ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಕರ್ನಾಟಕ ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರು ಮೂಲದ ಇಬ್ಬರು ಕನ್ನಡಿಗರು ಹಿಮಪಾತದಲ್ಲಿ ಸಿಲುಕಿ ಸಾವನ್ನಪ್ಪಿದ್ದು, ನಿನ್ನೆ(ಅಕ್ಟೋಬರ್ 08) ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವ ಹೊರಕ್ಕೆ ತೆಗೆಯಲಾಗಿದೆ. ವಿಕ್ರಮ್ ಎಂ ಮತ್ತು ರಕ್ಷಿತ್ ಕೆ ಸಾವನ್ನಪ್ಪಿದ ಯುವಕರು ಎಂದು ತಿಳಿದುಬಂದಿದೆ. ಕಳೆದ ಮಂಗಳವಾರ ಹಿಮಪಾತ ಸಂಭವಿಸಿದ ಬಳಿಕ ಯುವಕರು ನಾಪತ್ತೆಯಾಗಿದ್ದರು. ರಕ್ಷಣಾ ಕಾರ್ಯಚರಣೆ ವೇಳೆ ಮೃತ ದೇಹಗಳು ಪತ್ತೆಯಾಗಿವೆ.
ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದ ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವು, 6 ಕಾರ್ಮಿಕರಿಗೆ ಗಾಯ
ಇಂದು (ಅ.09) ಮೃತದೇಹಗಳ ಗುರುತು ಪತ್ತೆ ಮಾಡಲಾಗಿದ್ದು, ಸಾವಿನ ಬಗ್ಗೆ ನೆಹರು ಇನ್ಸ್ಟಿಟ್ಯೂಟ್ ಖಚಿತಪಡಿಸಿದೆ. ಇಲ್ಲಿನ ದ್ರೌಪದಿಯ ದಂಡ-2 ಪ್ರದೇಶಕ್ಕೆ ನೆಹರೂ ಪರ್ವತಾರೋಹಣ ಸಂಸ್ಥೆಯ 40 ಜನ ಪರ್ವತಾರೋಹಿಗಳ ತಂಡ ತೆರಳಿತ್ತು.
ಈ ವೇಳೆ ಹಿಮಕುಸಿತ ಉಂಟಾಗಿದೆ. ಪರಿಣಾಮ ಎಲ್ಲ ಪರ್ವತಾರೋಹಿಗಳು ಸಿಲುಕಿದ್ದಾರೆ. ಈವರೆಗೂ ದುರ್ಘಟನೆಯಲ್ಲಿ 29 ಮಂದಿ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.