AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ವಿಚಾರಕ್ಕೆ ದಾಯಾದಿಗಳ ನಡುವೆ ಗಲಾಟೆ; ಚಿಕ್ಕಬಳ್ಳಾಪುರದಲ್ಲಿ ಇಬ್ಬರ ಸಾವು

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಮುಗುಟಗೇರಿ ಗ್ರಾಮದಲ್ಲಿ ನಡೆದಿದ್ದ ಜೀವಂತ ದಹನ ಪ್ರಕರಣಕ್ಕೆ ಸಂಬಂಧಿಸಿ ಸಾವಿನ ಸಂಖ್ಯೆ 8ಕ್ಕೆ ಏರಿದೆ. ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 60 ವರ್ಷದ ಪಾಚೆ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮನೆ ವಿಚಾರಕ್ಕೆ ದಾಯಾದಿಗಳ ನಡುವೆ ಗಲಾಟೆ; ಚಿಕ್ಕಬಳ್ಳಾಪುರದಲ್ಲಿ ಇಬ್ಬರ ಸಾವು
ಪ್ರಾತಿನಿಧಿಕ ಚಿತ್ರ
sandhya thejappa
|

Updated on: Apr 07, 2021 | 10:28 AM

Share

ಚಿಕ್ಕಬಳ್ಳಾಪುರ: ಮನೆ ವಿಚಾರಕ್ಕೆ ದಾಯಾದಿಗಳ ನಡುವೆ ನಡೆದ ಗಲಾಟೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಶ್ರೀರಾಮ ನಗರದಲ್ಲಿ ಸಂಭವಿಸಿದೆ. ಮನೆ ವಿಚಾರಕ್ಕೆ ಇಬ್ಬರು ಸಹೋದರರಾದ ಆಂಜಿನಪ್ಪ ಮತ್ತು ಅಶ್ವತ್ಥ್ ನಾರಾಯಣ ಮಧ್ಯೆ ಪರಸ್ಪರ ಗಲಾಟೆಯಾಗಿತ್ತು. ಗಲಾಟೆಯಲ್ಲಿ ಕಲ್ಲು, ದೊಣ್ಣೆಗಳಿಂದ ಹೊಡೆದಾಡಿಕೊಂಡರು. ಈ ವೇಳೆ ಆಂಜಿನಪ್ಪ ಮತ್ತು ಅಶ್ವತ್ಥ್ ನಾರಾಯಣನ ಮಗ ವಿಷ್ಣುಪ್ರಸಾದ್ ಎಂಬುವವರು ಸಾವನ್ನಪ್ಪಿದ್ದಾರೆ. ಈ ಪ್ರಕರಣ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಜೀವಂತ ದಹನ: ಸಾವಿನ ಸಂಖ್ಯೆ 8ಕ್ಕೆ ಏರಿಕೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಮುಗುಟಗೇರಿ ಗ್ರಾಮದಲ್ಲಿ ನಡೆದಿದ್ದ ಜೀವಂತ ದಹನ ಪ್ರಕರಣಕ್ಕೆ ಸಂಬಂಧಿಸಿ ಸಾವಿನ ಸಂಖ್ಯೆ 8ಕ್ಕೆ ಏರಿದೆ. ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 60 ವರ್ಷದ ಪಾಚೆ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಏಪ್ರಿಲ್ 3ಕ್ಕೆ ಮದ್ಯ ಸೇವಿಸಿ ಬೋಜ ಎಂಬಾತ ತನ್ನ ಅಳಿಯನ ಮನೆಯ ಬಾಗಿಲು ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಇದರಲ್ಲಿ ನಿನ್ನೆ ವರೆಗೆ ಸುಮಾರು 7 ಜನರು ಸಾವನ್ನಪ್ಪಿದ್ದರು. ಇದೀಗ ಪಾಚೆ ಎಂಬುವವರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆರೋಪಿ ಆತ್ಮಹತ್ಯೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಮಾರು 8 ಜನರನ್ನು ಕೊಲೆ ಮಾಡಿದ್ದ ಆರೋಪಿ ಎರವರ ಬೋಜ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಕೂರು ನರೇಶ್ ಎಂಬುವರ ಕಾಫಿ ತೋಟದಲ್ಲಿ ನಿನ್ನೆ ಬೆಳಗ್ಗೆ ಬೋಜನ ಮೃತ ದೇಹ ಪತ್ತೆಯಾಗಿದೆ. ಘಟನೆ ಬಳಿಕ ಈತ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಳಿಯನ ಮನೆಯಲ್ಲಿ ಮಲಗಿದ್ದ ತನ್ನ ಪತ್ನಿ ಮತ್ತು ಇತರ ಐವರನ್ನು ಪೆಟ್ರೋಲ್ ಸುರಿದು ಈತ ಬರ್ಬರವಾಗಿ ಕೊಂದಿದ್ದ. ಘಟನೆ ಬಳಿಕ ಬೋಜ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ಕೊಡಗು ಪೊಲೀಸ್ ಕಾರ್ಯಾಚರಣೆ ನಡೆಸಿತ್ತು. ಇದರ ಮಧ್ಯೆಯೇ ಬೋಜನ ದೇಹ ನಿನ್ನೆ ಪತ್ತೆಯಾಗಿದೆ.

ಇದನ್ನೂ ಓದಿ

ಬಾಗಿಲಿಗೆ ಬೀಗ ಹಾಕಿ, ಬೆಂಕಿಯಿಟ್ಟು ಏಳು ಜನರನ್ನು ಕೊಂದ‌ ವ್ಯಕ್ತಿ ಆತ್ಮಹತ್ಯೆ; ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Karnataka Transport Workers Strike LIVE: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ.. KSRTC, BMTC ಸಿಗಲ್ಲ, ಖಾಸಗಿ ಸೇವೆ ಲಭ್ಯ

(Two men died after a quarrel between two families in Chikkaballapur)