ಅಮ್ಮನ ಸೀರೆ ಮಕ್ಕಳಿಗೆ ಉರುಳಾಯ್ತು.. ಜೋಕಾಲಿ ಆಡುವಾಗ ಸೀರೆ ಉರುಳಾಗಿ ಇಬ್ಬರು ಮಕ್ಕಳು ಸಾವು

ಅಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಕೆಲಸಕ್ಕೆ ತೆರಳಿದ್ದ ತಾತ ರಾಮಣ್ಣ ಮನೆಗೆ ಬಂದು ನೋಡಿದಾಗ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಅಮ್ಮನ ಸೀರೆ ಮಕ್ಕಳಿಗೆ ಉರುಳಾಯ್ತು.. ಜೋಕಾಲಿ ಆಡುವಾಗ ಸೀರೆ ಉರುಳಾಗಿ ಇಬ್ಬರು ಮಕ್ಕಳು ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jul 01, 2021 | 8:12 AM

ಕೊಡಗು: ಸಾವು ಯಾರನ್ನು ಹೇಗೆ ಹಿಂಬಾಲಿಸುತ್ತದೆ ಎಂದು ಹೇಳಲಾಗುವುದಿಲ್ಲ. ವಿಧಿಯಾಟಕ್ಕೆ ಇಬ್ಬರು ಅಮಾಯ ಮಕ್ಕಳು ಬಲಿಯಾಗಿದ್ದಾರೆ. ಜೋಕಾಲಿ ಆಡುವಾಗ ಸೀರೆ ಉರುಳಾಗಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಗಣಗೂರಲ್ಲಿ ನಡೆದಿದೆ.

ಅಮ್ಮನ ಸೀರೆ ಬಳಸಿ ಜೋಕಾಲಿ ಆಡುತ್ತಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಗಣಗೂರಿನ ನಿವಾಸಿ ಕಾರ್ಮಿಕ ರಾಜು ಹಾಗೂ ಜಯಂತಿ ಎಂಬುವರ ಪುತ್ರಿ ಮಣಿಕ್ ಶಾ(14), ಪೂರ್ಣೇಶ್ (12) ಮೃತ ಮಕ್ಕಳು. ಮನೆಯಲ್ಲಿ ಇಬ್ಬರೇ ಜೋಕಾಲಿ ಆಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಅಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಕೆಲಸಕ್ಕೆ ತೆರಳಿದ್ದ ತಾತ ರಾಮಣ್ಣ ಮನೆಗೆ ಬಂದು ನೋಡಿದಾಗ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಅಕ್ಕ-ತಮ್ಮ ಇಬ್ಬರೂ ನೇಣು ಬಿಗಿದ ಸ್ಥಿತಿಯಲ್ಲಿದ್ದರು. ತಕ್ಷಣವೇ ರಾಮಣ್ಣ ಸೀರೆಯನ್ನು ಕತ್ತರಿಸಿ ಮಕ್ಕಳನ್ನು ಕೆಳಗಿಳಿಸಿದ್ದಾರೆ. ಆದರೆ ಈ ವೇಳೆಗಾಗಲೇ ಇಬ್ಬರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಸೋಮವಾರಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗೋವಾ ಪೊಲೀಸರ ಕಿರುಕುಳಕ್ಕೆ ಬೇಸತ್ತು ವಿಜಯಪುರದ ಮೂವರು ಆತ್ಮಹತ್ಯೆ?

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ