ರಾಜ್ಯದಲ್ಲಿಂದು 792 ಜನರಿಗೆ ಕೊರೊನಾ ಪಾಸಿಟಿವ್​, ಇಬ್ಬರ ಸಾವು

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.  ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 792 ಜನರಿಗೆ ಕೊರೊನಾ ದೃಢವಾಗಿದೆ.

ರಾಜ್ಯದಲ್ಲಿಂದು 792 ಜನರಿಗೆ ಕೊರೊನಾ ಪಾಸಿಟಿವ್​, ಇಬ್ಬರ ಸಾವು
ಪ್ರಾತಿನಿಧಿಕ ಚಿತ್ರ

Updated on: Jan 10, 2021 | 8:56 PM

ಬೆಂಗಳೂರು: ದೇಶದಲ್ಲಿ ಜನವರಿ 16ರಿಂದ  ಕೊರೊನಾ ಲಸಿಕೆ ಹಂಚಿಕೆ ಆರಂಭವಾಗದಲಿದೆ.  ಈ ಮಧ್ಯೆ  ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿರುವುದು ಜನರು ನಿಟ್ಟುಸಿರು ಬಿಡುವಂತಾಗಿದೆ.

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.  ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 792 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,27,559 ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ ಕೂಡ  ಮಿತಿ ಮೀರಿ ಕಡಿಮೆ ಆಗಿದೆ.

ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,140  ಜನರ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 9,05,751 ಜನ ಗುಣಮುಖರಾಗಿ ಡಿಸ್​ಚಾರ್ಜ್ ಆಗಿದ್ದಾರೆ. 9, 649 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 202ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿತ್ಯ ರಾಜ್ಯದಲ್ಲಿ ಆ್ಯಕ್ಟಿವ್​ ಕೇಸ್​ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿರುವುದು ಜನರಲ್ಲಿ ಹೊಸ ಆಶಾಭಾವ ಮೂಡಿಸಿದೆ.

ಜ.16ರಿಂದ ದೇಶದಲ್ಲಿ ಕೊರೊನಾ ಲಸಿಕೆ ಹಂಚಿಕೆ.. ರಾಜ್ಯದಲ್ಲೂ ಸಂಪೂರ್ಣ ಸಿದ್ಧತೆ ಮಾಡಲಾಗಿದೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್​

Published On - 8:56 pm, Sun, 10 January 21