ಹಾವೇರಿಯಲ್ಲಿ ಕೃಷಿ ವಿಚಕ್ಷಣಾ ದಳದ ದಾಳಿ; ಎರಡು ಕೋಟಿ ಮೌಲ್ಯದ ಅನಧಿಕೃತ ಬಿತ್ತನೆ ಬೀಜ ಜಪ್ತಿ

ಜಾಗೃತ ಕೋಶದ ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ, ನಾರಾಯಣಗೌಡ ಹಾಗೂ ರಾಣೆಬೆನ್ನೂರು ಸಹಾಯಕ ಕೃಷಿ ನಿರ್ದೇಶಕ ಗೌಡಪ್ಪನವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಗೋಡೌನ್​ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಬಿತ್ತನೆ ಬೀಜಗಳನ್ನು ವಶಪಡಿಸಿಕೊಂಡಿದ್ದಾರೆ. ರೈತ ಈ ದೇಶದ ಬೆನ್ನೆಲುಬು, ಆತನಿಗೆ ಮೋಸ ಆಗಬಾರದು.

ಹಾವೇರಿಯಲ್ಲಿ ಕೃಷಿ ವಿಚಕ್ಷಣಾ ದಳದ ದಾಳಿ; ಎರಡು ಕೋಟಿ ಮೌಲ್ಯದ ಅನಧಿಕೃತ ಬಿತ್ತನೆ ಬೀಜ ಜಪ್ತಿ
ದಾಳಿ ನಡೆಸಿದ ಕೃಷಿ ವಿಚಕ್ಷಣಾ ದಳ
Follow us
sandhya thejappa
|

Updated on: Jun 10, 2021 | 8:25 AM

ಹಾವೇರಿ : ಜಿಲ್ಲೆಯ ಹಲವೆಡೆ ಕಳೆದ ಕೆಲವು ದಿನಗಳ ಹಿಂದೆ ಉತ್ತಮ ಮಳೆಯಾಗಿದೆ. ಹೀಗಾಗಿ ಜಿಲ್ಲೆಯ ರೈತರು ಬಿತ್ತನೆ ಕಾರ್ಯಕ್ಕೆ ಭೂಮಿ ಹದ ಮಾಡಿಕೊಂಡಿದ್ದಾರೆ. ಮತ್ತೊಂದು ಮಳೆ ಬಿದ್ದ ಕೂಡಲೆ ಬಿತ್ತನೆ ಕಾರ್ಯ ಮಾಡಬೇಕು ಎಂದು ಜಿಲ್ಲೆಯ ಬಹುತೇಕ ಕಡೆಗಳಲ್ಲಿನ ರೈತರು ಬಿತ್ತನೆಗೆ ಬೇಕಾದ ಬಿತ್ತನೆ ಬೀಜ ಮತ್ತು ರಸಗೊಬ್ಬರ ಖರೀದಿ ಮಾಡಿ ಇಟ್ಟುಕೊಳ್ಳುತ್ತಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡ ಕೆಲವು ದಂಧೆಕೋರರು ರೈತರಿಗೆ ಅನಧಿಕೃತ ಬಿತ್ತನೆ ಬೀಜಗಳನ್ನು ಮಾರಾಟ ಮಾಡಿ ರೈತರಿಗೆ ಉತ್ತಮ ಬೆಳೆ ಮತ್ತು ಫಸಲು ಬಾರದೆ ಹಾನಿಯಾಗುವಂತೆ ಮಾಡುತ್ತಿದ್ದಾರೆ. ಈ ಬಗ್ಗೆ ಎಚ್ಚೆತ್ತುಕೊಂಡಿರುವ ಕೃಷಿ ಇಲಾಖೆ ಅಂತಹ ದಂಧೆಕೋರರನ್ನು ಬಯಲಿಗೆ ಎಳೆಯುವ ಕೆಲಸಕ್ಕೆ ಮುಂದಾಗಿದೆ.

ಸಿಕ್ಕಿಬಿತ್ತು ಎರಡು ಕೋಟಿ ಮೌಲ್ಯದ ಅನಧೀಕೃತ ಬಿತ್ತನೆ ಬೀಜ ರೈತರು ಬಿತ್ತನೆಗೆ ಭೂಮಿ ಸಿದ್ದ ಮಾಡಿಕೊಂಡು ಬಿತ್ತನೆ ಬೀಜ ಖರೀದಿ ಮಾಡಿಟ್ಟುಕೊಳ್ಳಲು ಮುಂದಾಗುತ್ತಿದ್ದಂತೆ ಮಾರುಕಟ್ಟೆಯಲ್ಲಿ ಅನಧಿಕೃತ ಬಿತ್ತನೆ ಬೀಜಗಳ ಮಾರಾಟ ಭಾರಿ ಸದ್ದು ಮಾಡಿತ್ತು. ಇದರ ಖಚಿತ ಮಾಹಿತಿ ಮೇರೆಗೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದಲ್ಲಿ ಅನಧಿಕೃತವಾಗಿ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿದ್ದ ಗೋಡೌನ್ ಮೇಲೆ ಕೃಷಿ ವಿಚಕ್ಷಣಾ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದ್ದು, ಅನಧಿಕೃತವಾಗಿ ಸಂಗ್ರಹಿಸಿದ್ದ ಸುಮಾರು 2 ಕೋಟಿ ರೂ. ಮೌಲ್ಯದ 68 ಟನ್ಗಿಂತಲೂ ಹೆಚ್ಚಿನ ಹೈಬ್ರೀಡ್ ಮೆಕ್ಕೆಜೋಳದ ಬಿತ್ತನೆ ಬೀಜಗಳನ್ನು ಜಪ್ತಿ ಮಾಡಿದ್ದಾರೆ.

ಜಾಗೃತ ಕೋಶದ ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ, ನಾರಾಯಣಗೌಡ ಹಾಗೂ ರಾಣೆಬೆನ್ನೂರು ಸಹಾಯಕ ಕೃಷಿ ನಿರ್ದೇಶಕ ಗೌಡಪ್ಪನವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಗೋಡೌನ್​ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಬಿತ್ತನೆ ಬೀಜಗಳನ್ನು ವಶಪಡಿಸಿಕೊಂಡಿದ್ದಾರೆ. ರೈತ ಈ ದೇಶದ ಬೆನ್ನೆಲುಬು, ಆತನಿಗೆ ಮೋಸ ಆಗಬಾರದು. ಈ ನಿಟ್ಟಿನಲ್ಲಿ ಇಲಾಖೆ ಅತ್ಯಂತ ಚುರುಕಾಗಿ ಕಾರ್ಯನಿರ್ವಹಿಸುತ್ತಿದೆ. ಅಕ್ರಮವಾಗಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ದಾಸ್ತಾನು ಮತ್ತು ಮಾರಾಟ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಾಳಿಯ ನೇತೃತ್ವ ವಹಿಸಿದ್ದ ಅಧಿಕಾರಿಗಳು, ಅನಧಿಕೃತ ಬಿತ್ತನೆ ಬೀಜ ಮಾರಾಟ ಮಾಡುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ವರ್ಷದ ಆರಂಭದಲ್ಲೇ ಎಲ್ಲಾ ಕಡೆ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಬಿತ್ತನೆ ಕಾರ್ಯಗಳು ಪ್ರಾರಂಭವಾಗಿವೆ. ಇಂತಹ ಸಂದರ್ಭದಲ್ಲಿ ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿಚಾರದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ. ಅನಧಿಕೃತ ಮತ್ತು ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರ ವಿರುದ್ಧ ಈಗಾಗಲೆ ಇಲಾಖೆ ಸಮರ ಸಾರಿದ್ದು, ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದ್ದಾರೆ.

ಇದನ್ನೂ ಓದಿ

Explainer: ಲಸಿಕೆ ಸರ್ಟಿಫಿಕೇಟ್​ನಲ್ಲಿ ಯೂನಿಕ್ ಹೆಲ್ತ್ ಐಡಿ: ಏನಿದರ ವೈಶಿಷ್ಟ್ಯ? ಏನೆಲ್ಲಾ ಅನುಕೂಲ? ಏಕಿಷ್ಟು ಗೊಂದಲ?

ಮಕ್ಕಳಿಗೆ ಕೊರೊನಾ ಬಂದರೆ 6 ನಿಮಿಷದ ನಡಿಗೆ ಸೂತ್ರ ಮತ್ತು ಈ ಕೆಳಕಂಡ ಚಿಕಿತ್ಸಾ ವಿಧಾನ ಅನುಸರಿಸಿ; ಕೇಂದ್ರದಿಂದ ನೂತನ​ ಮಾರ್ಗಸೂಚಿ ಪ್ರಕಟ

(Two crores of unauthorized sowing seed has been confiscated by Agriculture Department officials in haveri)

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್