ಗದಗದ ಗುಂಜಳ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರ ಸಾವು, 7 ಜನರಿಗೆ ಗಾಯ

ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ. ಕೂಲಿ ಕೆಲಸ ಮುಗಿಸಿ ವಾಪಸಾಗುವಾಗ ಸಂಭವಿಸಿದ ದುರಂತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ಗದಗದ ಗುಂಜಳ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರ ಸಾವು, 7 ಜನರಿಗೆ ಗಾಯ
ಪಲ್ಟಿಯಾದ ಟ್ರ್ಯಾಕ್ಟರ್​, ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ
Updated By: ಸಾಧು ಶ್ರೀನಾಥ್​

Updated on: Feb 25, 2021 | 11:59 AM

ಗದಗ: ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ. ಕೂಲಿ ಕೆಲಸ ಮುಗಿಸಿ ವಾಪಸಾಗುವಾಗ ಸಂಭವಿಸಿದ ದುರಂತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಸುಮಾರು ಏಳು ಜನರಿಗೆ ಗಾಯವಾಗಿದೆ.

ಕೂಲಿ ಕೆಲಸ ಮುಗಿಸಿಕೊಂಡು ಬರುವಾಗ ನಡೆದ ದುರ್ಘಟನೆಯಲ್ಲಿ ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವಾ ಹಿತ್ತಲಮನಿ (40) ಮತ್ತು ಸೋಮವ್ವಾ ಅಡುಗೆಮನಿ (48) ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಗಾಯಾಳುಗಳು ಲಕ್ಷ್ಮೇಶ್ವರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್​​ ರಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಗಿಲು ಮಟ್ಟಿದ ಕುಟುಂಬಸ್ಥರ ಆಕ್ರಂದನ

ಇದನ್ನೂ ಓದಿ

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿಯ ಮನೆಗೇ ತೆರಳಿ ಆತ್ಮವಿಶ್ವಾಸ ಹೆಚ್ಚಿಸಿದ ಸಚಿವ ಸುರೇಶ್ ಕುಮಾರ್

Road Accident | ಹಾವೇರಿ, ನೆಲಮಂಗಲದಲ್ಲಿ ಪ್ರತ್ಯೇಕ ಅಪಘಾತ.. ನಜ್ಜುಗುಜ್ಜಾದ ವಾಹನದಲ್ಲಿ ಸಿಲುಕಿ ವ್ಯಕ್ತಿ ಪರದಾಟ