ಬೆಂಗಳೂರು: ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಕಲಬುರಗಿಯಲ್ಲಿ ವೈಮಾನಿಕ ತರಬೇತಿ ಶಾಲೆಗೆ ಒಪ್ಪಿಗೆ ನೀಡಿದೆ. ಇನ್ನು ಮುಂದೆ ಉತ್ತರ ಕರ್ನಾಟಕ ಭಾಗದ ಯುವಕರು ಇಲ್ಲಿಯೇ ಪೈಲಟ್ ತರಬೇತಿ ಪಡೆಯಬಹುದು ಎಂದು ವಿಮಾನ ನಿಲ್ದಾಣ ನಿರ್ದೇಶಕರು ತಿಳಿಸಿದ್ದಾರೆ. ಏಷ್ಯಾ ಫೆಸಿಪಿಕ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿ ಮತ್ತು 100 ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ ಅಗತ್ಯವಿರುವ ಭೂಮಿ ಮತ್ತು ಮೂಲ ಸೌಕರ್ಯಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಒದಗಿಸಿದ್ದು, ಇನ್ನು ಮುಂದೆ ಪೈಲಟ್ ತರಬೇತಿ ಪಡೆಯಲು ಉತ್ತರ ಕರ್ನಾಟಕ ಭಾಗದ ಯುವಕರು ಮುಂಬೈ, ಹೈದರಾಬಾದ್, ಬೆಂಗಳೂರು ನಗರಕ್ಕೆ ಹೋಗುವುದು ತಪ್ಪಲಿದೆ ಎಂದು ಅವರು ಕೂಡ ಮಾಡಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಬರುತ್ತಿರುವ ವೈಮಾನಿಕ ತರಬೇತಿ ಸಂಸ್ಥೆಗಳಿಂದ ಇಲ್ಲಿನ ಸ್ಥಳೀಯ ಪ್ರತಿಭೆಗಳಿಗೆ ಉತ್ತಮ ಅವಕಾಶ ಸಿಗಲಿದೆ. ಸುಮಾರು 100 ಜನರು ಇಲ್ಲಿ ಪೈಲಟ್ ತರಬೇತಿ ಪಡೆಯಬಹುದಾಗಿದೆ. ಜೊತೆಗೆ ಇದರಿಂದ ಈ ಭಾಗದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ’ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: COVID-19: ಭಾರತದೊಳಗೆ ಬರುವ ಪ್ರತಿ ವಿಮಾನದ ಶೇ. 2ರಷ್ಟು ಜನರಿಗೆ ರ್ಯಾಂಡಮ್ ಕೊವಿಡ್ ಟೆಸ್ಟ್ ಕಡ್ಡಾಯ
ಕಳೆದ ವರ್ಷ ರಾಜ್ಯದಲ್ಲಿ 5 ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿತ್ತು. ಈ ಕುರಿತು ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸಹ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಮೊದಲು ಬೆಂಗಳೂರಿನ ಜಕ್ಕೂರಿನಲ್ಲಿ ಮಾತ್ರ ವೈಮಾನಿಕ ತರಬೇತಿ ಶಾಲೆ ಇತ್ತು. ಈಗ ಕಲಬುರಗಿ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಲ್ಲಿಯೂ ತರಬೇತಿ ಶಾಲೆ ಇದೆ. ಇದರಿಂದಾಗಿ ರಾಜ್ಯದ ಯುವಕರು ಇಲ್ಲಿಯೇ ತರಬೇತಿ ಪಡೆಯಲು ಅನುಕೂಲವಾಗಲಿದೆ.