ಪೌರತ್ವದ ಜ್ವಾಲೆಗೆ ಧಗಧಗಿಸಿದ ಮಂಗಳೂರು, ಉಗ್ರ ಪ್ರತಿಭಟನೆಯಲ್ಲಿ ಇಬ್ಬರ ಸಾವು

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಧಾರ್ಮಿಕ ಮುಖಂಡರು ಮಾಹಿತಿ ನೀಡಿದ್ದಾರೆ. ಇಂದಿನ ಪ್ರತಿಭಟನೆ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ.ಎಸ್​.ಹರ್ಷಾ ಮತ್ತು ಧಾರ್ಮಿಕ ಮುಖಂಡರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಪ್ರತಿಭಟನೆ ವೇಳೆ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಗಲಾಟೆ ವೇಳೆ ಕಂದಕ್ ನಿವಾಸಿ ಜಲೀಲ್(49) ಮತ್ತು ಬೆಂಗ್ರೆ ನಿವಾಸಿ ನೌಶೀನ್(23) ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುದ್ದಿಗೋಷ್ಠಿಯಲ್ಲಿ […]

ಪೌರತ್ವದ ಜ್ವಾಲೆಗೆ ಧಗಧಗಿಸಿದ ಮಂಗಳೂರು, ಉಗ್ರ ಪ್ರತಿಭಟನೆಯಲ್ಲಿ ಇಬ್ಬರ ಸಾವು
Follow us
ಸಾಧು ಶ್ರೀನಾಥ್​
|

Updated on:Dec 19, 2019 | 9:03 PM

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಧಾರ್ಮಿಕ ಮುಖಂಡರು ಮಾಹಿತಿ ನೀಡಿದ್ದಾರೆ.

ಇಂದಿನ ಪ್ರತಿಭಟನೆ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ.ಎಸ್​.ಹರ್ಷಾ ಮತ್ತು ಧಾರ್ಮಿಕ ಮುಖಂಡರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಪ್ರತಿಭಟನೆ ವೇಳೆ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಗಲಾಟೆ ವೇಳೆ ಕಂದಕ್ ನಿವಾಸಿ ಜಲೀಲ್(49) ಮತ್ತು ಬೆಂಗ್ರೆ ನಿವಾಸಿ ನೌಶೀನ್(23) ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುದ್ದಿಗೋಷ್ಠಿಯಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಮಸೂದ್ ಮನವಿ ಮಾಡಿದ್ದಾರೆ.

ಪ್ರತಿಭಟನೆ ನಿಯಂತ್ರಿಸಲು ಕರ್ಫ್ಯೂ ಜಾರಿ:  ಮಂಗಳೂರಿನಲ್ಲಿ ಇಂದಿನ ಪ್ರತಿಭಟನೆ ತೀವ್ರ ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು. ಪೊಲೀಸರು ಸಹ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದ್ದರು. ಆದರೂ ಹಿಂಸಾಚಾರ ನಿಂಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಬಳಿಕ ಮಂಗಳೂರು ನಗರದ ಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಮಧ್ಯರಾತ್ರಿವರೆಗೂ ಕರ್ಫ್ಯೂ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪಿ.ಎಸ್​.ಹರ್ಷಾ ಆದೇಶಿಸಿದ್ದಾರೆ.

Published On - 8:57 pm, Thu, 19 December 19

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ