ಜಗತ್ತಿನೆಲ್ಲೆಡೆಯ ಸುದ್ದಿ ಕ್ಷಣಾರ್ಧದಲ್ಲಿ ಹರಿದು ಬಂದು ಅಂಗೈ ಸೇರುವಾಗ ಯಾವುದರತ್ತ ಕಣ್ಣು ಹಾಯಿಸಬೇಕು ಎಂಬ ಗೊಂದಲ ಸಹಜ.. ಎಷ್ಟೋ ಬಾರಿ ಸುದ್ದಿಯ ಹೆಸರಿನಲ್ಲಿ ಅಸಂಗತ ಸಂಗತಿಗಳೂ ತೇಲಿ ಬರುತ್ತವೆ. ಅವುಗಳನ್ನು ಸೋಸುವುದೇ ಹರಸಾಹಸ. ನಮ್ಮ ಓದುಗರನ್ನು ಇಂತಹ ಗೊಂದಲಗಳಿಂದ ಪಾರು ಮಾಡಲೆಂದೇ ಪ್ರತಿನಿತ್ಯ Live Blog ಮೂಲಕ ಆಯಾ ಕ್ಷಣದ ಮುಖ್ಯಾಂಶಗಳನ್ನು ನೀಡುವ ಪ್ರಯತ್ನ ಮಾಡುತ್ತಿದ್ದೇವೆ. ಇದು ನಿಮಗಿಷ್ಟವಾಗಿದೆ ಎನ್ನುವ ನಂಬಿಕೆ ನಮ್ಮದು.. ಬನ್ನಿ ಇಂದಿನ ಸುದ್ದಿಯ ಹರಿವನ್ನು ನೋಡೋಣ. ಸುದ್ದಿಯ ಸಂಪೂರ್ಣ ವಿವರ ವೆಬ್ಸೈಟ್ನ ವಿವಿಧ ವಿಭಾಗಗಳಲ್ಲಿ ಲಭ್ಯವಿರುತ್ತವೆ. ಓದಲು ಮರೆಯದಿರಿ.
20:04 pm ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮುಗಲಮರಿಯಲ್ಲಿ ಕೃಷಿಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.
ಮುಗಲಮರಿ ಗ್ರಾಮದಲ್ಲಿ ಚರಣ್(10), ತೇಜು(11) ಮೃತರು. ಸೂಕ್ತ ಸಮಯಕ್ಕೆ ಆ್ಯಂಬುಲೆನ್ಸ್ ಬಾರದ ಹಿನ್ನೆಲೆ ಕುಟುಂಬಸ್ಥರ ಗಲಾಟೆ.
ಗುದನಾಳದಲ್ಲಿ 9 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ 17 ಜರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಇವರಿಂದ ಬರೋಬ್ಬರಿ 9 ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿದೆ. ಬ್ಯಾಗ್ ಹಾಗೂ ಬಂಧಿತರ ಜೇಬಿನಲ್ಲೂ ಚಿನ್ನವನ್ನು ಇಟ್ಟುಕೊಳ್ಳಲಾಗಿತ್ತು. ಅಲ್ಲದೆ, ಕತ್ತಿಗೆ ಇವರು ದೊಡ್ಡ ದೊಡ್ಡ ಚಿನ್ನದ ಸರ ಹಾಕಿಕೊಂಡಿದ್ದರು.
6:43 pm: ದೆಹಲಿಯಲ್ಲಿ ಗಣರಾಜ್ಯೋತ್ಸವ ನಂತರ ಟ್ರ್ಯಾಕ್ಟರ್ ರ್ಯಾಲಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದು ದೆಹಲಿಯಲ್ಲಿ ಪೊಲೀಸ್ ಆಯುಕ್ತ ದೀಪೇಂದ್ರ ಪಾಠಕ್ ಹೇಳಿಕೆ ನೀಡಿದ್ದಾರೆ. ಟ್ರ್ಯಾಕ್ಟರ್ ರ್ಯಾಲಿಗೆ 3 ಸ್ಥಳಗಳಲ್ಲಿ ಮಾತ್ರ ಅನುಮತಿ ನೀಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.
18:25 pm ಧಾರವಾಡದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಮೃತಪಟ್ಟಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಸ್ತೆ ಸುರಕ್ಷತೆಯ ಕುರಿತು ಸುಪ್ರೀಂ ಕೋರ್ಟ್ ಸಮಿತಿ ವರದಿ ಕೇಳಿ ರಾಜ್ಯ ಸರ್ಕಾರಕ್ಕೆ ಸುತ್ತೋಲೆ ಕಳುಹಿಸಿದೆ.
ತುಂಬಾ ಹುಷಾರಿಲ್ಲದ ಕಾರಣ ಈಗ ರೆಸ್ಟ್ ಮಾಡುತ್ತಿದ್ದೇನೆ. ಪೇಂಟಿಂಗ್ ಮಾಡೋದನ್ನು ಲೈವ್ ಮಾಡುತ್ತಾ ಮಾತನಾಡಿದ ಸಂಜನಾ ಈಗ ಬೆಂಗಳೂರಿನಲ್ಲೇ ಇದ್ದೇನೆ ಎಂದು ತಿಳಿಸಿದರು. ಟ್ರೋಲ್ ಮಾಡೋರು ನನ್ನನ್ನು ಫಾಲೋ ಮಾಡಬೇಡಿ ಎಂದರು.
ಗದಗದಲ್ಲಿ ಪುಟ್ಟರಾಜ ಗವಾಯಿ ಬಸ್ ನಿಲ್ದಾಣವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಲೋಕಾರ್ಪಣೆ ಮಾಡಿದರು. ಈ ವೇಳೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ಗದಗ ಶಾಸಕ ಎಚ್ ಕೆ ಪಾಟೀಲ್, ಸಂಸದ ಶಿವಕುಮಾರ ಉದಾಸಿ, ಸೇರಿದಂತೆ ಹಲವರು ಭಾಗಿಯಾಗಿದ್ದರು.
ಜನವರಿ 26ರಂದು ಬೆಂಗಳೂರಿನಲ್ಲಿ ರೈತರ ಟ್ರ್ಯಾಕ್ಟರ್ ಪರೇಡ್ನನ್ನು ತಡೆದರೆ ಅಲ್ಲಿಯೇ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಮೈಸೂರಿನಲ್ಲಿ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ. ಸಿಎಂ ರೈತರ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರೈತರನ್ನು ಗೌರವದಿಂದ ಸ್ವಾಗತಿಸಿ, ಬೀಳ್ಕೊಡಬೇಕು. ರೈತರನ್ನು ತಡೆಯಲು ಮುಂದಾದರೆ ಸಮಸ್ಯೆ ಎದುರಿಸುತ್ತಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಐಸಿಯುನಲ್ಲಿ ಶಶಿಕಲಾ ನಟರಾಜನ್ಗೆ ಚಿಕಿತ್ಸೆ ನೀಡುತ್ತಿದ್ದು, ಈ ಸಂಬಂಧ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದೆ. ಶಶಿಕಲಾ ಎಚ್ಚರವಾಗಿದ್ದಾರೆ, ಪ್ರಜ್ಞೆ ಬಂದಿದೆ, ಚೇತರಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ರಕ್ತದೊತ್ತಡ ನಿಯಂತ್ರಣದಲ್ಲಿದೆ ಎಂದು ಸ್ಪಷ್ಟವಾಗಿದೆ.
ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ತನ್ನ ಮಾವನ ಅಂತಿಮ ದರ್ಶನಕ್ಕೆ ವಿನಯ್ ಕುಲಕರ್ಣಿ ತೆರಳಿದ್ದು, ಬಿಗಿ ಭದ್ರತೆಯಲ್ಲಿ ಪೊಲೀಸರು ಕರೆದೊಯ್ದಿದ್ದಾರೆ.
ತಮಿಳುನಾಡಿನ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತಿಯೂರ್‌ನಲ್ಲಿ ರಾಹುಲ್ ಗಾಂಧಿ ರೋಡ್ ಶೋನಲ್ಲಿ ಭಾಗವಹಿಸಿದ್ದಾರೆ.
ಹುಬ್ಬಳ್ಳಿ ಹೊರವಲಯದ ಕಾರವಾರ ರಸ್ತೆಯಲ್ಲಿ 35 ಲಕ್ಷ ನಗದು ದೋಚಿ ಪರಾರಿಯಾಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಉಳಿದ ಮೂವರು ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಎನ್‌ಸಿಸಿ ಮತ್ತು ಎನ್‌ಎಸ್‌ಎಸ್ ಕೆಡೆಟ್‌ಗಳ ಜೊತೆ ಸಂವಾದ ನಡೆಸಿದ ದೇಶದ ಪ್ರಧಾನಿ ಕೊರೊನಾ ಲಸಿಕೆಯ ಬಗ್ಗೆ ಮಾಹಿತಿ ನೀಡಬೇಕು. ದೇಶದ ಜನರಿಗೆ ಸರಿಯಾದ ಮಾಹಿತಿ ನೀಡಬೇಕು. ಇದಕ್ಕಾಗಿ ನೀವು ಮುಂದೆ ಬರಬೇಕೆಂದು ಮೋದಿ ಮನವಿ ಮಾಡಿದರು.
ದೆಹಲಿಯಲ್ಲಿ ಜನವರಿ 26 ರಂದು ರೈತರಿಂದ ನಡೆಯುವ ಟ್ರ್ಯಾಕ್ಟರ್ ಮೆರವಣಿಗೆಗೆ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ಸ್ವರಾಜ್ ಪಕ್ಷದ ನಾಯಕರಾಗಿರುವ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.
ರಾಜಸ್ಥಾನದ 17 ಜಿಲ್ಲೆಗಳಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, ಡಿಸೆಂಬರ್ 25ರಿಂದ ಈವರೆಗೆ 6,595 ಹಕ್ಕಿಗಳು ಸಾವನ್ನಪ್ಪಿವೆ ಎಂದು ರಾಜಸ್ಥಾನದ ಪಶುಸಂಗೋಪನಾ ಇಲಾಖೆ ಮಾಹಿತಿ ಲಭ್ಯವಾಗಿದೆ.
ಮೈಸೂರಿನ ದರ್ಶನ್ ಫಾರ್ಮ್‌ಹೌಸ್‌ನಲ್ಲಿಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ನಟ ದರ್ಶನ್ನನ್ನು ಭೇಟಿಯಾಗಿದ್ದರು. ಕೆಲ ಹೊತ್ತು ಕೃಷಿ ಇಲಾಖೆ ರಾಯಭಾರಿ ಯೋಜನೆ ಬಗ್ಗೆ ಚರ್ಚೆ ನಡೆಸಿದ್ದು, ಯಾವುದೇ ಸಂಭಾವನೆ ಪಡೆಯದೇ ರಾಯಭಾರಿಯಾಗಲು ದರ್ಶನ್ ಒಪ್ಪಿಕೊಂಡಿದ್ದಾರೆ.
ನಾಳೆ ಜನವರಿ 25ರಂದು ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಪ್ರಧಾನಿ ನರೇಂದ್ರ ಮೋದಿ ಪಿಎಂಆರ್‌ಬಿಪಿ ಪುರಸ್ಕೃತರ ಜೊತೆ ಸಂವಾದ ನಡೆಸುತ್ತಾರೆ.
ಜನವರಿ 26ರಂದು ಬೆಂಗಳೂರಿನಲ್ಲಿ ನಡೆಯುವ ಟ್ರ್ಯಾಕ್ಟರ್ ಮೆರವಣಿಗೆಗೆ ಸಂಬಂಧಿಸಿ 1 ಸಾವಿರ ಟ್ರ್ಯಾಕ್ಟರ್‌ಗಳಿಗೆ ಅವಕಾಶ ನೀಡಲು ಪೊಲೀಸರೊಂದಿಗೆ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದರು.
ಬೆಳಗಾವಿಯಿಂದ ಯರಗಟ್ಟಿಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮರಣ ಹೊಂದಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ನಡೆದಿದೆ. ಡಿಕ್ಕಿ ರಭಸಕ್ಕೆ ನಜ್ಜುಗುಜ್ಜಾಗಿ ಬಸ್ನ ಅಡಿಯಲ್ಲಿ ಕಾರು ಸಿಲುಕಿಕೊಂಡಿದೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ದೆಹಲಿಯಲ್ಲಿ ರೈತರ ಪ್ರತಿಭಟನೆ ಬೆಂಬಲಿಸಿ ಜನವರಿ 26ರಂದು ಬೆಳಗಾವಿಯಲ್ಲೂ ರೈತರಿಂದ ಟ್ರ್ಯಾಕ್ಟರ್ ಮೆರವಣಿಗೆ ನಡೆಯುತ್ತದೆ ಎಂದು ತಿಳಿಸಿದ ರೈತ ಮುಖಂಡ ಚೂನಪ್ಪ ಪೂಜಾರಿ ಸುವರ್ಣಸೌಧ ಮುಂದೆ ಧ್ವಜಾರೋಹಣ ನೆರವೇರಿಸಿ ಮೆರವಣಿಗೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಹಾರುಗೇರಿ ಗ್ರಾಮದ ಕೆರೆಗೆ ಈಜಲು ತೆರಳಿದ್ದಾಗ ಮುಳುಗಿ ಸಾವನ್ನಪ್ಪಿದ್ದ ಬಾಲಕನ ಶವ ಪತ್ತೆಯಾಗಿದೆ.
ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಮತ್ತು ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸುವ ಕಲಾವಿದರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದಾರೆ.
ಬಿಜೆಪಿಗೆ ಮಾತ್ರ ಅಸ್ಸಾಂನ ದೊಡ್ಡ ಸಮಸ್ಯೆಯನ್ನು ಪರಿಹರಿಸಬಹುದು. ನಾವು ಅಸ್ಸಾಂ ಅನ್ನು ಗುಂಡುಗಳು ಮತ್ತು ಆಂದೋಲನಗಳಿಂದ ಮುಕ್ತಗೊಳಿಸಿದ್ದೇವೆ. ಬಿಜೆಪಿಗೆ 5 ವರ್ಷ ಹೆಚ್ಚು ಕಾಲಾವಕಾಶ ನೀಡಿ. ನಾವು ಅಸ್ಸಾಂ ಅನ್ನು ಪ್ರವಾಹದಿಂದ ಮುಕ್ತಗೊಳಿಸುತ್ತೇವೆ ಎಂದು ಅಸ್ಸಾಂನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಬೆಂಗಳೂರಿನ ಸಮಾಜ ಸೇವಕರೊಬ್ಬರು ‘ತಾಂಡವ್’ ಎಂಬ ವೆಬ್ ಸರಣಿಯ ನಿರ್ದೇಶಕ, ನಿರ್ಮಾಪಕ ಮತ್ತು ಪ್ರಮುಖ ನಟರ ವಿರುದ್ಧ ದೂರು ದಾಖಲಿಸಿದ್ದಾರೆ. ಕೆ.ಆರ್ಪುರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. ಹೀಗಾಗಿ ಈ ಭಾಗಕ್ಕೆ ವಿಶೇಷವಾಗಿ ಹೆಚ್ಚು ಒತ್ತು ನೀಡುತ್ತೇವೆ. ಅಂಗನವಾಡಿ ಮೂಲಕ ಮಕ್ಕಳ ಆರೋಗ್ಯ ತಪಾಸಣೆ ಆರಂಭಗೊಂಡಿದೆ. 2 ಸಾವಿರ ಹೊಸ ಅಂಗನವಾಡಿ ಕೇಂದ್ರಕ್ಕೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆ ಕೇಂದ್ರಕ್ಕೆ ಕಳಿಸಿದ್ದೇವೆ ಎಂದು ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ.
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು, ನಮ್ಮ ದೇಶ್ಕಿ ಬೇಟಿ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಳಿಗೆ ನಮಸ್ಕರಿಸುತ್ತೇವೆ. ಹೆಣ್ಣು ಮಗುವಿಗೆ ಶಿಕ್ಷಣ, ಉತ್ತಮ ಆರೋಗ್ಯ ಸೇವೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಹೆಣ್ಣು ಮಗುವನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಎಲ್ಲರನ್ನೂ ವಿಶೇಷವಾಗಿ ಪ್ರಶಂಸಿಸುವ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
Today is also a day to specially appreciate all those working towards empowering the girl child and ensuring she leads a life of dignity and opportunity. #DeshKiBeti
— Narendra Modi (@narendramodi) January 24, 2021
On National Girl Child Day, we salute our #DeshKiBeti and the accomplishments in various fields. The Central Government has undertaken many initiatives that focus on empowering the girl child, including access to education, better healthcare and improving gender sensitivity.
— Narendra Modi (@narendramodi) January 24, 2021
ನಾನು ಯಾವಾಗ ಶಾಸಕನಾದ ಸಮಯದಲ್ಲಿ ಬಡ ಕುಟುಂಬಗಳ ಹುಡುಗಿಯರ ವಿವಾಹವನ್ನು ಹೊರೆಯಾಗಿ ಪರಿಗಣಿಸದಂತೆ ಯೋಜನೆಯನ್ನು ಪರಿಚಯಿಸಿದೆ. ನಾನು ಮುಖ್ಯಮಂತ್ರಿಯಾದಾಗ, ಹೆಣ್ಣುಮಕ್ಕಳನ್ನು ವರವಾಗಿ ಕಾಣಬೇಕೇ ಹೊರತು ಅವರು ಹೊರೆಯಲ್ಲ ಆದ್ದರಿಂದ ನಾವು ಲಾಡ್ಲಿ ಲಕ್ಷ್ಮಿ ಯೋಜನೆಯನ್ನು ತಂದಿದ್ದೇವೆ ಎಂದು ರಾಷ್ಟ್ರೀಯ ಬಾಲಕಿಯರ ದಿನದಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸ್ಫೋಟಕ ವಸ್ತುಗಳು ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದಿಲ್ಲ. ರಾಜ್ಯದ ಪೊಲೀಸರು ಸಮರ್ಥರಿದ್ದಾರೆ. ಅವರೇ ತನಿಖೆ ಕೈಗೊಳ್ಳುತ್ತಾರೆ ಎಂದು ಚಿಕ್ಕಮಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದ ಹೂಸೂರ ಓಣಿಯ ಮುರಗೇಶ ಎನ್ನುವವರ ಮಗಳು ಬಾಲಕಿ ಪ್ರೀತಿ 611 ರೂ.ದೇಣಿಗೆ ನೀಡಿದ್ದಾಳೆ. ಸೈಕಲ್ ಖರೀದಿಸಲು ಸಂಗ್ರಹಿಸಿದ್ದ ಹಣವನ್ನು ದೇಣಿಗೆ ರೂಪದಲ್ಲಿ ಬಾಲಕಿ ಪ್ರೀತಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾಳೆ.
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿರಗುಡಿ ಗ್ರಾಮದಲ್ಲಿ ಹೆತ್ತವರ ನೆನಪಿಗಾಗಿ ಮನೆಯಲ್ಲಿ ತಂದೆ ತಾಯಿಯ ಮೂರ್ತಿ ಸ್ಥಾಪನೆ ಮಾಡಲಾಗಿದೆ. ನಿರಗುಡಿ ಗ್ರಾಮದ ದಶರಥ ಎಂಬುವರಿಂದ 2 ಲಕ್ಷ ರೂ.ವೆಚ್ಚದಲ್ಲಿ ತಂದೆ ವಿಶ್ವನಾಥ್ ಹಾಗೂ ತಾಯಿ ಲಕ್ಷ್ಮಿಬಾಯಿ ಎಂಬುವರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.
ನಮ್ಮದು ಸಂಸ್ಕೃತಿ ಪ್ರಧಾನ ದೇಶ. ಪುರುಷ ಪ್ರಧಾನ ದೇಶವಲ್ಲ. ಮಹಿಳೆಯರನ್ನು ಪೂಜಿಸುವ ದೇಶವಿದು.ಬಿಜೆಪಿಯಲ್ಲಿ ಮಹಿಳೆಯರಿಗೆ ಗೌರವ ನೀಡುವುದರ ಜೊತೆಗೆ ಅಧಿಕಾವನ್ನೂ ನೀಡಲಾಗಿದೆ ಎಂದು ಹೊಸಪೇಟೆಯಲ್ಲಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೋರಾಟದ ಹಿನ್ನೆಲೆಯಲ್ಲಿ ಜ.26ರಂದು ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ಬೆಂಗಳೂರಿನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿಕೆ ನೀಡಿದ್ದಾರೆ. ಮಧ್ಯಾಹ್ನ 12ಕ್ಕೆ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾ ಱಲಿ ಹಮ್ಮಿಕೊಳ್ಳಲಾಗಿದೆ. ರೈತ, ದಲಿತ, ಐಕ್ಯ ಹೋರಾಟ ಸಮಿತಿಯಿಂದ ಱಲಿ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ತುಮಕೂರು ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗದಲ್ಲಿಯೂ ಕಾಮಗಾರಿ ಪ್ರಗತಿಯಲ್ಲಿದೆ. ಆದರೆ ಹಾಸನದಲ್ಲಿ ಇನ್ನೂ ಕಾಮಗಾರಿ ಆರಂಭವೇ ಆಗಿಲ್ಲ. ಹಾಸನ ಜಿಲ್ಲೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ನಾನು ಇರುವಾಗಲೇ ಏರ್‌ಪೋರ್ಟ್ ನಿರ್ಮಾಣವಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮನವಿ ಮಾಡಿದ್ದಾರೆ.
ನನ್ನ ಮಗಳು ಸೌಮ್ಯ ತಪ್ಪು ಮಾಡಿದ್ದರೆ ಮಾತ್ರ ಕ್ರಮ ಕೈಗೊಳ್ಳಲಿ. ಸೌಮ್ಯ ಮತ್ತು ಅಂಜಲಿ ಇಬ್ಬರೂ ಶಾಸಕರು. ಇಬ್ಬರಿಗೂ ಬಿದ್ದು ಗಾಯವಾಗಿದೆ. ಇವರನ್ನು ಬೀಳಿಸಿದ್ಯಾರು? ಇವರು ಬಿದ್ದು ಗಾಯಗಳಾಗುವುದಕ್ಕೆ ಕಾರಣವೇನು? ಈ ಬಗ್ಗೆ ಗೃಹ ಮಂತ್ರಿಗಳು ಬಾಯಿ ಬಿಡುತ್ತಿಲ್ಲ. ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಿಜೆಪಿ ಕೈಗೊಂಬೆ ಆಗಿದೆ ಎಂದು ಸರ್ಕಾರದ ವಿರುದ್ಧ ರಾಮಲಿಂಗರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯಲ್ಲಿ ಮೆಟ್ರೋ ಪಾರ್ಕಿಂಗ್ ಲಾಟ್‌ಗಳಿಗೆ ನಿರ್ಬಂಧ ಹೇರಲಾಗಿದೆ. ಜನವರಿ 25 ಮತ್ತು 26ರಂದು ವಾಹನ ಪಾರ್ಕಿಂಗ್‌ಗೆ ಅವಕಾಶವಿರುವುದಿಲ್ಲ.ಭದ್ರತಾ ದೃಷ್ಟಿಯಿಂದ ವಾಹನ ಪಾರ್ಕಿಂಗ್‌ಗೆ ನಿರ್ಬಂಧ ಹೇರಲಾಗಿದೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಮಿಳುನಾಡಿನ ಇರೋಡ್ಗೆ ಭೇಟಿ ನೀಡಿದರು. ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಅವರನ್ನು ಸ್ವಾಗತಿಸಿದರು. ಏನು ಮಾಡಬೇಕೆಂದು ಹೇಳಲು ಅಥವಾ ನನ್ನ ಮನ್ ಕಿ ಬಾತ್ ಹೇಳಲು ನಾನು ಇಲ್ಲಿಗೆ ಬಂದಿಲ್ಲ. ನಿಮ್ಮ ಮಾತುಗಳನ್ನು ಕೇಳಲು, ನಿಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ಪರಿಹರಿಸಲು ನಾನು ಇಲ್ಲಿಗೆ ಬಂದಿದ್ದೇನೆ ಎಂದು ರಾಹುಲ್ ಗಾಂಧಿ ಜನರಿಗೆ ಸಾಂತ್ವನ ಹೇಳಿದರು.
ತಮಿಳುನಾಡು ಕೃಷ್ಣಗಿರಿ ಜಿಲ್ಲೆ ಹೊಸೂರು ಸಮೀಪದ ಉದ್ದನಪಲ್ಲಿ ಹೊರವಲಯದಲ್ಲಿ ಜಲ್ಲಿಕಟ್ಟು ಆಯೋಜನೆ ಮಾಡಲಾಗಿದ್ದು, ನೂರಾರು ಹೋರಿಗಳು ಸ್ಪರ್ಧೆಗೆ ಭಾಗಿಯಾದ್ದವು. ಜಲ್ಲಿಕಟ್ಟು ವೀಕ್ಷಣೆಗೆಂದು ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಈ ವೇಳೆ ಹೋರಿಗಳು ಜನರ ಮೇಲೆ ನುಗ್ಗಿದ್ದು, ಮೂವತ್ತಕ್ಕೂ ಅಧಿಕ ಮಂದಿಗೆ ಗಾಯವಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಹಿಮಾಚಲ ಪ್ರದೇಶದಲ್ಲಿ ಭಾರೀ ಪ್ರಮಾಣದ ಹಿಮಪಾತದ ಹಿನ್ನೆಲೆಯಲ್ಲಿ ಲಾಹೌಲ್ ಸ್ಪಿಟಿ ಜಿಲ್ಲೆಯ ಸಿಸ್ಸುವಿನಲ್ಲಿ ರಾಷ್ಟ್ರೀಯ ಹೆದ್ದಾರಿ 3 ಅನ್ನು ನಿರ್ಬಂಧಿಸಲಾಗಿದೆ.
FDA ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಗೆ ಸಂಬಂಧಿಸಿದಂತೆ, ನಿನ್ನೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿ ಅವ್ಯವಹಾರ ಭೇದಿಸಿ ಕೆಲವರ ಬಂಧನ ಮಾಡಿದ್ದಾರೆ. ಈ ಪ್ರಕರಣದ ಹಿಂದೆ ಯಾರು ಪಾಲ್ಗೊಂಡಿದ್ದಾರೆ ಎಂಬುದನ್ನು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅತೀ ಶೀರ್ಘ್ರದಲ್ಲೇ ಪ್ರಕರಣದ ಹಿಂದೆ ಇರುವವರ ಬಂಧನ ಮಾಡುತ್ತೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಆರ್ಥಿಕ ವೇದಿಕೆಯನ್ನು ಜನವರಿ 28 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತಿಳಿಸುವ ನಿರೀಕ್ಷೆಯಿದೆ. ಕಾರ್ಯಕ್ರಮದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ವೇದಿಕೆಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.
ನಾನು ಹೊಸದಾಗಿ ರಾಜಕೀಯ ಪಕ್ಷವನ್ನ ಸ್ಥಾಪಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ನಟ ವಿಜಯ್ ನನ್ನ ಪಕ್ಷ ಸೇರಬಹುದು ಎಂದು ತಮಿಳು ನಟ ವಿಜಯ್ ತಂದೆ ಎಸ್.ಎ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.
ಹೊಸಪೇಟೆಯಲ್ಲಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಅಂಗವಾಗಿ ಬೈಕ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರಾದ ಆನಂದ್ ಸಿಂಗ್ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.
ಖಾತೆ ಹಂಚಿಕೆಯ ವೇಳೆ ಒಕ್ಕಲಿಗರನ್ನು ನಿರ್ಲಕ್ಷ್ಯ ಮಾಡಿಲ್ಲ.ಇದು ಬಿಜೆಪಿ ವಿರೋಧಿಗಳು ಹಬ್ಬಿಸಿರುವ ಗಾಳಿ ಸುದ್ದಿ.ಒಕ್ಕಲಿಗರಿಗೂ ಕೂಡಾ ಕೃಷಿ ಸ್ಥಾನವನ್ನು ನೀಡಲಾಗಿದೆ ಎಂದು ಕೊತ್ತಲವಾಡಿಯಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ ಹೇಳಿಕೆ ನೀಡಿದ್ದಾರೆ.
ವ್ಯಾಕ್ಸಿನೇಷನ್ ಚಾಲನೆಯಲ್ಲಿ ನಮ್ಮ ದೇಶ ಮುಂಚೂಣಿಯಲ್ಲಿದೆ ಎಂಬುದು ನಮಗೆ ಹೆಮ್ಮೆ ತರುವ ವಿಚಾರ. ಭಾರತೀಯ ಸೈನ್ಯಕ್ಕೆ ಸಂಬಂಧಿಸಿದಂತೆ, ನಾವು ನಮ್ಮ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಪ್ರಾರಂಭಿಸಿದ್ದೇವೆ. ಇದುವರೆಗೆ 6,000 ಜನರಿಗೆ ಲಸಿಕೆ ನೀಡಲಾಗಿದೆ ಎಂದು ದಕ್ಷಿಣ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಸಿಪಿ ಮೊಹಂತಿ ಹೇಳಿದ್ದಾರೆ.
ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕು ತಲಕಾಡಿನ ನದಿ ತೀರದಲ್ಲಿ ಪೊಲೀಸರಿಗೆ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ. ಸದಾ ಒತ್ತಡದಲ್ಲಿ ಕೆಲಸ ಮಾಡುತ್ತಿರುವ ಪೊಲೀಸರ ಆರೋಗ್ಯ ಹಿತದೃಷ್ಟಿಯಿಂದ ಯೋಗ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಗಣರಾಜ್ಯೋತ್ಸವದ ಟ್ರಾಕ್ಟರ್ ಱಲಿಗಾಗಿ ಅನೇಕ ರೈತರು ದೆಹಲಿಗೆ ಬರುತ್ತಿದ್ದಾರೆ. ದೆಹಲಿಯ ಔಟರ್ ರಿಂಗ್ ರಸ್ತೆಯಲ್ಲಿ ನಾವು ಱಲಿಯನ್ನು ನಡೆಸುತ್ತೇವೆ. ದೆಹಲಿ ಪೊಲೀಸರು ಅನುಮತಿ ನೀಡುತ್ತಾರೋ ಇಲ್ಲವೋ ಎಂಬುದು ಮುಖ್ಯವಲ್ಲ ಎಂದು ಸಿಂಗ್ ಗಡಿಯಲ್ಲಿ ಪಂಜಾಬ್ ಕಿಸಾನ್ ಸಂಘರ್ಷ ಸಮಿತಿ ಸತ್ನಮ್ ಸಿಂಗ್ ಪನು ಹೇಳಿದ್ದಾರೆ.
FDA ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್‌ಪಿನ್ ಚಂದ್ರು, ರಾಚಪ್ಪ ಸೇರಿ 14 ಆರೋಪಿಗಳನ್ನು ಸಿಸಿಬಿ ಸೆರೆ ಹಿಡಿದಿದೆ. SDAಗೆ ಆಯ್ಕೆ ಆಗಿದ್ದ ಆರೋಪಿ ರಾಚಪ್ಪ, FDA ಕೆಲಸಕ್ಕೆ ಉಪಾಯ ಹೂಡಿ ಅತಿಯಾಸೆಗೆ ಬಿದ್ದಿದ್ದರು.ಕಿಂಗ್‌ಪಿನ್ ಚಂದ್ರು ಜೊತೆ ಸೇರಿ, ಸೋರಿಕೆಯಾದ ಪ್ರಶ್ನೆಪತ್ರಿಕೆ ಉತ್ತರ ಮಾರಾಟಕ್ಕೆ ಯತ್ನ ನಡೆಸಿದ್ದಾಗಿ ತನಿಖೆಯ ವೇಳೆ ತಿಳಿದು ಬಂದಿದೆ.
ಹುಬ್ಬಳ್ಳಿ ಮೂರುಸಾವಿರ ಮಠ ಆಸ್ತಿ ವಿವಾದ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ವಿರುದ್ಧ ದಿಂಗಾಲೇಶ್ವರ ಶ್ರೀಗಳು ಹರಿಹಾಯ್ದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ನಡೆದ ಧರ್ಮ ಸಭೆಯಲ್ಲಿ ವಾಗ್ದಾಳಿ ನಡೆದಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 14,849 ಹೊಸ ಕೊವಿಡ್ ಪ್ರಕರಣಗಳು, 15,948 ಡಿಸ್ಚಾರ್ಜ್ ಮತ್ತು 155 ಸಾವು ಸಂಭವಿಸಿದೆ.
ಒಟ್ಟು ಕೊವಿಡ್ ಪ್ರಕರಣಗಳು : 1,06,54,533
ಸಕ್ರಿಯ ಪ್ರಕರಣಗಳು : 1,84,408
ಒಟ್ಟು ಡಿಸ್ಚಾರ್ಜ್ : 1,03,16,786
ಒಟ್ಟು ಸಾವಿನ ಸಂಖ್ಯೆ : 1,53,339
ಲಸಿಕೆ ಹಾಕಿಸಿಕೊಂಡವರು : 15,82,201
ಕೊವಿಡ್ ಲಸಿಕೆ ಶೇ.99 ರಷ್ಟು ಸುರಕ್ಷಿತವಾಗಿದೆ ಮತ್ತು ಲಸಿಕೆ ಪಡೆಯುವುದು ಬಹಳ ಮುಖ್ಯ. ಮುಂಬರುವ ದಿನಗಳಲ್ಲಿ ಎಲ್ಲರೂ ಲಸಿಕೆ ಪಡೆಯಲು ಮುಂದಾಗುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ತೆಲಂಗಾಣ ಆರೋಗ್ಯ ಸಚಿವ ಇಟಾಲ ರಾಜೇಂದ್ರ ಹೇಳಿದ್ದಾರೆ.
ಗದಗ ತಾಲೂಕಿನ ಶೀತಾಲಹರಿ ಸುತ್ತಲಿನ ಕಲ್ಲು ಕ್ವಾರಿ ಮಾಲೀಕರಿಂದ ನಿಯಮ ಉಲ್ಲಂಘಿಸಿ ಹೆಚ್ಚಿನ ಸ್ಫೋಟಕ ಬಳಸಿ ಕಲ್ಲು ಗಣಿಗಾರಿಕೆ ನಡೆದಿದೆ. ಬೋರ್‌ವೆಲ್ ಡ್ರಿಲ್ ಮಾಡಿ ಬ್ಲಾಸ್ಟಿಂಗ್ ಮಾಡಿ, ಕಾನೂನು ಬಾಹಿರ ಚಟುವಟಿಕೆ ನಡೆಸಲಾಗಿದೆ.
ಅಕ್ರಮ ಗಣಿಗಾರಿಕೆ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಮಸ್ಯೆ ಆಗಬಾರದು. ಜಲ್ಲಿ ಸಿಗದೇ ಇದ್ದರೇ ಹಣಕಾಸಿನ ಸಮಸ್ಯೆ ಉಂಟಾಗುತ್ತದೆ. ಅಕ್ರಮ ಗಣಿಗಾರಿಕೆ ಇದ್ದರೆ ಅರ್ಜಿ ಸಲ್ಲಿಸಿ, ಅಧಿಕಾರಿಗಳು ಪರಿಶೀಲಿಸುತ್ತಾರೆ. ಅಗತ್ಯವಿದ್ದರೆ ಗಣಿಗಾರಿಕೆಗೆ ಅನುಮತಿ ನೀಡುತ್ತಾರೆ.ಅಕ್ರಮ ಗಣಿಗಾರಿಕೆ ನಡೆದರೆ ಅಧಿಕಾರಿಗಳೇ ಹೊಣೆ ಎಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ದೆಹಲಿಯ ಆಕಾಶವಾಣಿ ಕೇಂದ್ರ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. 8 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಕೃಷಿ ತಿದ್ದುಪಡಿ ಕಾಯ್ದೆಯನ್ನ ವಾಪಾಸ್ ತೆಗೆದುಕೊಳ್ಳುವಂತೆ ದೆಹಲಿಯಲ್ಲಿ 57 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಕುರಿತಂತೆ, ಜನವರಿ 26 ರಂದು ರೈತರಿಂದ ಪರೇಡ್ ಇರುತ್ತದೆ. ಗಣರಾಜೋತ್ಸವ ಧ್ವಜಾರೋಹಣ ಮುಗಿದ ನಂತರ ಪರೇಡ್ ಮಾಡುತ್ತೇವೆ. ಹತ್ತು ಸಾವಿರ ವಾಹನಗಳು ಪರೇಡ್ನಲ್ಲಿ ಪಾಲ್ಗೊಳ್ಳುತ್ತವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.
ನೂರಾರು ಕೋಟಿ ಹಣವನ್ನು ಮಠ ಮಾನ್ಯಗಳ ಮಳಿಗೆಗೆ ಕೊಡುವುದನ್ನು ಸರ್ಕಾರ ನಿಲ್ಲಿಸಬೇಕು. ಅದರ ಬದಲಾಗಿ, ಹಣವನ್ನ ರೈತರ ಮಕ್ಕಳ ಶಿಕ್ಷಣಕ್ಕೆ ನೀಡಿದರೆ ಸಹಾಯವಾಗುತ್ತದೆ. ಎಷ್ಟು ಸರ್ಕಾರಗಳು ಬಂದರೂ ರೈತರ ಮಕ್ಕಳಿಗೆ ಒಂದು ಮೀಸಲಾತಿ ಸೀಟನ್ನು ಮಾಡ್ಲಿಲ್ಲ ಎಂದು ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾಚೌಡೇಶ್ವರಿ ದೇವಾಲಯ ಮಠಾಧ್ಯಕ್ಷರಾದ ಬಾಲ ಮಂಜುನಾಥ ಸ್ವಾಮೀಜಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ ಅಕ್ರಮವಾಗಿ ಕಲ್ಲು ಸಾಗಾಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಹಲವೆಡೆ ಜಿಲ್ಲಾಡಳಿತದ ಅನುಮತಿ ಇಲ್ಲದೇ ಸ್ಪೋಟಕ ಬಳಕೆಯಾಗಿತ್ತಿರುವುದು ಇದೀಗ ಬಹಿರಂಗವಾಗಿದೆ. ರಾಜ್ಯಾದ್ಯಂತ 209 ಜನ ಗುತ್ತಿಗೆದಾರರಿಂದ ಅನುಮತಿ ಪಡೆಯದೆ ಸ್ಪೋಟಕ ಬಳಕೆಗೆ ಮುಂದಾಗಿರುವುದು ತಿಳಿದು ಬಂದಿದೆ.
ಇಂದು ನಡೆಯಬೇಕಿದ್ದ FDA ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ 7 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಉಪಕಾರ್ ಲೇಔಟ್‌ನ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
Published On - 8:04 pm, Sun, 24 January 21