ಪೌರತ್ವದ ಜ್ವಾಲೆಗೆ ಧಗಧಗಿಸಿದ ಮಂಗಳೂರು, ಉಗ್ರ ಪ್ರತಿಭಟನೆಯಲ್ಲಿ ಇಬ್ಬರ ಸಾವು

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಧಾರ್ಮಿಕ ಮುಖಂಡರು ಮಾಹಿತಿ ನೀಡಿದ್ದಾರೆ. ಇಂದಿನ ಪ್ರತಿಭಟನೆ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ.ಎಸ್​.ಹರ್ಷಾ ಮತ್ತು ಧಾರ್ಮಿಕ ಮುಖಂಡರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಪ್ರತಿಭಟನೆ ವೇಳೆ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಗಲಾಟೆ ವೇಳೆ ಕಂದಕ್ ನಿವಾಸಿ ಜಲೀಲ್(49) ಮತ್ತು ಬೆಂಗ್ರೆ ನಿವಾಸಿ ನೌಶೀನ್(23) ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುದ್ದಿಗೋಷ್ಠಿಯಲ್ಲಿ […]

ಪೌರತ್ವದ ಜ್ವಾಲೆಗೆ ಧಗಧಗಿಸಿದ ಮಂಗಳೂರು, ಉಗ್ರ ಪ್ರತಿಭಟನೆಯಲ್ಲಿ ಇಬ್ಬರ ಸಾವು
ಸಾಧು ಶ್ರೀನಾಥ್​

Updated on: Dec 19, 2019 | 9:03 PM

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಧಾರ್ಮಿಕ ಮುಖಂಡರು ಮಾಹಿತಿ ನೀಡಿದ್ದಾರೆ.

ಇಂದಿನ ಪ್ರತಿಭಟನೆ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ.ಎಸ್​.ಹರ್ಷಾ ಮತ್ತು ಧಾರ್ಮಿಕ ಮುಖಂಡರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಪ್ರತಿಭಟನೆ ವೇಳೆ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಗಲಾಟೆ ವೇಳೆ ಕಂದಕ್ ನಿವಾಸಿ ಜಲೀಲ್(49) ಮತ್ತು ಬೆಂಗ್ರೆ ನಿವಾಸಿ ನೌಶೀನ್(23) ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುದ್ದಿಗೋಷ್ಠಿಯಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಮಸೂದ್ ಮನವಿ ಮಾಡಿದ್ದಾರೆ.

ಪ್ರತಿಭಟನೆ ನಿಯಂತ್ರಿಸಲು ಕರ್ಫ್ಯೂ ಜಾರಿ: 
ಮಂಗಳೂರಿನಲ್ಲಿ ಇಂದಿನ ಪ್ರತಿಭಟನೆ ತೀವ್ರ ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು. ಪೊಲೀಸರು ಸಹ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದ್ದರು. ಆದರೂ ಹಿಂಸಾಚಾರ ನಿಂಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಬಳಿಕ ಮಂಗಳೂರು ನಗರದ ಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಮಧ್ಯರಾತ್ರಿವರೆಗೂ ಕರ್ಫ್ಯೂ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪಿ.ಎಸ್​.ಹರ್ಷಾ ಆದೇಶಿಸಿದ್ದಾರೆ.

Published On - 8:57 pm, Thu, 19 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us