ನದಿಯಲ್ಲಿ ಈಜು, ಬೆಂಗಳೂರಿನ ವಿದ್ಯಾರ್ಥಿಗಳಿಬ್ಬರು ನೀರು ಪಾಲು

|

Updated on: Dec 10, 2019 | 5:29 PM

ಮೈಸೂರು: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಲ್ಫ್ರೆಡ್ ವಿಜಯ್(16) ಮತ್ತು ಹೇಮಂತ್(17) ಮೃತ ದುರ್ದೈವಿಗಳು. ಬೆಂಗಳೂರಿನ ಹೆಬ್ಬಾಳದ ಪರಿಕ್ರಮ ಹ್ಯುಮಾನಿಟಿ ಫೌಂಡೇಶನ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದರು. 45 ವಿದ್ಯಾರ್ಥಿಗಳು, ನಾಲ್ವರು ಉಪನ್ಯಾಸಕರು ಟಿ.ನರಸೀಪುರ ತಾಲೂಕಿನ ತಲಕಾಡು ಬಳಿಯ ನಿಸರ್ಗಧಾಮಕ್ಕೆ ಆಗಮಿಸಿದ್ದರು. ಅದರಲ್ಲಿ ಐವರು ವಿದ್ಯಾರ್ಥಿಗಳು ಸ್ನಾನ ಮಾಡಲು ನದಿಗೆ ಇಳಿದಿದ್ದಾರೆ. ನದಿಯಲ್ಲಿ ಈಜಾಡುವ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಂಬಿಗರ ನೆರವಿನಿಂದ […]

ನದಿಯಲ್ಲಿ ಈಜು, ಬೆಂಗಳೂರಿನ ವಿದ್ಯಾರ್ಥಿಗಳಿಬ್ಬರು ನೀರು ಪಾಲು
Follow us on

ಮೈಸೂರು: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಲ್ಫ್ರೆಡ್ ವಿಜಯ್(16) ಮತ್ತು ಹೇಮಂತ್(17) ಮೃತ ದುರ್ದೈವಿಗಳು.

ಬೆಂಗಳೂರಿನ ಹೆಬ್ಬಾಳದ ಪರಿಕ್ರಮ ಹ್ಯುಮಾನಿಟಿ ಫೌಂಡೇಶನ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದರು. 45 ವಿದ್ಯಾರ್ಥಿಗಳು, ನಾಲ್ವರು ಉಪನ್ಯಾಸಕರು ಟಿ.ನರಸೀಪುರ ತಾಲೂಕಿನ ತಲಕಾಡು ಬಳಿಯ ನಿಸರ್ಗಧಾಮಕ್ಕೆ ಆಗಮಿಸಿದ್ದರು.

ಅದರಲ್ಲಿ ಐವರು ವಿದ್ಯಾರ್ಥಿಗಳು ಸ್ನಾನ ಮಾಡಲು ನದಿಗೆ ಇಳಿದಿದ್ದಾರೆ. ನದಿಯಲ್ಲಿ ಈಜಾಡುವ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಂಬಿಗರ ನೆರವಿನಿಂದ ಉಳಿದ ಮೂವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:07 pm, Tue, 10 December 19