ನನ್ನ ಗೆಳತಿ ನನ್ನ ಗೆಳತಿ ಹಾಡಿನ ಯೋಧ ಮಂಜುನಾಥ್ ಸಾವಿನ ಪ್ರಕರಣಕ್ಕೆ ಟ್ವಿಸ್ಟ್

ನನ್ನ ಗೆಳತಿ ನನ್ನ ಗೆಳತಿ ಹಾಡಿನ ಮೂಲಕ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಯೋಧ ಮೊನ್ನೆಯಷ್ಟೆ ಪಾಪಿ ಉಗ್ರರ ಜೊತೆ ಸೆಣೆಸಾಡುತ್ತಾ ಕಣಿವೆಯಲ್ಲಿ ಹುತಾತ್ಮರಾಗಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿತ್ತು. ಆದರೆ ಈಗ ಇನಾಂ ವೀರಾಪುರದ ಯೋಧನ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಯೋಧ ಮಂಜುನಾಥ್ ಉಗ್ರರ ದಾಳಿಯಲ್ಲಿ ಮೃತಪಟ್ಟಿಲ್ಲ. ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುದ್ದಿ ಇದೀಗ ಸೇನಾ ಮೂಲಗಳಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿ ರವಾನೆಯಾಗಿದ್ದು, ಜಿಲ್ಲಾಧಿಕಾರಿಯ ಮೂಲಕ ಕುಟುಂಬಸ್ಥರಿಗೆ ಮಾಹಿತಿ ರವಾನೆಯಾಗಿದೆ. ಯೋಧ […]

ನನ್ನ ಗೆಳತಿ ನನ್ನ ಗೆಳತಿ ಹಾಡಿನ ಯೋಧ ಮಂಜುನಾಥ್ ಸಾವಿನ ಪ್ರಕರಣಕ್ಕೆ ಟ್ವಿಸ್ಟ್
ಸಾಧು ಶ್ರೀನಾಥ್​

Updated on: Oct 04, 2019 | 3:19 PM

ನನ್ನ ಗೆಳತಿ ನನ್ನ ಗೆಳತಿ ಹಾಡಿನ ಮೂಲಕ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಯೋಧ ಮೊನ್ನೆಯಷ್ಟೆ ಪಾಪಿ ಉಗ್ರರ ಜೊತೆ ಸೆಣೆಸಾಡುತ್ತಾ ಕಣಿವೆಯಲ್ಲಿ ಹುತಾತ್ಮರಾಗಿದ್ದಾರೆ ಎಂಬ ಸುದ್ದಿಯೊಂದು ಹರಿದಾಡಿತ್ತು. ಆದರೆ ಈಗ ಇನಾಂ ವೀರಾಪುರದ ಯೋಧನ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ಯೋಧ ಮಂಜುನಾಥ್ ಉಗ್ರರ ದಾಳಿಯಲ್ಲಿ ಮೃತಪಟ್ಟಿಲ್ಲ. ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುದ್ದಿ ಇದೀಗ ಸೇನಾ ಮೂಲಗಳಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿ ರವಾನೆಯಾಗಿದ್ದು, ಜಿಲ್ಲಾಧಿಕಾರಿಯ ಮೂಲಕ ಕುಟುಂಬಸ್ಥರಿಗೆ ಮಾಹಿತಿ ರವಾನೆಯಾಗಿದೆ. ಯೋಧ ಮಂಜುನಾಥ್ ಓಲೇಕಾರ್ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಹೆಮ್ಮೆಯ ಪುತ್ರ. ಕಳೆದ 9 ವರ್ಷಗಳಿಂದ ಮದ್ರಾಸ್ ರೆಜಿಮೆಂಟ್​ನಲ್ಲಿ ಸೇವೆ ಸಲ್ಲಿಸುತ್ತಿದ್ರು. ಕೆಲದಿನಗಳ ಹಿಂದೆ ಸಾಮಾಜಿಕ ತಾಣಗಳಲ್ಲಿ ಯೋಧರು ‘ನನ್ನ ಗೆಳತಿ ನನ್ನ ಗೆಳತಿ’ ಎಂದು ಹಾಡಿದ ವೀಡಿಯೊ ವೈರಲ್ ಆಗಿತ್ತು. ಆ ಹಾಡಿಗೆ ಧ್ವನಿಗೂಡಿಸಿದ ಕರ್ನಾಟಕದ ಯೋಧ, ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ ಈಗ ಯೋಧ ಮಂಜುನಾಥ್ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಯೋಧನ ಸಾವಿನ ಬಗ್ಗೆ ಸೇನೆಯಿಂದ ಮಾಹಿತಿ ಸಿಕ್ಕಿದೆ.

ಯೋಧ ಮಂಜುನಾಥ್ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕುಟುಂಬಸ್ಥರ ಹಾಗೂ ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಂಜುನಾಥ್ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಆಗಬೇಕೆಂದು ಆಗ್ರಹಿಸಿದ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

Published On - 1:34 pm, Fri, 4 October 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us