ದೇಗುಲ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರು ಸಾವು: ಸಿಎಂ ನೋಡಲು ಬಂದು ಶಾಕ್​ ಹೊಡೆಸಿಕೊಂಡ ಯುವಕ

ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯರನ್ನು ನೋಡಲು ಹೋಗಿ ಯುವಕನೋರ್ವ ಶಾಕ್​ ಹೊಡೆಸಿಕೊಂಡಿರುವಂತಹ ಘಟನೆ ನಡೆದಿದೆ. ಗಾಯಗೊಂಡ ಯುವಕನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ದೇಗುಲ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರು ಸಾವು: ಸಿಎಂ ನೋಡಲು ಬಂದು ಶಾಕ್​ ಹೊಡೆಸಿಕೊಂಡ ಯುವಕ
ದೇಗುಲ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರು ಸಾವು: ಸಿಎಂ ನೋಡಲು ಬಂದು ಶಾಕ್​ ಹೊಡೆಸಿಕೊಂಡ ಯುವಕ
Edited By:

Updated on: Aug 05, 2024 | 10:54 PM

ಚಿಕ್ಕೋಡಿ, ಆಗಸ್ಟ್​ 5: ಸಿಎಂ ಸಿದ್ದರಾಮಯ್ಯರನ್ನು ನೋಡಲು ಹೋಗಿ ಯುವಕ (b0y) ವಿದ್ಯುತ್ ಶಾಕ್ (Electric shock) ಹೊಡೆಸಿಕೊಂಡಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ನಡೆದಿದೆ. ಮಹೇಶ್ ಹುಣ್ಣರಗಿ (22) ಯುವಕನಿಗೆ ವಿದ್ಯುತ್ ತಗುಲಿ ಗಂಭೀರ ಗಾಯಗೊಂಡಿದ್ದಾರೆ. ಪ್ರವಾಹ ಪರಿಸ್ಥಿತಿ ವೀಕ್ಷಣೆಗೆಂದು ಸಿಎಂ  ಸಿದ್ದರಾಮಯ್ಯ ಜುಗೂಳ ಗ್ರಾಮಕ್ಕೆ ಭೇಟಿ ವೇಳೆ ಅವಘಡ ಸಂಭವಿಸಿದೆ.

ಮುಖ್ಯಮಂತ್ರಿ ನೋಡಲು ಯುವಕ ಮಹೇಶ್ ಮೇಲ್ಛಾವಣಿ ಮೇಲೆ ಹತ್ತಿದ್ದಾನೆ. ಈ ವೇಳೆ ವಿದ್ಯುತ್ ತಗುಲಿ ಮುಖ ಮತ್ತು ಕೈಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಮಹೇಶ್​ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರ ಸಾವು

ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರು ಸಾವನ್ನಪ್ಪಿದ್ದಾರೆ. ಕಲಾವತಿ ಬೀದರವಾಡಿ(37), ಸವಿತಾ ಒಂಟಿ(36) ಮೃತರು. ವಾಲ್ಮೀಕಿ ದೇವಸ್ಥಾನ ಸ್ವಚ್ಛಗೊಳಿಸಿ ಶೆಟರ್ ಎಳೆಯುವಾಗ ದುರಂತ ಸಂಭವಿಸಿದೆ.

ಇದನ್ನೂ ಓದಿ: ನರ್ಸಿಂಗ್​ ವಿದ್ಯಾರ್ಥಿನಿ ಆತ್ಮಹತ್ಯೆ: ಸಾಯುವ ಮುನ್ನ ತಾಯಿಗೆ ಕರೆ ಮಾಡಿ ಹೇಳಿದ್ದೇನು ಗೊತ್ತಾ?

ಮೃತ ಕಲಾವತಿ ಪತಿ ಮಾರುತಿ ಬೀದರವಾಡಿಗೆ ಗಂಭೀರ ಗಾಯಗಳಾಗಿದ್ದು, ಬೆಳಗಾವಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರೈಲ್ವೆ ಹಳಿ ಮೇಲೆ ವ್ಯಕ್ತಿಯ ಶವಪತ್ತೆ: ಆತ್ಮಹತ್ಯೆ ಶಂಕೆ

ಚಿತ್ರದುರ್ಗ: ಕವಾಡಿಗರಹಟ್ಟಿ ಬಡಾವಣೆ ಬಳಿಯ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈವರೆಗೆ ಮೃತ ವ್ಯಕ್ತಿಯ ಗುರುತು ಪತ್ತೆ ಆಗಿಲ್ಲ. ರೈಲ್ವೆ ಇಲಾಖೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೀನುಗಾರಿಕೆಗೆ ತೆರಳಿದ್ದ ಬೋಟ್​ನಲ್ಲಿ ಬೆಂಕಿ ಅವಘಡ 

ಮಂಗಳೂರು: ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್​ನಲ್ಲಿ ಬೆಂಕಿ ಅವಘಡ ಸಂಭವಿಸಿರುವಂತಹ ಘಟನೆ ನಡೆದಿದೆ. ಸಮುದ್ರದ ಮಧ್ಯದಲ್ಲಿ ಮೀನುಗಾರಿಕೆ ಬೋಟ್ ಹೊತ್ತಿಉರಿದೆ. ಹುಸೇನ್ ಎಂಬುವರ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿ ಆಗಿದ್ದು, ಬೋಟ್​ನಲ್ಲಿದ್ದ 10 ಮೀನುಗಾರರನ್ನ ರಕ್ಷಿಸಲಾಗಿದೆ. ದಕ್ಕೆಯಿಂದ 88 ನಾಟಿಕಲ್ ಮೈಲ್ ದೂರದಲ್ಲಿ ಬೋಟ್ ಮುಳುಗಡೆ ಆಗಿದ್ದು, ಸುಮಾರು 1 ಕೋಟಿ ರೂಪಾಯಿ ನಷ್ಟವಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us