AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣದ ಆರೋಪಿಗಳಾದ ಎ1 ಮಧು, ಎ2  ಹರೀಶ್‌ಬಾಬು@ಹರೀಶ್‌ಗೆ ಬೆಂಗಳೂರು ಗ್ರಾಮಾಂತರ ಸೆಷನ್ಸ್‌ ಕೋರ್ಟ್‌ ಜೀವಾವಧಿ ಶಿಕ್ಷೆ, 3 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ರಘುನಾಥ್​ ತೀರ್ಪು ಪ್ರಕಟಿಸಿದ್ದಾರೆ. ಎ3 ಕೃಷ್ಣಪ್ಪ, ಎ4 ತಿಮ್ಮಕ್ಕ, ಎ5 ಹನುಮಂತ ರಾವ್ ಖುಲಾಸೆಗೊಳಿಸಲಾಗಿದೆ.

ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
ಪಿಎಸ್‌ಐ ಜಗದೀಶ್, ಬಂಧಿತ ಆರೋಪಿಗಳು
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ| Edited By: |

Updated on: Apr 08, 2024 | 10:02 PM

Share

ನೆಲಮಂಗಲ, ಏಪ್ರಿಲ್​ 08: ಪಿಎಸ್‌ಐ ಜಗದೀಶ್ (PSI Jagdish) ಹತ್ಯೆ ಪ್ರಕರಣದ ಆರೋಪಿಗಳಾದ ಎ1 ಮಧು, ಎ2  ಹರೀಶ್‌ಬಾಬು@ಹರೀಶ್‌ಗೆ ಬೆಂಗಳೂರು ಗ್ರಾಮಾಂತರ ಸೆಷನ್ಸ್‌ ಕೋರ್ಟ್‌ ಜೀವಾವಧಿ ಶಿಕ್ಷೆ, 3 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ರಘುನಾಥ್​ ತೀರ್ಪು ಪ್ರಕಟಿಸಿದ್ದಾರೆ. 2015 ಅಕ್ಟೋಬರ್ 16ರಂದು ಜಗದೀಶ್ ಹತ್ಯೆ ನಡೆದಿತ್ತು. ಆಗ ಅವರು ದೊಡ್ಡಬಳ್ಳಾಪುರ ಠಾಣೆ ಪಿಎಸ್​ಐ ಆಗಿದ್ದರು. ​ ಬೈಕ್ ಕಳ್ಳರನ್ನು ಹಿಡಿಯಲು ಬಂದಾಗ ನೆಲಮಂಗಲದಲ್ಲಿ ಚೂರಿಯಿಂದ ಇರಿದು ಕೊಲೆಗೈಯಲಾಗಿತ್ತು. ಡಿವೈಎಸ್ಪಿ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆದಿತ್ತು.

ಕೋರ್ಟ್​ಗೆ ನೆಲಮಂಗಲ ಟೌನ್ ಪೊಲೀಸರು 780 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಎ3 ಕೃಷ್ಣಪ್ಪ, ಎ4 ತಿಮ್ಮಕ್ಕ, ಎ5 ಹನುಮಂತ ರಾವ್ ಖುಲಾಸೆಗೊಳಿಸಲಾಗಿದೆ.

ಇದನ್ನೂ ಓದಿ: ಗನ್‌ ಇಟ್ಟುಕೊಂಡು ಬಂದು ಸಿಎಂಗೆ ಹಾರ ಹಾಕಿದ ಅನಾಮಿಕ, ಆತಂಕ ಮೂಡಿಸಿದ ವ್ಯಕ್ತಿ!

ಡಾನ್ ಆಗುವ ಆಸೆಯಿಂದ ಪಿಎಸ್​​ಐಯನ್ನೇ ಕೊಂದುಬಿಟ್ಟರುವುದಾಗಿ ತನಿಖೆ ವೇಳೆ ಪೊಲೀಸರಿಗೆ ಎ1 ಅರೋಪಿ ಮಧು@ಗೋಣ್ಣೆ ಹೇಳಿಕೆ ನೀಡಿದ್ದ. ಹೀಗಾಗಿ ನೆಲಮಂಗಲ ಟೌನ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 333, 307, 302, 397, 201, 212 , 75ರ ಅಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು.

ತನಿಖಾಧಿಕಾರಿಯಾಗಿ ನಿವೃತ್ತ DYSP ರಾಜೇಂದ್ರ ಕುಮಾರ್, ಸರ್ಕಾರಿ ಅಭಿಯೋಜಕರು ಮೀನಾ ಕುಮಾರಿ, ಎಸ್​ವ್ಹಿ ಭಟ್ (ನಿವೃತ್ತ)ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: ಪ್ರಕರಣ ರದ್ದು ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

ಪ್ರಕರಣವು ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಅಂದಿನ ರಾಜ್ಯ ಸರ್ಕಾರ ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿತ್ತು. ಸೂಚನೆಯಂತೆ ತನಿಖೆ ನಡೆಸಿದ್ದ ಪೊಲೀಸರು ಅಕ್ಟೋಬರ್ 20ರಂದು ಆರೋಪಿಗಳಾದ ಮಧು ಮತ್ತು ಕೃಷ್ಣರನ್ನು ಮಹಾರಾಷ್ಟ್ರದ ನಾಗಪುರದಲ್ಲಿ ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!