ಬೆಂಗಳೂರಿನಿಂದ ತಮಿಳುನಾಡಿಗೆ ಹೊರಟಿದ್ದ ಬಸ್ ಅಪಘಾತ; 12 ಜನರ ಸ್ಥಿತಿ ಗಂಭೀರ

| Updated By: ಆಯೇಷಾ ಬಾನು

Updated on: Jun 08, 2022 | 7:58 AM

ಕೃಷ್ಣಗಿರಿ ಹಾಗು ಸುಳಗಿರಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್, ಲಾರಿ ಅಪಘಾತವಾಗಿದ್ದು ಸುಮಾರು 12 ಜನರ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಂಗಳೂರಿನಿಂದ ತಮಿಳುನಾಡಿಗೆ ಹೊರಟಿದ್ದ ಬಸ್ ಅಪಘಾತ; 12 ಜನರ ಸ್ಥಿತಿ ಗಂಭೀರ
ಬೆಂಗಳೂರಿನಿಂದ ತಮಿಳುನಾಡಿಗೆ ಹೊರಟಿದ್ದ ಬಸ್ ಅಪಘಾತ
Follow us on

ಆನೇಕಲ್: ಬೆಂಗಳೂರಿನಿಂದ ತಮಿಳುನಾಡಿಗೆ ಹೊರಟಿದ್ದ ಬಸ್ ರಾಷ್ಟ್ರೀಯ ಹೆದ್ದಾರಿ ಬಳಿ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಕೃಷ್ಣಗಿರಿ ಹಾಗು ಸುಳಗಿರಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್, ಲಾರಿ ಅಪಘಾತವಾಗಿದ್ದು ಸುಮಾರು 12 ಜನರ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸ್ಸಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು ಕುರುಬರಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

2 ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಸವಾರ ಸಾವು
ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬಳಿ ಲಾರಿ ಓವರ್ಟೇಕ್ ಮಾಡಲು ಹೋಗಿ 2 ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓರ್ವ ಸವಾರ ಮೃತಪಟ್ಟಿದ್ದಾನೆ. ಲಾರಿ ಚಕ್ರಕ್ಕೆ ಸಿಲುಕಿ ಓರ್ವ ಸಾವನ್ನಪ್ಪಿದ್ದು ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಚಾರ್ಮಾಡಿ ಗ್ರಾಮದ ಮೇಗಿನಪೇಟೆ ನಿವಾಸಿ ನಝೀರ್(25) ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಮರ್ಯಾದಾ ಹತ್ಯೆ; ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಹೆತ್ತವರು

ಅತಿ ವೇಗವಾಗಿ ಬಂದು ಕಾಂಪೌಂಡ್ಗೆ ಡಿಕ್ಕಿ ಹೊಡೆದ ಕಾರು
ಬೆಂಗಳೂರಿನ ರಾಜಭವನ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಅತಿ ವೇಗವಾಗಿ ಬಂದು ರಸ್ತೆ ತಿರುವಿನಲ್ಲಿರುವ ಕಾಂಪೌಂಡ್ಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಹೈಗ್ರೌಂಡ್ಸ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅರ್ಧ ಕತ್ತರಿಸಿದ ಮಹಿಳೆಯ ಮೃತದೇಹ ಕಾಲುವೆಯಲ್ಲಿ ಪತ್ತೆ
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದ ಕಾಲುವೆಯಲ್ಲಿ ಅರ್ಧ ಕತ್ತರಿಸಿದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯ ಹೊಟ್ಟೆಯ ಮೇಲ್ಭಾಗ, ತಲೆ, ಕೈ ನಾಪತ್ತೆಯಾಗಿದೆ. ಬೇರೆಲ್ಲೋ ಕೊಲೆ ಮಾಡಿ ದೇಹವನ್ನ ಕತ್ತರಿಸಿ ಕಾಲುವೆಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಪಾಂಡವಪುರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದೇಹದ ಕಾಲುಗಳಿಗೆ ಹಗ್ಗ ಕಟ್ಟಿರುವುದು ಬೆಳಕಿಗೆ ಬಂದಿದ್ದು ಮೃತ ಮಹಿಳೆಯ ದೇಹದ ಇತರೆ ಭಾಗಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ.