ನಿಯಂತ್ರಣ ತಪ್ಪಿದ ಕಾರು: ಸ್ಥಳದಲ್ಲೇ ವ್ಯಕ್ತಿ ಸಾವು, ಇಬ್ಬರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೈಮರ ಬಳಿ ನಡೆದಿದೆ. ಘಟನೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದು ಇಬ್ಬರಿಗೆ ಗಾಯಗಳಾಗಿವೆ.
ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೈಮರ ಬಳಿ ನಡೆದಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ಮೂಲದ ಶಿವಪಾದಯ್ಯ(35) ಮೃತ ದುರ್ದೈವಿ.
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಈ ಪರಿಣಾಮ ಕಾರಿನಲ್ಲಿದ್ದ ಒಬ್ಬರು ಮೃತಪಟ್ಟಿದ್ದು, ಇಬ್ಬರಿಗೆ ಗಾಯಗಳಾಗಿವೆ. ಗಾಯಾಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದದ್ದು ಘಟನೆ ಭೀಕರತೆಗೆ ಕಾರು ನಜ್ಜುಗುಜ್ಜಾಗಿದೆ.
H.N. ವ್ಯಾಲಿ ಪೈಪ್‌ಲೈನ್ ಒಡೆದು ನೀರು ಪೋಲು: ಸೋರಿಕೆ ನೀರಲ್ಲಿ ಕಾರ್ ತೊಳೆಯಲು ಹೋಗಿ ಅಪಘಾತ!