ರಾಯಚೂರು: ಕಲ್ಲಿನ ಕ್ವಾರಿಯಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ನೀರುಪಾಲಾಗಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಪೂಜಾರಿ ಸೀತಮ್ಮನ ತಾಂಡಾ ಬಳಿ ನಡೆದಿದೆ. ಮೃತ ಬಾಲಕರನ್ನು ಸಂತೋಷ್ ರಾಠೋಡ್(15) ಹಾಗೂ ಮಂಜುನಾಥ್ ರಾಠೋಡ್(13) ಎಂದು ಗುರುತಿಸಲಾಗಿದೆ.
ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಂಡಾ ಬಳಿಯಿರುವ ಕಲ್ಲಿನ ಕ್ವಾರಿಗಳಲ್ಲಿ ಇತ್ತೀಚೆಗೆ ನೀರು ಸಂಗ್ರಹವಾಗಿದೆ. ಈ ಹಿನ್ನೆಲೆಯಲ್ಲಿ ಬಾಲಕರು ಈಜಲು ತೆರಳಿದ್ದಾಗ ಅವಘಡ ಸಂಭವಿಸಿದೆ. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಗ್ರಾಮಸ್ಥರ ಸಹಾಯದಿಂದ ಬಾಲಕರ ಮೃತದೇಹವನ್ನು ಹೊರತೆಗೆದರು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮದುವೆ ಮನೆಯಲ್ಲಿ ಗುಂಡಿನ ಸದ್ದು; ಭಗ್ನ ಪ್ರೇಮಿಯ ಕೃತ್ಯಕ್ಕೆ ವಧು ಕುಟುಂಬ ಕಂಗಾಲು