ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯೊಡೆದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಬಳಿ ನಡೆದಿದೆ.
ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಅತಿವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯೊಡೆದಿದೆ. ಕಾರಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.