ಜೋಡಿ ಕೊಲೆ: ಮೈಸೂರಿನಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಇಬ್ಬರ ಹತ್ಯೆ

| Updated By: ಸಾಧು ಶ್ರೀನಾಥ್​

Updated on: Feb 08, 2021 | 9:57 AM

ಕಿರಣ್(29) ಮತ್ತು ಕಿಶನ್(29) ಈ ಕೃತ್ಯದಲ್ಲಿ ಮೃತಪಟ್ಟಿದ್ದು, ಮೃತರಿಬ್ಬರೂ ಗೌರಿಶಂಕರ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಘಟನೆಯಲ್ಲಿ ಮಧು ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಗಾಯಾಳುವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೋಡಿ ಕೊಲೆ: ಮೈಸೂರಿನಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಇಬ್ಬರ ಹತ್ಯೆ
ಸಾಂದರ್ಭಿಕ ಚಿತ್ರ
Follow us on

ಮೈಸೂರು: ನಗರದ ಎಲೆತೋಟದ ಬಳಿ ಜೋಡಿ ಕೊಲೆಯಾಗಿದ್ದು, ದುಷ್ಕರ್ಮಿಗಳು ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಕಿರಣ್(29) ಮತ್ತು ಕಿಶನ್(29) ಈ ಕೃತ್ಯದಲ್ಲಿ ಮೃತಪಟ್ಟಿದ್ದು, ಮೃತರಿಬ್ಬರೂ ಗೌರಿಶಂಕರ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಘಟನೆಯಲ್ಲಿ ಮಧು ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಗಾಯಾಳುವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಳೆ ದ್ವೇಷ ಹಾಗೂ ಜಾಗದ ವಿಚಾರದಲ್ಲಿಯೇ ಕಿಶನ್ ಮತ್ತು ಕಿರಣ್​ನನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದ್ದು, ಮೂವರ ತಂಡದಿಂದ ಈ ಕೃತ್ಯ ನಡೆದಿದೆ. ಸ್ಥಳಕ್ಕೆ ಡಿಸಿಪಿ ಡಾ. ಎ. ಎನ್. ಪ್ರಕಾಶ್ ಗೌಡ, ಎಸಿಪಿ ಪೂರ್ಣಚಂದ್ರ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಕೆ. ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾತ್ರೋರಾತ್ರಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿ, ಪೊಲೀಸರಿಗೆ ಶರಣಾದ ಆರೋಪಿ