ನೆಲಮಂಗಲ: ಚಲಿಸುತ್ತಿದ್ದ ರೈಲಿನಡಿ ಸಿಲುಕಿ ಇಬ್ಬರು ವೃದ್ಧರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೊಲ್ಲಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಸಿಕ್ಕಿಲ್ಲ.
ರೈಲ್ವೆ ಹಳಿಯ ಮೇಲೆ ಸುಮಾರು 200 ಮೀಟರ್ ಅಂತರದಲ್ಲಿ ಇಬ್ಬರು ವೃದ್ಧರ ಮೃತದೇಹ ಪತ್ತೆಯಾಗಿದೆ. ವೃದ್ಧರು ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಬಗ್ಗೆ RPF ಪೋಲಿಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ನಲ್ಲಿ 2 ಪ್ರತ್ಯೇಕ ಅಪಘಾತ: 7 ಮಂದಿ ಸಾವು