AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಡೇರಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ಬಿ.ನಾರಾಯಣಪುರದ ನಿವಾಸಿಗಳಾದ ಕಾರ್ತಿಕ್(27) ಮತ್ತು ಹರಿಪ್ರಸಾದ್(21)ಮೃತ ಸವಾರರು.

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು
ಮೃತ ಬೈಕ್​ ಸವಾರರು
Follow us
KUSHAL V
|

Updated on:Nov 30, 2020 | 6:51 PM

ಕೋಲಾರ: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಡೇರಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ಬಿ.ನಾರಾಯಣಪುರದ ನಿವಾಸಿಗಳಾದ ಕಾರ್ತಿಕ್(27) ಮತ್ತು ಹರಿಪ್ರಸಾದ್(21)ಮೃತ ಸವಾರರು.

ಬೈಕ್​ಗೆ ಡಿಕ್ಕಿ ಹೊಡೆದ ಅಪರಿಚಿತ‌ ವಾಹನ‌ದ ಚಾಲಕ ಕ್ಷಣಾರ್ಧದಲ್ಲಿ ಗಾಡಿ ಸಮೇತ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Published On - 6:22 pm, Mon, 30 November 20