ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ನಜ್ಜುಗುಜ್ಜಾದ ವಾಹನ.. ಸ್ಥಳದಲ್ಲೇ ಇಬ್ಬರ ಸಾವು
ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಮೂಡೂರು ಕ್ರಾಸ್ ಬಳಿ ನಡೆದಿದೆ.
ಹಾವೇರಿ: ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಮೂಡೂರು ಕ್ರಾಸ್ ಬಳಿ ನಡೆದಿದೆ. ಮಲ್ಲಿಕಾರ್ಜುನ ಪಾಟೀಲ(25), ಮಲ್ಲಿಕಾರ್ಜುನ(31) ಮೃತ ದುರ್ದೈವಿಗಳು.
ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಚಾಲಕ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದಾನೆ. ಈ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಿಬ್ಬರೂ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನವರು. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಪಿಎಸ್ಐ ಶ್ರೀಶೈಲ ಪಟ್ಟಣ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿಗೆ ಕಾರು ಡಿಕ್ಕಿಯಾದ ರಭಸಕ್ಕೆ ಕಾರಿನ ಗಾಜು ಪುಡಿ ಪುಡಿಯಾಗಿದೆ. ಇಡೀ ಕಾರು ಛಿದ್ರ ಛಿದ್ರವಾಗಿದೆ.
ಬೈಕ್ ಸಾಗಿಸುತ್ತಿದ್ದ ಕಂಟೇನರ್ ಲಾರಿ ಧಗಧಗ: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿ