AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನೇಜರ್​ಗೆ ಮದುವೆಯಾಗುವಂತೆ ಪೀಡಿಸಿ ಹಣ ಲಪಟಾಯಿಸಲು ಯತ್ನಿಸಿದ ಯುವತಿ, ಕರುನಾಡು ಸಮರ ಸೇನೆ ರಾಜ್ಯಾಧ್ಯಕ್ಷ ಸೇರಿ ಮಹಿಳೆ ಅರೆಸ್ಟ್

ನಿಶಾ ಎಂಬ 23 ವರ್ಷದ ಯುವತಿ 46 ವರ್ಷದ ವಿಮೆ ಕಂಪನಿ ಮ್ಯಾನೇಜರ್ ಕಿರಣ್ ಕುಮಾರ್ ಎಂಬುವವರಿಗೆ ಮದುವೆಯಾಗುವಂತೆ ಧಮ್ಕಿ ಹಾಕಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ನಿಶಾ ಕೇವಲ ಧಮ್ಕಿ ಮಾತ್ರವಷ್ಟೇ ಅಲ್ಲದೆ ಕಿರಣ್ ಮೇಲೆ ಹಲ್ಲೆ ನಡೆಸಿ ಹಣಕ್ಕೆ ಬೆದರಿಕೆ ಹಾಕಿದ್ದಾಳಂತೆ.

ಮ್ಯಾನೇಜರ್​ಗೆ ಮದುವೆಯಾಗುವಂತೆ ಪೀಡಿಸಿ ಹಣ ಲಪಟಾಯಿಸಲು ಯತ್ನಿಸಿದ ಯುವತಿ, ಕರುನಾಡು ಸಮರ ಸೇನೆ ರಾಜ್ಯಾಧ್ಯಕ್ಷ ಸೇರಿ ಮಹಿಳೆ ಅರೆಸ್ಟ್
ಕರುನಾಡು ಸಮರ ಸೇನೆ ರಾಜ್ಯಾಧ್ಯಕ್ಷ ಹಾಗೂ ಮಾಲಾಳನ್ನ ಪೊಲೀಸರು ಬಂಧಿಸಿದ್ದಾರೆ
TV9 Web
| Edited By: ಆಯೇಷಾ ಬಾನು|

Updated on:Jul 16, 2021 | 11:33 AM

Share

ದಾವಣಗೆರೆ: ಪ್ರೀತಿ, ಮದುವೆ ಎಂಬ ಹೆಸರಲ್ಲೂ ದೊಡ್ಡ ದೊಡ್ಡ ವಂಚನೆಗಳು ನಡೆಯುತ್ತಿವೆ. ದಾವಣಗೆರೆ ಕೆಟಿಜೆ‌ ನಗರ ವ್ಯಾಪ್ತಿಯಲ್ಲಿ ಯುವತಿಯೊಬ್ಬಳು ವ್ಯಕ್ತಿಯನ್ನು ಮದುವೆಯಾಗುವಂತೆ ಪೀಡಿಸಿ ಆತನ ಮೇಲೆ ಹಲ್ಲೆ ನಡೆಸಿ ಹಣ ಪಡೆದಿರುವ ಘಟನೆ ನಡೆದಿದೆ.

ನಿಶಾ ಎಂಬ 23 ವರ್ಷದ ಯುವತಿ 46 ವರ್ಷದ ವಿಮೆ ಕಂಪನಿ ಮ್ಯಾನೇಜರ್ ಕಿರಣ್ ಕುಮಾರ್ ಎಂಬುವವರಿಗೆ ಮದುವೆಯಾಗುವಂತೆ ಧಮ್ಕಿ ಹಾಕಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ನಿಶಾ ಕೇವಲ ಧಮ್ಕಿ ಮಾತ್ರವಷ್ಟೇ ಅಲ್ಲದೆ ಕಿರಣ್ ಮೇಲೆ ಹಲ್ಲೆ ನಡೆಸಿ ಹಣಕ್ಕೆ ಬೆದರಿಕೆ ಹಾಕಿದ್ದಾಳಂತೆ. ನಿಶಾಗೆ ಕನ್ನಡ ಸಂಘಟನೆ ಸಾಥ್ ಕೊಟ್ಟಿದೆ ಎಂದು ಹೇಳಲಾಗುತ್ತಿದೆ.

ಮೊದಲಿಗೆ ನಿಶಾ ಕಿರಣ್ನನ್ನು ಮದುವೆಯಾಗುವಂತೆ ಪೀಡಿಸಿದ್ದಳು. ನೀವು ನನಗೆ ಕೆಲಸ ಕೊಡಿಸಿದ್ದೀರಿ ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದೀರಿ ಅದಕ್ಕೆ ಮದುವೆಯಾಗಲು ಇಷ್ಟಪಟ್ಟಿದ್ದೇನೆಂದು ಬೆನ್ನು ಬಿದ್ದಿದ್ದಾಳೆ. ಆದ್ರೆ ಕಿರಣ್ ಮದುವೆಯಾಗಲು ನಿರಾಕರಿಸಿದ್ದ. ಹೀಗಾಗಿ ನಿನ್ನ ಹೆಸರು ಬರೆದು ವಿಷ ಕುಡಿಯುವುದಾಗಿ ಯುವತಿ ಬೆದರಿಕೆ ಹಾಕಿದ್ದಾಳೆ. ಬಳಿಕ ಇದು ಹೀಗೆ ಬಿಟ್ಟರೆ ಮುಂದೆ ಅನಾಹುತ ಕಟ್ಟಿಟ್ಟ ಬುತ್ತಿ ಎಂದು ಕಿರಣ್, ಯುವತಿಯ ತಂದೆ ತಾಯಿಗೆ ವಿಷಯ ತಿಳಿಸಿ ಬುದ್ದಿವಾದ ಹೇಳಲು ಯತ್ನಿಸಿದ್ದ. ಆಗ ಕರುನಾಡು ಸಮರ ಸೇನೆ ರಾಜ್ಯಾದ್ಯಕ್ಷ ಸೇರಿದಂತೆ ಮಾಲಾ ಎಂಬ ಮಹಿಳೆ ಮಧ್ಯಸ್ಥಿಕೆ ವಹಿಸಿ ಕಿರಣ್ ಯುವತಿಯನ್ನು ಕೆಟ್ಟದಾಗಿ ಬಳಸಿಕೊಂಡಿದ್ದಾನೆಂದು ಆರೋಪಿಸಿದ್ದಾರೆ. ಹಾಗೂ ಕಿರಣ್ ಮೇಲೆ ಹಲ್ಲೆ ನಡೆಸಿದ್ದಾರೆ.

ಕೊನೆಗೆ ಕಿರಣ್ ಕುಮಾರ್ರಿಂದ 10 ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಖಾಲಿ ಚೆಕ್ಗೆ ಸಹಿ ಹಾಕಿಸಿಕೊಂಡು ಕೇಸ್ ಮುಗಿಸಲು ಯತ್ನಿಸಿದ್ದಾರೆ. ಸದ್ಯ ಕಿರಣ್ ಈಗ ಕರುನಾಡು ಸಮರ ಸೇನೆ ರಾಜ್ಯಾಧ್ಯಕ್ಷ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. 10 ಲಕ್ಷಕ್ಕೆ ಬೇಡಿಕೆ ಇಟ್ಟು ಪ್ರಾಣ ಮಾನ ಹರಣ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ದಾವಣಗೆರೆ ಕೆಟಿಜೆ‌ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ದೂರು ದಾಖಲಾದ ಬಳಿಕ ಕರುನಾಡು ಸಮರ ಸೇನೆ ರಾಜ್ಯಾಧ್ಯಕ್ಷ ಹಾಗೂ ಮಾಲಾಳನ್ನ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಕ್ರಿಮಿನಲ್​ಗೆ ಕೇಕ್ ತಿನ್ನಿಸಿದ ಮುಂಬೈ ಪೊಲೀಸ್ ಇನ್ಸ್​ಪೆಕ್ಟರ್​​; ವಿಡಿಯೋದಲ್ಲಿ ದೃಶ್ಯ ಸೆರೆ, ತನಿಖೆಗೆ ಆದೇಶ

Published On - 11:30 am, Fri, 16 July 21

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ