ಬ್ಲ್ಯಾಕ್ ಫಂಗಸ್ ಆಯ್ತು, ಈಗ ವೈಟ್ ಫಂಗಸ್ ಆತಂಕ; ಬೆಳಗಾವಿಯಲ್ಲಿ 2 ಪ್ರಕರಣ ಪತ್ತೆ

ಬೆಳಗಾವಿಯಲ್ಲಿ 2 ವೈಟ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಬಯಾಪ್ಸಿ, ಪೊಟ್ಯಾಸಿಯಮ್‌ ಹೈಡ್ರಾಕ್ಸೈಡ್ ತಪಾಸಣೆಗೆ ಕಳಿಸಿದ್ದೇವೆ ಎಂದು ಡಿಹೆಚ್‌ಒ ಡಾ.ಎಸ್.ವಿ‌.ಮುನ್ಯಾಳ್ ಹೇಳಿಕೆ ನೀಡಿದ್ದಾರೆ.

ಬ್ಲ್ಯಾಕ್ ಫಂಗಸ್ ಆಯ್ತು, ಈಗ ವೈಟ್ ಫಂಗಸ್ ಆತಂಕ; ಬೆಳಗಾವಿಯಲ್ಲಿ 2 ಪ್ರಕರಣ ಪತ್ತೆ
ವೈಟ್​ ಫಂಗಸ್
Follow us
preethi shettigar
|

Updated on: May 26, 2021 | 8:12 AM

ಬೆಳಗಾವಿ: ಕೊರೊನಾ ಎರಡನೇ ಅಲೆ ಹೆಚ್ಚಾಯಿತು ಎನ್ನುವಾಗಲೇ, ಬ್ಲ್ಯಾಕ್ ಫಂಗಸ್ ಶುರುವಾಗಿದ್ದು, ಚಿಕಿತ್ಸೆ ಸಿಗದೆ ಈಗಾಗಲೇ ಜನರು ಸಾವಿಗೀಡಾಗಿದ್ದಾರೆ. ಇನ್ನೇನು ಈ ಸಮಸ್ಯೆ ನಿವಾರಣೆಗೆ ಆರೋಗ್ಯ ಇಲಾಖೆ ಮುಂದಾಗಿದ್ದು, ಈಗ ಇನ್ನೊಂದು ಸೋಂಕು ಕಾಣಿಸಿಕೊಂಡಿದೆ. ಅದುವೇ ವೈಟ್ ಫಂಗಸ್. ಬೇರೆ ರಾಜ್ಯಗಳಲ್ಲಿ ಕಾಣಿಸಿಕೊಂಡಿದೆ ಎನ್ನುತ್ತಿರುವಾಗ ಕುಂದಾನಗರಿ ಬೆಳಗಾವಿಯಲ್ಲಿಯೂ ವೈಟ್ ಫಂಗಸ್ ಕಾಣಿಸಿಕೊಂಡಿದ್ದು, ಸದ್ಯ ಎಲ್ಲರಲ್ಲಿ ಆತಂಕ ಸೃಷ್ಟಿಯಾಗಿದೆ.

ಬೆಳಗಾವಿಯಲ್ಲಿ 2 ವೈಟ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಬಯಾಪ್ಸಿ, ಪೊಟ್ಯಾಸಿಯಮ್‌ ಹೈಡ್ರಾಕ್ಸೈಡ್ ತಪಾಸಣೆಗೆ ಕಳಿಸಿದ್ದೇವೆ ಎಂದು ಡಿಹೆಚ್‌ಒ ಡಾ.ಎಸ್.ವಿ‌.ಮುನ್ಯಾಳ್ ಹೇಳಿಕೆ ನೀಡಿದ್ದಾರೆ.

ಬಳಿಕ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಬಗ್ಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ 9 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಎಲ್ಲರಿಗೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈಗಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಇಬ್ಬರು ಸಾವನ್ನಪ್ಪಿದ್ದಾರೆ. ಕೊವಿಡ್ ಚಿಕಿತ್ಸೆ ಉಪಚಾರದ ಅಡ್ಡ ಪರಿಣಾಮಗಳಲ್ಲಿ ಬ್ಲ್ಯಾಕ್ ಫಂಗಸ್ ಕೂಡ ಒಂದು. ಒಂದೇ ಮಾಸ್ಕ್ ಎರಡು ಮೂರು ದಿನ ಬಳಸಿದರೆ ಅದೂ ಫಂಗಸ್‌ಗೆ ಕಾರಣವಾಗುತ್ತದೆ ಎಂದು ಬೆಳಗಾವಿಯಲ್ಲಿ ಡಿಹೆಚ್‌ಒ ಡಾ.ಎಸ್.ವಿ.ಮುನ್ಯಾಳ್ ತಿಳಿಸಿದ್ದಾರೆ.

ಮಧುಮೇಹಿಗಳಲ್ಲಿ ಹೆಚ್ಚಾಗಿ ಬ್ಲ್ಯಾಕ್ ಫಂಗಸ್ ಸಹ ಪತ್ತೆಯಾಗುತ್ತಿದೆ. ಗೋಕಾಕ್, ಅಥಣಿಯ ಇಬ್ಬರು ಬ್ಲ್ಯಾಕ್ ಫಂಗಸ್‌ನಿಂದ ಸಾವನ್ನಪ್ಪಿದ್ದಾರೆ. ಉಳಿದ 7 ರೋಗಿಗಳಿಗೆ ಆಯಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಹೆಚ್‌ಒ ಡಾ.ಎಸ್.ವಿ.ಮುನ್ಯಾಳ್ ಹೇಳಿದ್ದಾರೆ.

ಇದನ್ನೂ ಓದಿ:

Yellow Fungus: ಬ್ಲ್ಯಾಕ್, ವೈಟ್ ಫಂಗಸ್ ಬಳಿಕ ಯೆಲ್ಲೋ ಫಂಗಸ್ ಪತ್ತೆ; ರೋಗ ಲಕ್ಷಣ ಹಾಗೂ ಇತರ ಮಾಹಿತಿ ಇಲ್ಲಿದೆ

ಕರ್ನಾಟಕದಲ್ಲಿ ಮೊದಲ ಬಾರಿಗೆ ವೈಟ್ ಫಂಗಸ್ ಪತ್ತೆ? ಆರೋಗ್ಯ ಅಧಿಕಾರಿಗಳಿಂದ ಸ್ಪಷ್ಟನೆ ಬಾಕಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ