Karnataka Rain: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆರಾಯನ ಅರ್ಭಟ ಮುಂದುವರೆಯಲಿದೆ. ಇಂದು (ಮೇ.21) ಮತ್ತು ನಾಳೆ (ಮೇ.22) ರಾಜ್ಯಾದ್ಯಂತ ಮಳೆಯಾಗಲಿದೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.
ಬೆಂಗಳೂರು: ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆರಾಯನ (Rain) ಅರ್ಭಟ ಮುಂದುವರೆಯಲಿದೆ. ಇಂದು (ಮೇ.21) ಮತ್ತು ನಾಳೆ (ಮೇ.22) ರಾಜ್ಯಾದ್ಯಂತ ಮಳೆಯಾಗಲಿದೆ ಹವಾಮಾನ ಇಲಾಖೆ (Meteorological Department) ಮಳೆ ಮುನ್ಸೂಚನೆ ನೀಡಿದೆ. ಇಂದು ನಗರದ ಹಲವೆಡೆ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಚಿತ್ರದುರ್ಗ, ಕೋಲಾರ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧ್ಯತೆಗಳಿವೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬಿರುಗಾಳಿ ಸಹಿತ ಮಳೆಗೆ ಮನೆಗಳು ಕುಸಿತ
ಮೈಸೂರು: ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಹಲವೆಡೆ ಹಾನಿಯಾಗಿದೆ. ನಂಜನಗೂಡು, ತಾಲೂಕಿನ ಗ್ರಾಮಗಳಲ್ಲಿ ಗಾಳಿ-ಮಳೆಗೆ ಅಪಾರ ನಷ್ಟವಾಗಿದೆ. ಗೆಜ್ಜಗನಹಳ್ಳಿಯಲ್ಲಿ ಭಾರಿ ಗಾಳಿಗೆ ಗ್ರಾಮದ ಚೆಲುವರಾಯ, ನಿಂಗರಾಜು, ನಂಜುಂಡೇಗೌಡ ಸಿದ್ದಾಚಾರಿ, ಸಿದ್ದಮ್ಮ, ರಾಜೇಶ ಎಂಬುವವರಿಗೆ ಸೇರಿದ ಮನೆಗಳ ಮೇಲ್ಚಾವಣಿ ಗೋಡೆಗಳು ಕುಸಿತಕೊಂಡಿದ್ದು, ಮನೆಯಲ್ಲಿದ್ದ ದವಸ ಧಾನ್ಯ, ಇತರೆ ವಸ್ತುಗಳು ನಾಶವಾಗಿವೆ.
ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಇನ್ನು ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ. ಹುಣಸೂರು ತಾಲೂಕಿನ ಕಡೆಮನಗನಹಳ್ಳಿಯಲ್ಲೂ ಭಾರಿ ಮಳೆ ಗಾಳಿಗೆ ಕೊಟ್ಟಿಗೆಯ ಮೇಲ್ಚಾವಣಿ ಹಾರಿ ಹೋಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:30 am, Sun, 21 May 23