ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಬೆಡ್ನಲ್ಲಿ ಇಬ್ಬರಿಗೆ ಚಿಕಿತ್ಸೆ
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಬೆಡ್ ಮೇಲೆ ಇಬ್ಬರು ರೋಗಿಗಳಿಗೆ ಆಕ್ಸಿಜನ್ ಸಮೇತ ಚಿಕಿತ್ಸೆ ನೀಡಲಾಗುತ್ತಿರುವ ವಿಡಿಯೋ ವೈರಲ್ ಆಗಿದೆ. ಆದ್ರೆ ವೈದ್ಯರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು ನಡೆದಿದೆ. ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳನ್ನ ಒಂದೇ ಬೆಡ್‌ನಲ್ಲಿ ಮಲಗಿಸಿ ಚಿಕಿತ್ಸೆ ನೀಡ್ತಿರುವ ವಿಡಿಯೋ ವೈರಲ್ ಆಗಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಬೆಡ್ ಮೇಲೆ ಇಬ್ಬರು ರೋಗಿಗಳಿಗೆ ಆಕ್ಸಿಜನ್ ಸಮೇತ ಚಿಕಿತ್ಸೆ ನೀಡಲಾಗುತ್ತಿರುವ ವಿಡಿಯೋ ವೈರಲ್ ಆಗಿದೆ. ಆದ್ರೆ ವೈದ್ಯರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಬೆಡ್ಗಳ ಕೊರತೆ ಇಲ್ಲ. 1200 ಬೆಡ್ಗಳನ್ನ ವ್ಯವಸ್ಥೆ ಮಾಡಲಾಗಿದೆ ಅಂತ ಜಿಲ್ಲಾಡಳಿತ ಹೇಳುತ್ತಿದೆ. ಹಾಗಾದ್ರೆ ಕಿಮ್ಸ್ ಮತ್ತೆ ಬೆಡ್ಗಳ ಕೊರತೆಯನ್ನ ಎದುರಿಸುತ್ತಿದಿಯಾ ಎನ್ನುವ ಆತಂಕ ಹುಟ್ಟಿದೆ.
ಇನ್ನು ಹಳೆ ಬಿಲ್ಡಿಂಗ್ನ ತುರ್ತು ಚಿಕಿತ್ಸಾ ವಿಭಾಗದಲ್ಲಿ ಇಂತಹದೊಂದು ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಕಿಮ್ಸ್ನದ್ದೇಯೇ ಎಂಬ ಬಗ್ಗೆ ಮಾಹಿತಿ ಇಲ್ಲ. ಕೊರೊನಾ ಸೇರಿದಂತೆ ನಾನ್ ಕೊವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್ಗಳಿಲ್ಲದ ಕಾರಣ ಒಂದೇ ಬೆಡ್ನಲ್ಲಿ ಇಬ್ಬರು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಈ ಪ್ರಕರಣ ನಮ್ಮಲ್ಲಿ ನಡೆದಿದೆಯೇ ಎಂದು ಪರಿಶೀಲಿಸುತ್ತಿದ್ದೇವೆ. ಅಷ್ಟಕ್ಕೂ ಈ ವಿಡಿಯೋ ನಮ್ಮದೇ ಆಸ್ಪತ್ರೆಯದಾ ಎಂಬ ಬಗ್ಗೆ ನಮಗೆ ಅನುಮಾನವಿದೆ ಎಂದು ಬೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ್ ತಿಳಿಸಿದ್ದಾರೆ.
Published On - 10:37 am, Wed, 28 April 21