ಹಾಸನ: ಚನ್ನರಾಯಪಟ್ಟಣ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಕಾರು ಪಲ್ಟಿ, ಇಬ್ಬರು ಸಾವು

|

Updated on: Sep 25, 2023 | 4:58 PM

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಇಬ್ಬರಿಗೆ ತೀವ್ರ ಗಾಯಗಳಾಗಿವೆ. ಮೃತರನ್ನು ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ನಿವಾಸಿಗಳಾಗಿದ್ದಾರೆ. ಚನ್ನರಾಯಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕುಟುಂಬದ ನಾಲ್ವರು ಮನೆಗೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಹಾಸನ: ಚನ್ನರಾಯಪಟ್ಟಣ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಕಾರು ಪಲ್ಟಿ, ಇಬ್ಬರು ಸಾವು
ಚನ್ನರಾಯಪಟ್ಟಣ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪಲ್ಟಿಯಾದ ಕಾರು
Follow us on

ಹಾಸನ, ಸೆ.25: ಜಿಲ್ಲೆಯ ಚನ್ನರಾಯಪಟ್ಟಣ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಇಬ್ಬರಿಗೆ ತೀವ್ರ ಗಾಯಗಳಾಗಿವೆ. ಮೃತರನ್ನು ಬೆಂಗಳೂರು (Bengaluru) ಉತ್ತರ ತಾಲೂಕಿನ ಅಂಚೆಪಾಳ್ಯ ನಿವಾಸಿಗಳಾದ ಧೀರಜ್ (18) ಮತ್ತು ಜಗದೀಶ್ (49) ಎಂದು ಗುರುತಿಸಲಾಗಿದೆ.

ಚನ್ನರಾಯಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕುಟುಂಬದ ನಾಲ್ವರು ಮನೆಗೆ ಮರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅವಘಡ ಸಂಭವಿಸಿದೆ. ಜಗದೀಶ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತ ಚನ್ನರಾಯಪಟ್ಟಣಕ್ಕೆ ಬಂದಿದ್ದರು.

ಇದನ್ನೂ ಓದಿ: ಚೀನಾದ ಸರ್ಕಾರಿ ಸ್ವಾಮ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 16 ಮಂದಿ ಸಾವು

ಕಾರಿನಲ್ಲಿದ್ದ ನಳಿನಾಕ್ಷಿ ಮತ್ತು ದುಷ್ಯಂತ್‌ ಅವರಿಗೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಯಾಣದ ವೇಳೆ ಕಾರಿನ ಟೈರ್‌ ಒಡೆದ ಕಾರಣ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ.

ಅಪಘಾತದ ನಂತರ ಕಾರು ಸಂಪೂರ್ಣ ಜಖಂಗೊಂಡಿದೆ. ಈ ಕುರಿತು ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:58 pm, Mon, 25 September 23