ಹುಬ್ಬಳ್ಳಿ: ನಗರದ ಕಿಮ್ಸ್ ಆವರಣದಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಕರ್ನಾಟಕ ಸರ್ಕಾರದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭಾನುವಾರ ಭೂಮಿಪೂಜೆ ನೆರವೇರಿಸಿದರು.
ದ್ರವೀಕೃತ ವೈದ್ಯಕೀಯ ಆಮ್ಲಜನಕ (ಲಿಕ್ವಿಡ್ ಮೆಡಿಕಲ್ ಆಕ್ಸಿಜನ್) ಸಾಗಣೆ ತುಂಬಾ ಕಷ್ಟವಾಗಿತ್ತು. ಹೀಗಾಗಿ ಆಕ್ಸಿಜನ್ ಉತ್ಪಾದನಾ ಘಟಕ ಆರಂಭಿಸಲು ಮುಂದಾದೆವು. ದೇಶದ ಹಲವು ಖಾಸಗಿ ಸಂಸ್ಥೆಗಳು ರಾಜ್ಯದಲ್ಲಿ ಆಕ್ಸಿಜನ್ ಘಟಕ ನಿರ್ಮಿಸಲು ಸಹಾಯ ಮಾಡಿವೆ ಎಂದು ಭೂಮಿಪೂಜೆ ನೆರವೇರಿಸಿದ ನಂತರ ಅವರು ಮಾತನಾಡಿದರು.
ಆಕ್ಸಿಜನ್ ಘಟಕ ಸ್ಥಾಪನೆಗೆ ಕೈಗಾರಿಕಾ ಇಲಾಖೆಯಿಂದಲೂ ನೆರವು ನೀಡಲಾಗುತ್ತಿದೆ. ಹುಬ್ಬಳ್ಳಿಯ ಕಿಮ್ಸ್ ಆವರಣದಲ್ಲಿ ಸ್ಥಾಪಿಸುವ ಈ ಘಟಕಗಳಿಗೆ ಎರಡು ಅನ್ ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯವಿದೆ ಎಂದು ಅವರು ಹೇಳಿದರು.
ಪ್ರತಿ ಜಿಲ್ಲೆಗಳಲ್ಲಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ
ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಪ್ರತಿದಿನದ ಬಳಕೆಗಾಗಿ ಒಟ್ಟು 1200 ಮೆಟ್ರಿಕ್ ಟನ್ ಆಕ್ಸಿಜನ್ ಹಂಚಿಕೆಯಾಗಿದೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಈಚೆಗೆ ಹೈಕೋರ್ಟ್‌ಗೆ ಮಾಹಿತಿ ನೀಡಿದರು.
ಕರ್ನಾಟಕಕ್ಕೆ ಹೊರರಾಜ್ಯಗಳಿಂದ 370 ಮೆಟ್ರಿಕ್ ಟನ್ ಆಕ್ಸಿಜನ್ ತರಬೇಕು. ಹೊರ ರಾಜ್ಯಗಳಿಂದ ಆಕ್ಸಿಜನ್ ತರುವುದರಲ್ಲಿ ಕೆಲ ಸಮಸ್ಯೆಗಳಿವೆ. ಹೀಗಾಗಿ ಬಹುತೇಕ ದಿನಗಳಂದು ನಿಗದಿಯಷ್ಟು ಆಕ್ಸಿಜನ್ ಕರ್ನಾಟಕಕ್ಕೆ ತರಲು ಸಾಧ್ಯವಾಗಿಲ್ಲ ಎಂದು ಹೇಳಿದರು. ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ರಾಜ್ಯ ಸರ್ಕಾರದ ಅಧಿಕಾರಿಗಳು ಚರ್ಚಿಸಬೇಕು. ಪ್ರತಿ ಜಿಲ್ಲೆಗಳಲ್ಲಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹವಿರಬೇಕು. ಈ ಗುರಿ ಸಾಧಿಸಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ಸೂಚಿಸಿತು.
(Two Oxygen Plants in KIMS to Start Medical Oxygen Production Soon Says Jagadish Shettar)
ಇದನ್ನೂ ಓದಿ: ಹುಬ್ಬಳ್ಳಿಗೆ 25 ಜಂಬೋ ಸಿಲಿಂಡರ್ ಕಳಿಸಿಕೊಟ್ಟ ಸೋನು ಸೂದ್; ಎಡಿಜಿಪಿ ಭಾಸ್ಕರ್‌ರಾವ್ ನೇತೃತ್ವದಲ್ಲಿ ಆಕ್ಸಿಜನ್ ಕೇಂದ್ರ ಸ್ಥಾಪನೆ
ಇದನ್ನೂ ಓದಿ: ಕರ್ನಾಟಕದಲ್ಲಿ ಆಮ್ಲಜನಕ ಬಿಕ್ಕಟ್ಟು; ಬಳ್ಳಾರಿಯಲ್ಲಿ ಎರಡು ಘಟಕ ಸ್ಥಗಿತ, ಜಿಲ್ಲಾಡಳಿತಗಳಿಗೆ ರಾಜ್ಯ ಸರ್ಕಾರದಿಂದ ಎಚ್ಚರಿಕೆ
Published On - 9:35 pm, Sun, 30 May 21