ಹುಬ್ಬಳ್ಳಿಯಲ್ಲಿ ಮತ್ತಿಬ್ಬರಿಗೆ ಕೊರೊನಾ, ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆ
ಹುಬ್ಬಳ್ಳಿ: ನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಹೀಗಾಗಿ ಧಾರವಾಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9ಕ್ಕೇರಿದೆ. 236ನೇ ಪೇಷಂಟ್‌ನಿಂದ ಇಬ್ಬರಿಗೂ ಕೊರೊನಾ ಸೋಂಕು ಹರಡಿದ್ದು, 29 ವರ್ಷದ ಮಹಿಳೆ, 13 ವರ್ಷದ ಬಾಲಕಿಗೆ ಸೋಂಕು ತಗುಲಿದೆ. ಈ ಸಂಬಂಧ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಿಗೆ ಜಿಲ್ಲಾಡಳಿತ ಇಬ್ಬರ ಮೊಬೈಲ್ ಕರೆಗಳ ಮಾಹಿತಿ ನೀಡುವಂತೆ ಪತ್ರ ಬರೆದಿದೆ. ಈ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕ ಹೊಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚ ಬೇಕಾಗಿದೆ. ಹಾಗೂ ಅವರನ್ನು ಕ್ವಾರಂಟೈನ್ಗೆ […]
Follow us on
ಹುಬ್ಬಳ್ಳಿ: ನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಹೀಗಾಗಿ ಧಾರವಾಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9ಕ್ಕೇರಿದೆ. 236ನೇ ಪೇಷಂಟ್‌ನಿಂದ ಇಬ್ಬರಿಗೂ ಕೊರೊನಾ ಸೋಂಕು ಹರಡಿದ್ದು, 29 ವರ್ಷದ ಮಹಿಳೆ, 13 ವರ್ಷದ ಬಾಲಕಿಗೆ ಸೋಂಕು ತಗುಲಿದೆ.
ಈ ಸಂಬಂಧ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಿಗೆ ಜಿಲ್ಲಾಡಳಿತ ಇಬ್ಬರ ಮೊಬೈಲ್ ಕರೆಗಳ ಮಾಹಿತಿ ನೀಡುವಂತೆ ಪತ್ರ ಬರೆದಿದೆ. ಈ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕ ಹೊಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚ ಬೇಕಾಗಿದೆ. ಹಾಗೂ ಅವರನ್ನು ಕ್ವಾರಂಟೈನ್ಗೆ ಬಳಪಡಿಸುವ ಸಾಧ್ಯತೆ ಇದೆ.