವಸೆ ಕೊಟ್ಟ ಹಿನ್ನೆಲೆ ಮನವಿ ಸ್ವೀಕರಿಸಿ ಪ್ರತಿಭಟನೆಯನ್ನು ಕೈ ಬಿಡಲು ನಿರ್ಧರಿಸಲಾಗಿದೆ ಎಂದು ಕಲಾವಿದರ ಸಂಘದ ಅಧ್ಯಕ್ಷ ಶಂಕರ್ ತಿಳಿಸಿದ್ದಾರೆ.
ಅದಾನಿ, ಅಂಬಾನಿಗೆ ಮೋದಿ ಹಾಗೂ ಅಮೀತ್ ಶಾ ದೇಶವನ್ನು ಮಾರಾಟ ಮಾಡುತ್ತಿದ್ದಾರೆ. ಅಲ್ಲದೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಟೋಪಿ ಹಾಕುತ್ತಿವೆ ಎಂದು ಚಿಕ್ಕಬಳ್ಳಾಪುರದ ಕಿಸಾನ್ ಅಧಿಕಾರ್ ದಿವಸ್ ಆಂದೋಲನದ ಪೂರ್ವಭಾವಿ ಸಭೆಯಲ್ಲಿ ಶಾಸಕ ಎನ್.ಹೆಚ್.ಶಿವಶಂಕರ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ನಾಳೆ ಹಿರಿಯ ಸಚಿವರ ಜೊತೆ ಚರ್ಚಿಸಿ ಖಾತೆ ಹಂಚಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದೆ ಎನ್ನುವುದೇ ಮೂರ್ಖತನದ ಹೇಳಿಕೆ. ಮುಖ್ಯಮಂತ್ರಿ ಆದವರು ಇತಿಹಾಸವನ್ನು ಸರಿಯಾಗಿ ಓದಿಕೊಂಡಿಲ್ಲ. ಯಾವಾಗ ಏಕೀಕರಣ ಆಗಿದೆ ಎನ್ನುವ ಇತಿಹಾಸ ಮೊದಲು ತಿಳಿದುಕೊಳ್ಳಲಿ. ಸ್ಥಳೀಯರನ್ನು ಮೆಚ್ಚಿಸಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಾರೆ. ನಮ್ಮ ರಾಜ್ಯದ ಜನ ಆತಂಕ ಪಡುವ ಅಗತ್ಯ ಇಲ್ಲಾ ಎಂದು ಡಾ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಹೆಚ್ಎಎಲ್ ಏರ್ ಪೋರ್ಟ್ನಿಂದ ಹೆಲಿಕಾಪ್ಟರ್ ಮೂಲಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಡುಪಿ ಜಿಲ್ಲಾ ಪ್ರವಾಸಕ್ಕೆ ತೆರಳಿದರು. ನಾಳೆ ಸಂಜೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ಮಹಾರಾಷ್ಟ್ರ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರಕ್ಕೆ ಜನ ಬೆಂಬಲ ಇಲ್ಲ. ಠಾಕ್ರೆ ಕೇವಲ ತೆವಲಿಗೆ ಮಾತಾಡ್ತಾ ಇದ್ದಾರೆ. ನಮ್ಮ ತಂಟೆಗೆ ಬರಬೇಡಿ. ನಾವು ಆಂಜನೇಯನ ರೂಪ ತಾಳಬೇಕಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕೆ.ಜಿ.ಹಳ್ಳಿ ಸುಲ್ತಾನ್ ಹತ್ಯೆ ಕೇಸ್ ಆರೋಪಿಗಳು ಪೊಲೀಸರ ಮೇಲೆ ಫೈರಿಂಗ್ ನಡೆಸಿದ್ದು, ಪ್ರತ್ಯುತ್ತರವಾಗಿ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಮಾರ್ಚ್ 19 ಮತ್ತು 20 ರಂದು ಬೆಂಗಳೂರಿನಲ್ಲಿ ಆರ್ಎಸ್ಎಸ್ನ ಅಖಿಲ ಭಾರತೀಯ ಪ್ರತಿನಿಧಿಗಳ ಸಭೆ ನಡೆಯಲಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯವೈಖರಿ ಪರಿಶೀಲನೆ ನಡೆಸಿದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರು ಮಹಾನಗರ ವಿಶ್ವಮಾನ್ಯ ನಗರಗಳಲ್ಲಿ ಒಂದಾಗಿದೆ. ತಿಂಗಳು ಬೆಂಗಳೂರು ಮಿಷನ್ 2022 ಯೋಜನೆಯನ್ನು ಘೋಷಿಸಲಾಗಿದೆ. ಏಜೆಂಟರ ಹಾವಳಿ ನಿಯಂತ್ರಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕರ್ನಾಟಕದ ಒಂದಿಂಚು ಜಾಗ ಕೂಡ ನಾವು ಕೊಡಲ್ಲ. ಉದ್ಧವ್ ಠಾಕ್ರೆಗೆ ಮಾಡಲು ಬೇರೆ ಕೆಲಸವಿಲ್ಲ. ಹೀಗಾಗಿ ಪದೇ ಪದೇ ಇಂತಹ ಹೇಳಿಕೆ ನೀಡುತ್ತಿರುತ್ತಾರೆ ಎಂದು ಉದ್ಧವ್ ಠಾಕ್ರೆ ಟ್ವೀಟ್‌ಗೆ ಸಚಿವ ಪ್ರಭು ಚೌಹಾಣ್ ಪ್ರತಿಕ್ರಿಯೆ ನೀಡಿದ್ದಾರೆ.
ತುಮಕೂರು ತಾಲೂಕಿನ ಬುಲ್ಲಿರಾಯನ ಕೆರೆಯಲ್ಲಿ ಈಜುವ ವೇಳೆ ನೀರಿನಲ್ಲಿ ಮುಳುಗಿ 27 ವರ್ಷದ ಪೃಥ್ವಿರಾಜ್ ಗೌಡ ಸಾವನ್ನಪ್ಪಿದ್ದಾರೆ.
ವಿಧಾನಸಭೆ ಚುನಾವಣೆಗೆ ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ವಿರುದ್ಧ ನಂದಿಗ್ರಾಮದಿಂದ ಸ್ಪರ್ಧಿಸುತ್ತೇನೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.
ನಾನು ಪ್ರತಿಭಟನಾ ನಿರತ ವಾದ್ಯಗೋಷ್ಠಿ ಕಲಾವಿದರ ಜೊತೆಗಿದ್ದೇನೆ. ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಟ್ವೀಟ್ ಮೂಲಕ ನಟ ಸುದೀಪ್ ಬೆಂಬಲ ಸೂಚಿಸಿದ್ದಾರೆ.
???????? a request to all my fnzz, colleagues and Govt. pic.twitter.com/BiiZVldJZH
— Kichcha Sudeepa (@KicchaSudeep) January 18, 2021
ರಾಜ್ಯದಲ್ಲಿ ಯಾವಾಗ ಏನು ಬೇಕಾದ್ರೂ ಆಗಬಹುದು. ಯಾವ್ಯಾವ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿಲ್ಲ, ಅಂತಹ ಕಡೆಗಳಲ್ಲಿ ಸಚಿವ ಸ್ಥಾನ ನೀಡುವಂತೆ ಹೇಳಿದ್ದೇನೆ. ಸಚಿವ ಸ್ಥಾನ ಕೊಟ್ಟರೂ ತೆಗೆದುಕೊಳ್ಳುವುದಿಲ್ಲ. ಯಡಿಯೂರಪ್ಪ ಸಿಎಂ ಆಗಿರುವವರೆಗೂ ನಾನೂ ಮಂತ್ರಿ ಆಗೋದಿಲ್ಲ ಎಂದು ಹಾವೇರಿಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ನೀಡಿದ್ದಾರೆ.
ಹೆಚ್ಡಿಕೆ ಹಲಗೇವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣವನ್ನು ರದ್ದು ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಕರಣದ ತನಿಖೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆ ಖಂಡಿಸಿ ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕೋಣದ ಮೇಲೆ ಉದ್ಧವ್ ಠಾಕ್ರೆ ಪ್ರತಿಕೃತಿ ಇಟ್ಟು ಮೆರವಣಿಗೆ ಮಾಡುತ್ತಿದ್ದಾರೆ.
ನಿರಂತರ ಜ್ಯೋತಿ ವಿದ್ಯುತ್ ಯೋಜನೆ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ಹಿನ್ನೆಲೆ ಮೆಸ್ಕಾಂ ಅಧಿಕಾರಿಗಳ ಜೊತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಸಭೆ ನಡೆಸಿದರು.
ವಿಜಯಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 10-30ಕ್ಕೆ ಚಡಚಣ ತಾಲೂಕಿನ ಹತ್ತಳ್ಳಿ ಬಳಿ ಬೋರಿ ಹಳ್ಳಕ್ಕೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ, 11ಕ್ಕೆ ಚಡಚಣ ನೂತನ ಪ್ರವಾಸಿ ಮಂದಿರದ ಉದ್ಘಾಟನೆ, ಜೊತೆಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದ್ದ ಗೋವಿಂದ ಕಾರಜೋಳ 1:45 ಗಂಟೆಯಾದರೂ ಆಗಮಿಸಲಿಲ್ಲ.
2 ತಿಂಗಳೊಳಗೆ ಬೆಂಗಳೂರು ಸುತ್ತ 110 ಕಿ.ಮೀ ರಿಂಗ್ ರೋಡ್ ಆಗಲಿದೆ ಎಂದು ತಿಳಿಸಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಬಿನ್ನಿಮಿಲ್ ಸಗಟು ಹಂಚಿಕೆ ಹೆಸರಲ್ಲಿ ಬಿಡಿಎನಲ್ಲಿ ಅವ್ಯವಹಾರ ಆಗಿದೆ. ಅಕ್ರಮದ ಬಗ್ಗೆ ತನಿಖೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಸಾರಿಗೆ ನಿಗಮಕ್ಕೆ 4 ಸಾವಿರ ಕೋಟಿ ರೂ. ನಷ್ಟವಾಗಿದೆ. ಆದರೆ ನಷ್ಟದಿಂದ ಸಾರಿಗೆ ಸಂಸ್ಥೆ ಮುಚ್ಚಲಿದೆ ಎಂಬ ಭಯ ಬೇಡ. ಅದಕ್ಕೆ ನಾನು ಅವಕಾಶ ನೀಡಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಜೊತೆಗೆ ಖಾಸಗಿ ಸಹಭಾಗಿತ್ವದಲ್ಲಿ 300 ವಿದ್ಯುತ್ ಚಾಲಿತ ಬಸ್ ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಹೊಸ ಕೊವಿಡ್ ಕೇಸ್ ಕಡಿಮೆಯಾಗುತ್ತಿದೆ ಎಂದು CSIRನ ಸಂಶೋಧನಾ ವರದಿ ಬಿಡುಗಡೆಯಾಗಿದೆ. ದೇಶದ 10 ಕೋಟಿ ಜನರಿಗೆ ಕೊರೊನಾ ಬಂದು ಹೋಗಿದೆ. 2020ರ ಸೆಪ್ಟೆಂಬರ್ ವೇಳೆಗೆ 10 ಕೋಟಿ ಜನ ಗುಣಮುಖರಾಗಿದ್ದಾರೆ. ದೇಶದ ಶೇ.25ರಷ್ಟು ಜನರಲ್ಲಿ ಪ್ರತಿಕಾಯ ಬೆಳವಣಿಗೆ ಕಂಡಿದೆ ಎಂದು CSIRನ ಇನ್ಸ್‌ಟಿಟ್ಯೂಟ್ ಆಫ್ ಜೆನೋಮಿಕ್ಸ್ ಆ್ಯಂಡ್ ಇಂಟಿಗ್ರೇಟಿವ್ ಬಯಾಲಜಿ ನಿರ್ದೇಶಕ ಅನುರಾಗ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಮರಾಠಿಗರು ಮತ್ತು ಮಹಾರಾಷ್ಟ್ರದಲ್ಲಿ ಕನ್ನಡಿಗರು ಸೌಹಾರ್ದತೆಯಿಂದ ಇದ್ದಾರೆ. ಮುಖ್ಯಮಂತ್ರಿ ಉದ್ಧವ್ ಪ್ರಚೋದನಕಾರಿ ಹೇಳಿಕೆ ನೀಡದೆ ಸ್ಥಾನದ ಜವಾಬ್ದಾರಿ ಅರಿತು ಮಾತನಾಡಬೇಕು ಎಂದು ಕೇಂದ್ರದ ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಷಿ ಟ್ವೀಟ್ ಮಾಡಿದ್ದಾರೆ.
ಹೊಸಕೋಟೆ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯತಿಯಲ್ಲಿ ಗೆದ್ದವರಿಗೆ ಅಭಿನಂದನಾ ಸಮಾವೇಶ ನಡೆಯುತಿದ್ದು, ಸಮಾವೇಶದಲ್ಲಿ ಸಂಸದ ಡಿ.ಕೆ.ಸುರೇಶ್, ಶಾಸಕ ರಮೇಶ್ ಕುಮಾರ್, ರಿಜ್ವಾನ್ ಹರ್ಷದ್, ಶರತ್ ಬಚ್ಚೆಗೌಡ ಸೇರಿದಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿ.ಪ್ರಸಾದ್ ಭಾಗಿಯಾಗಿದ್ದಾರೆ.
ಯಾವುದೇ ಲಸಿಕೆಯನ್ನು ಪಡೆದರೂ ಅಡ್ಡ ಪರಿಣಾಮ ಸಹಜ. ಆದರೆ ಕೊರೊನಾ ಲಸಿಕೆ ಬಗ್ಗೆ ಭಯಪಡುವ ಅಗತ್ಯವಿಲ್ಲ. ಕೊರೊನಾ ಲಸಿಕೆಯಿಂದ ಶೇ.10ರಷ್ಟೂ ಅಡ್ಡ ಪರಿಣಾಮವಿಲ್ಲ ಎಂದು ದೆಹಲಿ ಏಮ್ಸ್ ನಿರ್ದೇಶಕ ರಣ್‌ದೀಪ್ ಗುಲೇರಿಯಾ ಸ್ಪಷ್ಟಪಡಿಸಿದ್ದಾರೆ.
ರಾಯಚೂರಿನ ಚಂದ್ರಬಂಡ ರಸ್ತೆಯ ಆಶ್ರಯ ಕಾಲೋನಿಯ ಸರ್ಕಾರಿ ಜಾಗದಲ್ಲಿ 200 ಕ್ಕೂ ಹೆಚ್ಚು ಗುಡಿಸಲು ಹಾಕಿದ್ದರು. ಆದರೆ ಇದೀಗ ಪೊಲೀಸ್ ಭದ್ರತೆಯಲ್ಲಿ ಅಕ್ರಮ ಗುಡಿಸಲುಗಳನ್ನು ತೆರವುಗೊಳಿಸಲಾಗಿದೆ. ಗುಡಿಸಲುಗಳ ತೆರವಿಗೆ ವಿರೋಧ ವ್ಯಕ್ತಪಡಿಸಿದ ಸ್ಥಳಿಯರು ನಗರಸಭೆ ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಸುತ್ತಿದ್ದಾರೆ.
ರಾಜ್ಯ ಮತ್ತು ಕೇಂದ್ರದಲ್ಲಿನ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು. ಕಾಂಗ್ರೆಸ್ನಿಂದ ಕೆಲವರು ಮತ್ತು ಕೆಲ ಸಮುದಾಯ ದೂರ ಹೋಗಿವೆ. ಎಲ್ಲರನ್ನು ಮತ್ತೆ ಪಕ್ಷಕ್ಕೆ ಕರೆ ತರುವ ಕೆಲಸ ಮಾಡಬೇಕಿದೆ ಎಂದು ಕಾರ್ಯಕರ್ತರಿಗೆ ಸಂಕಲ್ಪ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಸಿಎಂ ಉದ್ಧವ್ ಟ್ವೀಟ್ ವಿಚಾರಕ್ಕೆ ಸಂಬಂಧಿಸಿ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಉದ್ಧವ್ ಠಾಕ್ರೆ ವಿರುದ್ಧ ಘೋಷಣೆ ಕೂಗುತ್ತ, ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಧರಣಿ ಮಾಡುತ್ತಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಒಬ್ಬ ಹುಚ್ಚ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಲು ಹೋದರೆ ರಕ್ತ ಕ್ರಾಂತಿಯಾಗುತ್ತದೆ. ಸಿಎಂ ಯಡಿಯೂರಪ್ಪಗೆ ಶಕ್ತಿ, ಪ್ರೀತಿ, ಬಾಧ್ಯತೆ ಇಲ್ಲ. ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮುಂದಿನ ಹೋರಾಟದ ಬಗ್ಗೆ ಬುಧವಾರ ಬೆಳಗ್ಗೆ 11.30ಕ್ಕೆ ಸಭೆ ಸೇರಿ ನಿರ್ಧರಿಸುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ದಾಸಪ್ಪ ಲಸಿಕಾ ಕೇಂದ್ರಕ್ಕೆ WHO ಅಧಿಕಾರಿಗಳ ಭೇಟಿ ನೀಡಿ ಲಸಿಕಾ ಪ್ರಕ್ರಿಯೆ ಬಗ್ಗೆ ಮಾಹಿತಿ ಕಲೆ ಹಾಕಿದ ಜೊತೆಗೆ ಪರಿಶೀಲನೆ ನಡೆಸಿದರು.
ಜನವರಿ 26ರಂದು ರೈತರ ಟ್ರ್ಯಾಕ್ಟರ್ ಪರೇಡ್‌ಗೆ ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ದೆಹಲಿ ಪೊಲೀಸರೇ ತೀರ್ಮಾನಿಸಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ರೈತರ ಟ್ರ್ಯಾಕ್ಟರ್ ಪರೇಡ್‌ಗೆ ತಡೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಯಾವುದೇ ಆದೇಶ ನೀಡಲು ನಕಾರ ವ್ಯಕ್ತಪಡಿಸಿದೆ. ಜತೆಗೆ, ವಿಚಾರಣೆಯನ್ನು ಬುಧವಾರ ನಡೆಸುವುದಾಗಿ ತಿಳಿಸಿದೆ.
ಇಂದು ಮತ್ತು ನಾಳೆ ಸಿಎಂ ಯಡಿಯೂರಪ್ಪ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಶ್ರೀಕೃಷ್ಣ ಮಠದ ಪರ್ಯಾಯ ಪಂಚ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ ಉಡುಪಿಯಲ್ಲಿ ಸಿಎಂ ವಾಸ್ತವ್ಯ ಹೂಡಲಿದ್ದು, ಮಂಗಳವಾರ ಬೆಳಿಗ್ಗೆ ಹೆಜಮಾಡಿ ಮೀನುಗಾರಿಕಾ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಜೆಡಿಎಸ್ ನಿರ್ನಾಮ ಮಾಡುವವರು ಎಲ್ಲೆಲ್ಲಿಗೋ ಹೋಗಿದ್ದಾರೆ. ನನ್ನ ತಂಟೆಗೆ ಬಂದ್ರೆ ಹುಷಾರ್. ನನ್ನ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬೇಡಿ. ಹೇಗೋ ಸುಭಧ್ರವಾಗಿದ್ದೀರಿ ನಾನು ಕೈ ಹಾಕಿದ್ರೆ ಸರಿ ಇರಲ್ಲ ಎಂದು ಸಿಎಂ ಯಡಿಯೂರಪ್ಪಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಸಸ್ಪೆಂಡ್ ಮಾಡಿರುವ ಬಗ್ಗೆ ನನಗಿನ್ನು ಮಾಹಿತಿ ಇಲ್ಲ. ನನಗೆ ಯಾವುದೇ ಆದೇಶದ ಪ್ರತಿ ಬಂದಿಲ್ಲ. ಒಂದು ವೇಳೆ ಅಮಾನತು ಮಾಡಿದ್ದರೆ ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇನೆ ಎಂದು ಟಿವಿ9 ಗೆ ಡಾ.ಸುಧಾ ತಿಳಿಸಿದ್ದಾರೆ.
ರಾಮ ವಿಚಾರವಾಗಿ ಆಗಾಗ ವಿವಾದಿತ ಹೇಳಿಕೆ ನೀಡುತ್ತಿದ್ದ ಪ್ರೋ.ಭಗವಾನ್ಗೆ ರಾಮ ಮಂದಿರದ ನಿಧಿ ಸಂಗ್ರಹದ ಕರ ಪತ್ರವನ್ನು ಬಿಜೆಪಿ ಮುಖಂಡರು ನೀಡಿದರು.
ಉದ್ಧವ್ ರಾಜ್ಯದ ಭೂಮಿಯನ್ನು ವಶಪಡಿಸಿಕೊಳ್ಳುವುದು ಭ್ರಮೆ. ರಾಜ್ಯದ ಒಂದೇ ಒಂದು ಇಂಚು ಭೂಮಿಯೂ ಅನ್ಯರ ಪಾಲಾಗಲು ಸಾಧ್ಯವಿಲ್ಲ. ಸದ್ಯ ಬೆಳಗಾವಿ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ. ಒಂದು ರಾಜ್ಯದ ಮುಖ್ಯಮಂತ್ರಿಯಾದ ಉದ್ಧವ್ ಠಾಕ್ರೆಗೆ ಕೋರ್ಟ್‌ನಲ್ಲಿರುವ ಪ್ರಕರಣದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಬಾರದು ಎಂಬ ಕನಿಷ್ಟ ಜ್ಞಾನವೂ ಇಲ್ಲವೆ? ಎಂದು ಕಾಂಗ್ರೆಸ್ ಹಿರಿಯ ನಾಯಕ ದಿನೇಶ್ ಗುಂಡೂರವ್ ಟ್ವೀಟ್ ಮಾಡಿದ್ದಾರೆ.
3
ಸದ್ಯ ಬೆಳಗಾವಿ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ.
ಒಂದು ರಾಜ್ಯದ ಮುಖ್ಯಮಂತ್ರಿಯಾದ ಉದ್ಧವ್ ಠಾಕ್ರೆಗೆ ಕೋರ್ಟ್‌ನಲ್ಲಿರುವ ಪ್ರಕರಣದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಬಾರದು ಎಂಬ ಕನಿಷ್ಟ ಜ್ಞಾನವೂ ಇಲ್ಲವೆ?ಉದ್ಧವ್ ರಾಜ್ಯದ ಭೂಮಿಯನ್ನು ವಶಪಡಿಸಿಕೊಳ್ಳುವುದು ಭ್ರಮೆ.
ರಾಜ್ಯದ ಒಂದೇ ಒಂದು ಇಂಚು ಭೂಮಿಯೂ ಅನ್ಯರ ಪಾಲಾಗಲು ಸಾಧ್ಯವಿಲ್ಲ.— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 18, 2021
2
ಕರ್ನಾಟಕ ಅಕ್ರಮಿತ ಪ್ರದೇಶ ಎಂಬ ಉದ್ಧವ್ ಹೇಳಿಕೆಯೇ ಅಸಂಬದ್ಧ.
ಕರ್ನಾಟಕ ಯಾವ ಪ್ರದೇಶವನ್ನು ಅತಿಕ್ರಮಿಸಿಕೊಂಡಿಲ್ಲ.1956ರ ರಾಜ್ಯ ಪುನರ್ವಿಂಗಡನೆ ಸಂದರ್ಭದಲ್ಲಿ ಬೆಳಗಾವಿ ನ್ಯಾಯಬದ್ಧವಾಗಿಯೇ ಅಂದಿನ ಮೈಸೂರು ಸಂಸ್ಥಾನದ ಭಾಗವಾಗಿದೆ.
ಮಹಾಜನ್ ಆಯೋಗದ ವರದಿಯೂ ಅದನ್ನು ಸ್ಪಷ್ಟಪಡಿಸಿದೆ.
ಹೀಗಿರುವಾಗ ಮಹಾರಾಷ್ಟ್ರದ ಕೀಟಲೆಗೆ ಅರ್ಥವಿದೆಯೆ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 18, 2021
1
ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಅತಿರೇಖದ ಪರಮಾವಧಿ.ಉದ್ಧವ್ ವಿರಾಮದ ವೇಳೆಯಲ್ಲಿ ಇತಿಹಾಸವನ್ನೊಮ್ಮೆ ಕುಳಿತು ಓದಲಿ.
ಅಂದು ಮಹಾಜನ್ ಆಯೋಗದ ರಚನೆಗೆ ಪಟ್ಟು ಹಿಡಿದಿದ್ದೇ ಮಹಾರಾಷ್ಟ್ರ.
ತಾನೇ ಬಲವಂತ ಮಾಡಿ ರಚನೆಯಾದ ಆಯೋಗದ ವರದಿಯನ್ನು ಒಪ್ಪುವುದಿಲ್ಲ ಎಂದರೆ ಇಲ್ಯಾರು ಕೇಳಲು ಸಿದ್ದರಿಲ್ಲ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 18, 2021
ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ನಾಡದ್ರೋಹಿ ಸಂಘಟನೆ ಬ್ಯಾನ್ ಮಾಡುವವರೆಗೂ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡುತ್ತಿದ್ದಾರೆ. ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಸಿದ್ದರಾಮಯ್ಯನವರದ್ದು ಜಿನ್ನಾ ವಾದ ಆಗುತ್ತೆ, ಗಾಂಧಿ ವಾದ ಆಗಲ್ಲ. ಒಮ್ಮೆ ನಾನೂ ಹಿಂದೂ ಅಂತಾರೆ ಆಮೇಲೆ ನನಗೂ ಹಿಂದೂಗೂ ಸಂಬಂಧವಿಲ್ಲ ಅಂತಾರೆ. ಒಮ್ಮೊಮ್ಮೆ ಗಾಂಧಿ ಹಿಂದುತ್ವ ಅಂತಾರೆ. ಗಾಂಧಿ ಗೋ ಹತ್ಯೆ ನಿಷೇಧ ಬಯಸಿದವರು ಗೋ ಮಾಂಸ ತಿನ್ನುತ್ತೀನಿ ಎನ್ನುವವರು ಗಾಂಧಿ ಹಿಂದುತ್ವ ಹೇಗಾಗುತ್ತೆ ಎಂದು ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ವ್ಯಂಗ್ಯ ಮಾಡಿದ್ದಾರೆ.
ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂದಿರುವ ಉದ್ಧವ್ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿದ್ದು ಮಾತ್ರವಲ್ಲ, ಅಲ್ಲಿ ವಿಧಾನಸಭೆ ಅಧಿವೇಶನ ನಡೆಯಬೇಕೆಂದು ತೀರ್ಮಾನಿಸಲಾಯಿತು. ಸುವರ್ಣ ಸೌಧ ಮಹಾರಾಷ್ಟ್ರಕ್ಕೆ ಪ್ರತ್ಯುತ್ತರವಾಗಿ ನಿಂತಿರುವ ಒಂದು ನಿರ್ಮಿತಿ. ಅದನ್ನು ಅರಿಯುವ ವಿಚಾರದಲ್ಲಿ ನಮ್ಮಲ್ಲಿನ ಕೆಲವರೂ ಎಡವಿದ್ದಾರೆ ಎಂಬುದೂ ವಾಸ್ತವ. ಅದರ ಸಮರ್ಪಕ ಬಳಕೆಯಿಂದ ಮಾತ್ರ ಅದರ ಉದ್ದೇಶ ಸಾಕಾರ.
6/7— H D Kumaraswamy (@hd_kumaraswamy) January 18, 2021
ಅಕ್ರಮ ಆಸ್ತಿ ಗಳಿಕೆ ಆಧಾರದಡಿ ಕೆಎಎಸ್ ಅಧಿಕಾರಿ ಸುಧಾರನ್ನು ಸಸ್ಪೆಂಡ್ ಮಾಡಲಾಗಿದ್ದು, ಈ ಕುರಿತು ದೂರುದಾರ ಟಿಜೆ ಅಬ್ರಾಹಂ ಮಾಹಿತಿ ನೀಡಿದ್ದಾರೆ.
ಉದ್ದವ್ ಠಾಕ್ರೆ ಉದ್ದಟತನದ ಟ್ವೀಟ್ ವಿಚಾರದ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಎಲ್ಲರಿಗೂ ಧನ್ಯವಾದ ಏನೂ ಪ್ರತಿಕ್ರಿಯಿಸಲ್ಲ. ನೋ ಕಮೆಂಟ್ಸ್ ಎಂದು ಉತ್ತರಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆ ಹೊರಟಿದ್ದಾರೆ.
ಮಹಾರಾಷ್ಟ್ರ ಸಿಎಂ ಟ್ವೀಟ್ ವಿಚಾರಕ್ಕೆ ಸಂಬಂಧಿಸಿ ನೆಲ, ಜಲ ವಿಚಾರದಲ್ಲಿ ಈಗಾಗಲೇ ನಿರ್ಧಾರವಾಗಿದೆ. ಕರ್ನಾಟಕ ರಾಜ್ಯದ ಬಗ್ಗೆ ಚಿಂತೆ ಮಾಡುವುದು ಬೇಡ. ರಾಜಕೀಯ ಹೇಳಿಕೆಗೆ ಮಹತ್ವ ನೀಡುವುದು ಬೇಡ. ನಾವು ರಾಜ್ಯದ ಹಿತ ಕಾಯುವ ಕೆಲಸ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಲಬುರಗಿ ನಗರದಲ್ಲಿ ಹೇಳಿಕೆ ನೀಡಿದ್ದಾರೆ.
ಬಿಡಿಎ ಕೇಂದ್ರ ಕಚೇರಿಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಬಿಡಿಎ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಬಿಡಿಎ ಅಧ್ಯಕ್ಷ ವಿಶ್ವನಾಥ್ ಮತ್ತು ಬಿಡಿಎ ಕಮಿಷನರ್ ಮಹದೇವ್ ಭಾಗಿಯಾಗಲಿದ್ದಾರೆ.
ಮೈಸೂರಿನ ಮನೆಯೊಂದರಲ್ಲಿ ಎರ್ ಕೂಲರ್ ಒಳಗೆ ಅಡಗಿದ್ದ ಬಾರಿ ಗಾತ್ರದ ನಾಗರಹಾವನ್ನು ಸ್ನೇಕ್ ಶ್ಯಾಮ್ ರಕ್ಷಿಸಿದ್ದಾರೆ.
ಮಹಾರಾಷ್ಟ್ರ ಸಿಎಂ ಉದ್ಧಟತನ ಪ್ರದರ್ಶನ ಮಾಡಿದ್ದಾರೆ. ಮಹಾರಾಷ್ಟ್ರ ಗಡಿ ವಿಚಾರ ಈಗಾಗಲೇ ಇತ್ಯರ್ಥವಾಗಿದೆ. ಮಹಾರಾಷ್ಟ್ರ ಸಿಎಂ ರಾಜಕೀಯ ತೆವಲು ತೀರಿಸಿಕೊಳ್ಳಲು ಇಂತಹ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಒಂದು ಇಂಚು ಭೂಮಿಯೂ ಬಿಟ್ಟು ಕೊಡಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅಮೇಜಾನ್ ಪ್ರೈಮ್‌ನಿಂದ ‘ತಾಂಡವ್’ ವೆಬ್ ಸಿರೀಸ್ ತೆಗೆಯಬೇಕೆಂದು ಬಿಜೆಪಿ ನಾಯಕ ಕಪಿಲ್ ಮಿಶ್ರಾರಿಂದ ಅಮೇಜಾನ್ ಪ್ರೈಮ್ ವಿಡಿಯೋಗೆ ಲೀಗಲ್ ನೋಟಿಸ್ ನೀಡಿದ್ದು, ನಿರ್ಲಕ್ಷಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಟೀಂ ಇಂಡಿಯಾದ ಮಾಜಿ ಆಟಗಾರಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, 75 ವರ್ಷದ ಬಿ.ಎಸ್.ಚಂದ್ರಶೇಖರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿ.ಎಸ್.ಚಂದ್ರಶೇಖರ್
ಮಹಾಜನ್ ವರದಿ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ. ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿಯೂ ಬೆರೆತಿದ್ದಾರೆ. ಸೌಹಾರ್ದಯುತ ವಾತಾವರಣ ಕೆಡಿಸುವ ಪ್ರಯತ್ನ ನಡೆದಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ನಡೆ ನೋವಿನ ಸಂಗತಿ ಎಂದು ಸಿಎಂ ಬಿಎಸ್‌ವೈ ಟ್ವೀಟ್ ಮೂಲಕ ಮಹಾರಾಷ್ಟ್ರ ಸಿಎಂ ಟ್ವೀಟ್ನನ್ನು ಖಂಡಿಸಿದ್ದಾರೆ.
'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ. (1/3)
— CM of Karnataka (@CMofKarnataka) January 18, 2021
ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ. (2/3)
— CM of Karnataka (@CMofKarnataka) January 18, 2021
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದ್ದು, ಮಳೆಯಿಂದಾಗಿ ಪಂದ್ಯವನ್ನ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಮಳೆ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾದ ಸ್ಕೋರ್ 243/7 ಆಗಿದೆ. ಈ ಮೂಲಕ ಆಸ್ಟ್ರೇಲಿಯಾ 276 ರನ್‌ಗಳ ಮುನ್ನಡೆ ಸಾಧಿಸಿದೆ.
ಅಹಮದಾಬಾದ್ ಮೆಟ್ರೋ 2ನೇ ಹಂತದ ಯೋಜನೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ
ಉದ್ಧವ್ ಠಾಕ್ರೆಯವರೇ ನೀವೀಗ ಕೇವಲ ಶಿವಸೈನಿಕ ಅಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿಎಂ ಎನ್ನುವುದು ಮರೆಯಬೇಡಿ ಎಂದು ಟ್ವಿಟ್ಟರ್‌ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಚಾರದಲ್ಲಿ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ ಎಂದು ತಿಳಿಸಿದ್ದಾರೆ.
I strongly condemn the statement made by @CMOMaharashtra Uddhav Thackeray about our Belagavi.
Belagavi is an integral part of Karnataka.
Don't try to instigate us by bringing up the issue which is already resolved.@OfficeofUT#ಬೆಳಗಾವಿನಮ್ಮದು
1/3— Siddaramaiah (@siddaramaiah) January 18, 2021
ಮಹಾರಾಷ್ಟ್ರ ಸಿಎಂ ಟ್ವೀಟ್ ವಿಚಾರಕ್ಕೆ ಸಂಬಂಧಿಸಿ ಉದ್ಧವ್ ಠಾಕ್ರೆ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
We will never compromise or politicize on matters related to land-water-language of Karnataka. Protecting our State is our responsibility.@CMofKarnataka should officially give a befitting response to the stupid comments made by Uddhav Thackeray.@OfficeofUT#ಬೆಳಗಾವಿನಮ್ಮದು
3/3— Siddaramaiah (@siddaramaiah) January 18, 2021
ಇಬ್ಬರು ಆಯುಷ್ ತಜ್ಞ ವೈದ್ಯರನ್ನು ಕೊವಿಡ್ ತಾಂತ್ರಿಕ ಸಲಹಾ ಸಮಿತಿಗೆ ನಾಮನಿರ್ದೇಶನಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಮಿತಿ ಸದಸ್ಯರಾಗಿ ಡಾ.ಅನಂತ್ ದೇಸಾಯಿ, ಡಾ.ಆನಂದ್ ಕಟ್ಟಿಯನ್ನು ರಾಜ್ಯ ಸರ್ಕಾರ ನಾಮನಿರ್ದೇಶನಗೊಳಿಸಿದೆ.
ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ತರ್ತು ಸೇವೆ ಬಳಕೆಗೆ CRPF ಮತ್ತು DRDO ಬೈಕ್ ಆ್ಯಂಬುಲೆನ್ಸ್ ಲಾಂಚ್ ಮಾಡಲಾಗಿದೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್‌ಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಿಡಿಕಾರಿದ್ದು, ಇದೊಂದು ರಾಜಕೀಯ, ಅವಿವೇಕಿತನದ ಹೇಳಿಕೆಯಾಗಿದೆ. ಸಾವಿರ ಮುಖ್ಯಮಂತ್ರಿಗಳು ಹೇಳಿದರೂ ಅದು ಸಾಧ್ಯವಿಲ್ಲ. ಇದು ಮುಖ್ಯಮಂತ್ರಿಗಳಿಗೆ ಶೋಭೆ ತರುವಂತಹ ಹೇಳಿಕೆಯಲ್ಲ ಎಂದಿದ್ದಾರೆ.
ಸಂಪುಟ ವಿಸ್ತರಣೆ ನಂತರದ ಬೆಳವಣಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ದೂರು ನೀಡಲು ಉದ್ದೇಶಿಸಿರುವ ಕೆಲವು ಬಿಜೆಪಿ ಶಾಸಕರು ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ದೆಹಲಿಗೆ ತೆರಳುವ ಸಾಧ್ಯತೆಯಿದೆ. ದೆಹಲಿಗೆ ಹೋಗಿ ಬಂದು ಸಭೆ ನಡೆಸಬೇಕೋ ಅಥವಾ ಸಭೆ ನಡೆಸಿ ದೆಹಲಿಗೆ ಹೋಗಬೇಕೋ ಎಂಬ ಬಗ್ಗೆ ನಿರ್ಧಾರವಾಗಿಲ್ಲ. ಆದರೆ ಈಗಾಗಲೇ ದೆಹಲಿಗೆ ಭೇಟಿ ನೀಡುವುದಾಗಿ ರೇಣುಕಾಚಾರ್ಯ, ಅರವಿಂದ್ ಬೆಲ್ಲದ್ ಬಹಿರಂಗ ಹೇಳಿಕೆ ನೀಡಿದ್ದಾರೆ.
ದೇಶದಿಂದ ಕೊರೊನಾ ವೈರಸ್ ಸಂಪೂರ್ಣ ನಾಶವಾಗಿಲ್ಲ. ಹಾಗಾಗಿ ಪ್ರತಿಯೊಬ್ಬರು ಕೊರೊನಾ ಲಸಿಕೆ ಪಡೆದುಕೊಳ್ಳಬೇಕು. ಅದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಿ. ಭಾರತ ದೇಶದಲ್ಲಿ ಉತ್ತಮವಾದ ಆರೋಗ್ಯ ಸೇವೆ ವ್ಯವಸ್ಥೆ ಇದೆ. ಕೇವಲ ಎರಡು ತಿಂಗಳಲ್ಲಿ ಐದು ಮಿಲಿಯನ್ ಜನರಿಗೆ ಲಸಿಕೆ ನೀಡುವ ಸಾಮರ್ಥ್ಯವಿದೆ ಎಂದು ತಿಳಿಸಿದ ಹೃದ್ರೋಗ ತಜ್ಞ ನಾರಾಯಣ ಹೃದಯಾಲಯ ಮುಖ್ಯಸ್ಥ ಡಾ.ದೇವಿಶೆಟ್ಟಿ ಲಸಿಕೆ ದೇವರು ನೀಡಿರುವ ಅವಕಾಶ ಎಂದರು.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಖಂಡಸಿ ಬೆಳಗ್ಗೆ 11.30 ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತದೆ.
ಜನವರಿ 26 ರಂದು ಟ್ರ್ಯಾಕ್ಟರ್ ಪರೇಡ್‌ಗೆ ತಡೆ ಕೋರಿ ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಕೇಂದ್ರದ ಅರ್ಜಿ ಕುರಿತು ಇಂದು ವಿಚಾರಣೆ ನಡೆಸಲಾಗುತ್ತದೆ.
ಉತ್ತರ ಪ್ರದೇಶದ ಲಖನೌನಲ್ಲಿ ಅಮೃತ್‌ಸರ- ಜೈನಗರ ಎಕ್ಸ್‌ಪ್ರೆಸ್ ರೈಲಿನ ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಲಘು ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.5 ರಷ್ಟು ದಾಖಲಾಗಿದೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಬಗ್ಗೆ ನನಗೆ ಗೌರವವಿದೆ. ಆದರೆ ಉದ್ಧವ್ ಠಾಕ್ರೆ ಟ್ವೀಟ್ ಖಂಡಿಸುತ್ತೇನೆ ಎಂದು ಟಿವಿ9 ಗೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.
ಡಿಸಿಎಂ ಗೋವಿಂದ ಕಾರಜೋಳ ಇಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ 10:30 ಕ್ಕೆ ಚಡಚಣ ತಾಲೂಕಿನ ಹತ್ತಳ್ಳಿ ಬಳಿ ಬೋರಿ ಹಳ್ಳಕ್ಕೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಲಿದ್ದಾರೆ. ನಂತರ ಬೆಳಿಗ್ಗೆ 11 ಕ್ಕೆ ಚಡಚಣ ನೂತನ ಪ್ರವಾಸಿ ಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ವಿದ್ಯುತ್ ಸ್ಪರ್ಶಿಸಿ ಗಾಯಗೊಂಡ ಹದ್ದಿಗೆ ಆರೈಕೆ ಮಾಡಿ, ಪೀಪಲ್ ಫಾರ್ ಅನಿಮಲ್ ಸಂಸ್ಥೆಗೆ ರವಾನೆ ಮಾಡಿದ ಮೈಸೂರು ಯುವಕರ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಆರ್ಕೆಸ್ಟ್ರಾ ನಿಷೇಧ ಹಿನ್ನೆಲೆ ಸಾವಿರಾರು ಕಲಾವಿದರ ಬದುಕು ಬೀದಿಗೆ ಬಿದ್ದಿದೆ ಎಂದು ಸರ್ಕಾರದ ಗಮನ ಸೆಳೆಯಲು ವಿನೂತನ ಪ್ರತಿಭಟನೆ ಮುಂದಾದ ಕಲಾವಿದರು ಇಂದು ಬೆಳಗ್ಗೆ 11 ಗಂಟೆಯಿಂದ ನಗರದ ಮೌರ್ಯ ಸರ್ಕಲ್ ಬಳಿ 24 ಗಂಟೆಗಳ ಕಾಲ ಚಿತ್ರ ಗೀತೆ ಹಾಡುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ 9 ಮೆಡಿಕಲ್ ಕಾಲೇಜು, 106 ಖಾಸಗಿ ಆಸ್ಪತ್ರೆ ಸೇರಿದಂತೆ ಒಟ್ಟು 141 ಕೇಂದ್ರಗಳಲ್ಲಿ ಇಂದು ಕೊವಿಡ್ ಲಸಿಕೆ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ 42,000 ಆರೋಗ್ಯ ಕಾರ್ಯಕರ್ತರಿಗೆ ಮತ್ತು ಮೆಡಿಕಲ್ ಕಾಲೇಜುಗಳಲ್ಲಿ 20 ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತದೆ.
ಮೈಸೂರಿನಲ್ಲಿ ನಡೆದಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲಿಗೆ ಬಿದ್ದು ಮೈಸೂರು ವಿವಿ ರಿಜಿಸ್ಟ್ರಾರ್ ಶಿವಪ್ಪ ನಮಸ್ಕರಿಸಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ದುರ್ಗಾದೇವಿ ಬೆಟ್ಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿದ್ದ ಬೋನಿಗೆ ಗಂಡು ಚಿರತೆ ಬಿದ್ದಿದೆ.
ಬೆಂಗಳೂರಿನಲ್ಲಿ ಸಿರಿಯಾ ನಂಟು ಹೊಂದಿರುವ ಶಂಕಿತ ಐಸಿಸ್ ಉಗ್ರನ ಗುರುತು ಪತ್ತೆಯಾಗಿದ್ದು, ರಾಮನಗರದ ಮುಜೀಬ್ ಬೇಗ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್‌ನ ಖಂಡಿಸಿ, ಗಡಿ ವಿಚಾರದಲ್ಲಿ ಸರ್ಕಾರ ಬೇಜವಾಬ್ದಾರಿ ತೋರುತ್ತಿದೆ ಎಂದು ಬೆಳಗಾವಿಯ ಚೆನ್ನಮ್ಮ ಸರ್ಕಲ್‌ನಲ್ಲಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಯುತ್ತಿದೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಿಲಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷರನ್ನು ಹೊರತುಪಡಿಸಿ ನೂತನ ಕೋರ್ ಕಮಿಟಿ ರಚನೆಗೆ ಸಂಬಂಧಿಸಿ ಸಭೆ ನಡೆಸಲಾಗುತ್ತದೆ.
ಸ್ಯಾಂಡಲ್‌ವುಡ್ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್ಗೆ ಸಂಬಂಧಿಸಿ ಆದಿತ್ಯ ಆಳ್ವಾರನ್ನು ಸಿಸಿಬಿ ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. ಜನವರಿ 22ರ ವರೆಗೆ ಆದಿತ್ಯ ಆಳ್ವಾ ಸಿಸಿಬಿ ಪೊಲೀಸರ ವಶದಲ್ಲಿರುತ್ತಾರೆ.
ಕನ್ನಡಿಗರ ಪರವಾಗಿ ಸಿಎಂ ಕೇವಲ ನಾಟಕವಾಡುತ್ತಿದ್ದಾರೆ. ನಾವು ಯಾವುದೇ ಕಾರಣಕ್ಕೂ ಬೆಳಗಾವಿ ಬಿಟ್ಟುಕೊಡಲ್ಲ. ಈ ವಿಚಾರವನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಬೇಕೆಂದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸಿಎಂ ಯಡಿಯೂರಪ್ಪ ಬಹಳ ನೀಚ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.
ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿ ಮೊದಲು ಸೊಲ್ಲಾಪುರ ಕರ್ನಾಟಕ ರಾಜ್ಯಕ್ಕೆ ಸೇರಬೇಕು. ಮುಂಬೈನ ಅರ್ಧ ಭಾಗ ಕರ್ನಾಟಕ ರಾಜ್ಯಕ್ಕೆ ಸೇರಬೇಕು ಇದರ ಬಗ್ಗೆ ಮೊದಲು ತೀರ್ಮಾನ ಮಾಡಲಿ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. ಇಂದು ಪಂದ್ಯದ ನಾಲ್ಕನೇ ದಿನವಾಗಿದ್ದು, ಬ್ಯಾಟಿಂಗ್ ಆರಂಭಿಸಿರುವ ಆಸ್ಟ್ರೇಲಿಯಾ ಪ್ರಮುಖ 6 ವಿಕೆಟ್ ಕಳೆದುಕೊಂಡು 230 ರನ್ ಗಳಿಸಿದೆ.
ಮಣಿಪುರದ ಚುರಾಚಂದಪುರದಲ್ಲಿ ಲಘು ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.7 ರಷ್ಟು ದಾಖಲಾಗಿದೆ.
ಮಧ್ಯರಾತ್ರಿ ಕಾಂಪೋಂಡ್ನಲ್ಲಿದ್ದ ಬೈಕ್ಗಳಿಗೆ ದುಷ್ಕಮ್ರಿಗಳು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಘಟನೆ ದೊಡ್ಡಬಳ್ಳಾಪುರ ನಗರದ ಶ್ರೀನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗದಗ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆ ವಾರಿಯರ್ಸ್‌ಗೆ ಲಸಿಕೆ ನೀಡಲಾಗುತ್ತದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಲಸಿಕೆ ಕಾರ್ಯಕ್ರಮ ನಡೆಯಲಿದ್ದು, ಗದಗ ಜಿಮ್ಸ್ ಆಸ್ಪತ್ರೆ ಹಾಗೂ ಕಾಲೇಜ್ ವೈದ್ಯರು, ವಿದ್ಯಾರ್ಥಿಗಳು ಸೇರಿ 2,400 ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗುತ್ತದೆ. ಪ್ರತಿನಿತ್ಯ 600 ವಾರಿಯರ್ಸ್‌ಗಳಿಗೆ ಲಸಿಕೆ ಹಾಕುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಮ್ಸ್ ನಿರ್ದೇಶಕ ಡಾ. ಪಿ ಎಸ್ ಭೂಸರೆಡ್ಡಿ ತಿಳಿಸಿದ್ದಾರೆ.
ಚೀನಾದ ಸಿನೋವಾಕ್, ಬ್ರಿಟನ್‌ನ ಅಸ್ಟ್ರಾಜೆನಿಕಾ ಲಸಿಕೆಗಳ ತುರ್ತು ಬಳಕೆಗೆ ಬ್ರೆಜಿಲ್ ಅನುಮತಿ ನೀಡಿದೆ.
ಪ್ರಯೋಗದ ಸೂಕ್ತ ದಾಖಲೆ ಸಲ್ಲಿಸದ ಹಿನ್ನೆಲೆ ರಷ್ಯಾ ಅಭಿವೃದ್ಧಿ ಪಡಿಸಿರುವ ಕೊವಿಡ್ ಲಸಿಕೆ ಸ್ಪುಟ್ನಿಕ್ ವಿ ಯನ್ನು ತುರ್ತು ಬಳಕೆಗೆ ಬ್ರೆಜಿಲ್ ನಿರಾಕರಿಸಿದೆ.
ಜ.20ರಂದು ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣ ಮಾಡಲಿದ್ದು, ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಹಿಲ್ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗುತ್ತದೆ. ಡೊನಾಲ್ಡ್ ಟ್ರಂಪ್ ಬೆಂಬಲಿಗರ ಹಿಂಸಾಚಾರ ಹಿನ್ನೆಲೆ ಭದ್ರತೆಗೆ 25 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುತ್ತದೆ.
ದೆಹಲಿಯಲ್ಲಿ ಇಂದು ಮಧ್ಯಾಹ್ನ ಕೊವಿಡ್ ಲಸಿಕೆಯ ರಫ್ತುವಿಗೆ ಸಂಬಂಧಿಸಿ ಕೇಂದ್ರ ಆರೋಗ್ಯ ಇಲಾಖೆ ಮತ್ತು ವಿದೇಶಾಂಗ, ಫಾರ್ಮಾಸ್ಯುಟಿಕಲ್ಸ್ ಇಲಾಖೆ ಸಚಿವರ ಉನ್ನತ ಮಟ್ಟದ ಸಭೆ ನಡೆಯಲಿದೆ. ಸಭೆಯಲ್ಲಿ ಭಾರತ್ ಬಯೋಟೆಕ್ ಸಂಸ್ಥೆ ಮತ್ತು ಸೆರಮ್ ಇನ್ಸ್‌ಟಿಟ್ಯೂಟ್‌ನ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ನಾಗರಿಕ ಹಕ್ಕು ಕಾಪಾಡುವುದು, ಆನ್‌ಲೈನ್ ಸುದ್ದಿ ಮಾಧ್ಯಮ ವೇದಿಕೆ ದುರುಪಯೋಗಕ್ಕೆ ತಡೆಯಲು ಮತ್ತು ಬಹು ಮುಖ್ಯವಾಗಿ ಮಹಿಳಾ ಭದ್ರತೆಗೆ ವಿಶೇಷ ಒತ್ತು ನೀಡುವ ವಿಷಯಗಳ ಚರ್ಚೆ ನಡೆಸಲು ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿ ಫೇಸ್‌ಬುಕ್, ಟ್ವಿಟ್ಟರ್ ಸಂಸ್ಥೆ ಅಧಿಕಾರಿಗಳಿಗೆ ಜನವರಿ 21ರಂದು ಹಾಜರಾಗುವಂತೆ ಸೂಚನೆ ನೀಡಿದೆ.
ದುರುಪಯೋಗ ತಡೆಗಟ್ಟುವ ವಿಷಯಕ್ಕೆ ಸಂಬಂಧಿಸಿ ಫೇಸ್‌ಬುಕ್, ಟ್ವಿಟ್ಟರ್ ಸಂಸ್ಥೆ ಅಧಿಕಾರಿಗಳಿಗೆ ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್ ನೀಡಿದೆ.
ಕಲಬುರಗಿಯ ಜೈ ಭವಾನಿ ಕನ್ವೆನ್ಷನ್ ಹಾಲ್‌ನಲ್ಲಿ ಇಂದು ವಿಭಾಗ ಮಟ್ಟದ ಕಾಂಗ್ರೆಸ್ ಸಂಕಲ್ಪ ಸಮಾವೇಶ ನಡೆಯಲಿದ್ದು, ಬೆಳಗ್ಗೆ 11 ಕ್ಕೆ ಸಮಾವೇಶವನ್ನು ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಈಶ್ವರ ಖಂಡ್ರೆ, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ನಾಯಕರು ಭಾಗಿಯಾಗುವ ಸಾಧ್ಯತೆಯಿದೆ.
ಬೆಳಗ್ಗೆ 11 ಕ್ಕೆ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಧರಣಿ ಕೂರಲಿರುವ ಕಲಾವಿದರು ಹಾಡು, ನೃತ್ಯ, ಮಿಮಿಕ್ರಿ, ವಾದ್ಯಗೋಷ್ಠಿ ಮೂಲಕ ಪ್ರತಿಭಟನೆ ಮಾಡಲಿದ್ದಾರೆ. ಪ್ರತಿಭಟನೆಯಲ್ಲಿ 2,000 ಕಲಾವಿದರು ಭಾಗಿಯಾಗುವ ನಿರೀಕ್ಷೆಯಿದೆ.
ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಆರ್ಕೆಸ್ಟ್ರಾ ನಿಷೇಧ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಕರ್ನಾಟಕ ವಾದ್ಯಗೋಷ್ಠಿ ಕಲಾವಿದರ ಸಂಘದ ನೇತೃತ್ವದಲ್ಲಿ 2 ದಿನಗಳ ಕಾಲ ಪ್ರತಿಭಟನೆ ಮಾಡಲು ಕಲಾವಿದರು ಮುಂದಾಗಿದ್ದಾರೆ.
ಅಪಘಾತವೊಂದರಲ್ಲಿ ಕಮಲ್ ಕಾಲಿಗೆ ಗಾಯವಾಗಿತ್ತು. ಆಗ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು. ಇತ್ತೀಚೆಗೆ ಚುನಾವಣಾ ಪ್ರಚಾರ ಹಿನ್ನೆಲೆ ನೋವು ಕಾಣಿಸಿಕೊಂಡಿದ್ದು, ಮತ್ತೊಮ್ಮೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುತ್ತಿದ್ದೇನೆ ಎಂದು ನಟ ಕಮಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
Published On - 7:29 pm, Mon, 18 January 21