ಜಮೀನು ವಿವಾದ: ಎರಡು ಕುಟುಂಬಗಳ ನಡುವೆ ಮಾರಾಮಾರಿ, 7 ಮಂದಿಗೆ ಗಾಯ
ಹಾವೇರಿ: ಜಮೀನು ವಿವಾದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳು ಹೊಡೆದಾಡಿಕೊಂಡಿರುವ ಘಟನೆ ಹಾನಗಲ್ ತಾಲೂಕಿನ ಬ್ಯಾತನಾಳ ಗ್ರಾಮದಲ್ಲಿ ನಡೆದಿದೆ. ಬ್ಯಾತನಾಳ ಗ್ರಾಮದ ಕೋಟ್ನಿಕಲ್ಮಠ, ಹಲಕಣ್ಣವರ ಕುಟುಂಬಸ್ಥರು ನಿನ್ನೆ ಜಮೀನಿನಲ್ಲೇ ಹೊಡೆದಾಡಿಕೊಂಡಿದ್ದಾರೆ. ಬಡಿದಾಟದಲ್ಲಿ ಕೋಟ್ನಿಕಲ್ಮಠ ಕುಟುಂಬದ ಏಳು ಜನರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ, ಎರಡೂ ಕುಟುಂಬದ ಜಮೀನು ವಿವಾದ ಈಗಾಗಲೇ ಕೋರ್ಟ್ನಲ್ಲಿದೆ. ಘಟನೆ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on
ಹಾವೇರಿ: ಜಮೀನು ವಿವಾದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳು ಹೊಡೆದಾಡಿಕೊಂಡಿರುವ ಘಟನೆ ಹಾನಗಲ್ ತಾಲೂಕಿನ ಬ್ಯಾತನಾಳ ಗ್ರಾಮದಲ್ಲಿ ನಡೆದಿದೆ.
ಬ್ಯಾತನಾಳ ಗ್ರಾಮದ ಕೋಟ್ನಿಕಲ್ಮಠ, ಹಲಕಣ್ಣವರ ಕುಟುಂಬಸ್ಥರು ನಿನ್ನೆ ಜಮೀನಿನಲ್ಲೇ ಹೊಡೆದಾಡಿಕೊಂಡಿದ್ದಾರೆ. ಬಡಿದಾಟದಲ್ಲಿ ಕೋಟ್ನಿಕಲ್ಮಠ ಕುಟುಂಬದ ಏಳು ಜನರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ, ಎರಡೂ ಕುಟುಂಬದ ಜಮೀನು ವಿವಾದ ಈಗಾಗಲೇ ಕೋರ್ಟ್ನಲ್ಲಿದೆ. ಘಟನೆ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.