ಹಾವೇರಿ: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ ಮಾಡಿರುವ ಘಟನೆ ಯತ್ತಿನ ಹಳ್ಳಿಯ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಇರುವ ಕಾಂಪ್ಲೆಕ್ಸ್ ಬಳಿ ನಡೆದಿದೆ. ನಿಂಗಪ್ಪ ಶಿರಗುಪ್ಪಿ(28), ಗಣೇಶ ಕುಂದಾಪುರ(13) ಕೊಲೆಯಾದ ಮೃತ ದುರ್ದೈವಿಗಳಾಗಿದ್ದಾರೆ.
ಇಬ್ಬರನ್ನು ಹರಿತವಾದ ಅಸ್ತ್ರದಿಂದ ಹೊಡೆದು ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ವಿಜಯಕುಮಾರ, ಸಿಪಿಐ ಪ್ರಹ್ಲಾದ ಚನ್ನಗಿರಿ ಹಾಗೂ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮಂಡ್ಯದಲ್ಲಿ ಸೊಸೆ ಜತೆ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಹತ್ಯೆ
ಸೊಸೆಯೊಂದಿಗಿನ ಅನೈತಿಕ ಸಂಬಂಧ ಪ್ರಶ್ನಿಸಿದ ಮಹಿಳೆಯನ್ನ ಕೊಡಲಿಯಿಂದ ಕೊಂದು ಬರ್ಬರ ಹತ್ಯೆ ಮಾಡಲಾಗಿದೆ. ಕೊಲೆಗೈದ ವ್ಯಕ್ತಿ ವಾಸು ಎಂಬುವವ ಎಂದು ತಿಳಿದು ಬಂದಿದೆ. ಘಟನೆ ಕೆ.ಆರ್.ಪೇಟೆ ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದೊಡ್ಡತಾಯಮ್ಮ (55) ಕೊಲೆಯಾದ ಮೃತ ದುರ್ದೈವಿಯಾಗಿದ್ದಾರೆ.
ಹಲವಾರು ಬಾರಿ ದೊಡ್ಡತಾಯಮ್ಮ ತಿಳುವಳಿಕೆ ಹೇಳಿದ್ದರು. ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕೊಡಲಿಯಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಕೆ.ಆರ್.ಪೇಟೆ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮದ್ವೆಯಾಗಿದ್ರೂ ಪರಪುರುಷನ ಜತೆ ಲವ್ವಿಡವ್ವಿ.. ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ಪ್ರಿಯಕರನ ಕೈಯಿಂದಲೇ ಕೊಲೆ
ಇದನ್ನೂ ಓದಿ: ಯಶವಂತಪುರದಲ್ಲಿ ಹುಡುಗಿ ವಿಚಾರಕ್ಕೆ ಕಿತ್ತಾಟ: ಜಗಳ ಬಿಡಿಸಲು ಹೋದ PU ವಿದ್ಯಾರ್ಥಿಯ ಬರ್ಬರ ಕೊಲೆ