ಮ್ಯಾನ್ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಗುತ್ತಿಗೆ ಕಾರ್ಮಿಕರ ಸಾವು
ಕಲಬುರಗಿ: ಜಿಲ್ಲಾ ಕೇಂದ್ರ ಕಲಬುರಗಿಯ ಕೈಲಾಶ್ ನಗರದಲ್ಲಿ ಮ್ಯಾನ್ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಸಾವಿಗೀಡಾಗಿರುವ ದುರಂತ ಸಂಭವಿಸಿದೆ. ಜಲಮಂಡಳಿ ನಿರ್ಲಕ್ಷ್ಯಕ್ಕೆ ಇಬ್ಬರು ಗುತ್ತಿಗೆ ಕಾರ್ಮಿಕರು ಬಲಿಯಾಗಿದ್ದಾರೆ.
ಮ್ಯಾನ್ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಗುತ್ತಿಗೆ ಕಾರ್ಮಿಕರ ಸಾವು
Follow us on
ಕಲಬುರಗಿ: ಜಿಲ್ಲಾ ಕೇಂದ್ರ ಕಲಬುರಗಿಯ ಕೈಲಾಶ್ ನಗರದಲ್ಲಿ ಮ್ಯಾನ್ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಸಾವಿಗೀಡಾಗಿರುವ ದುರಂತ ಸಂಭವಿಸಿದೆ. ಜಲಮಂಡಳಿ ನಿರ್ಲಕ್ಷ್ಯಕ್ಕೆ ಇಬ್ಬರು ಗುತ್ತಿಗೆ ಕಾರ್ಮಿಕರು ಬಲಿಯಾಗಿದ್ದಾರೆ.
ಲಾಲ್ ಅಹ್ಮದ್ (25) ಮತ್ತು ರಷೀದ್(30) ಸ್ಥಳದಲ್ಲೇ ಮೃತಪಟ್ಟ ಗುತ್ತಿಗೆ ಕಾರ್ಮಿಕರು. ಒಳಚರಂಡಿ ಕಟ್ಟಿಕೊಂಡಿದ್ದರಿಂದ ಸ್ವಚ್ಛಗೊಳಿಸಲು ಇಂದು ಮಧ್ಯಾಹ್ನ ಇವರಿಬ್ಬರೂ ಇಳಿದಿದ್ದರು.
18 ಅಡಿ ಆಳದಲ್ಲಿ ಇಳಿದು ಕೆಲಸ ಮಾಡುತ್ತಿದ್ದ ಈ ಸಿಬ್ಬಂದಿ ಅಲ್ಲಿಯೇ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಕಲಬುರಗಿ ಜಲ ಮಂಡಳಿಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದರು.