ತಿಳಿಯದೆ ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ 2 ವರ್ಷದ ಮಗು ಸಾವು

ಸ್ನಾನ ಮಾಡಿಸುವಾಗ ತಣ್ಣೀರು ತರುವುದಕ್ಕೆಂದು ತಾಯಿ ಹೋಗಿದ್ದರು. ಈ ವೇಳೆ ತಿಳಿಯದೆ ಮಗು ಮೈಮೇಲೆ ಬಿಸಿ ನೀರು ಸುರಿದುಕೊಂಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಆದ್ಯಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೆ.ಆರ್.ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ.

ತಿಳಿಯದೆ ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ 2 ವರ್ಷದ ಮಗು ಸಾವು
ತಿಳಿಯದೆ ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ 2 ವರ್ಷದ ಮಗು ಸಾವು
Edited By:

Updated on: Dec 14, 2021 | 9:58 AM

ಮೈಸೂರು: ತಿಳಿಯದೆ ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ 2 ವರ್ಷದ ಮಗು ಮೃತಪಟ್ಟ ಘಟನೆ ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮು-ಜಯಲಕ್ಷ್ಮೀ ದಂಪತಿಯ ಪುತ್ರಿ ಆದ್ಯಾ(2) ಮೃತ ಮಗು.

ಸ್ನಾನ ಮಾಡಿಸುವಾಗ ತಣ್ಣೀರು ತರುವುದಕ್ಕೆಂದು ತಾಯಿ ಹೋಗಿದ್ದರು. ಈ ವೇಳೆ ತಿಳಿಯದೆ ಮಗು ಮೈಮೇಲೆ ಬಿಸಿ ನೀರು ಸುರಿದುಕೊಂಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಆದ್ಯಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೆ.ಆರ್.ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು ಮತ್ತೊಂದೆಡೆ ಲಾರಿಗೆ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ನಡೆದಿದೆ. MRN ಸಕ್ಕರೆ ಕಾರ್ಖಾನೆ ಲಾರಿ ಪಾರ್ಕಿಂಗ್‌ನಲ್ಲಿ ಕಬ್ಬು ತುಂಬಿದ್ದ ಲಾರಿಗೆ ನೇಣು ಬಿಗಿದುಕೊಂಡು ಚಾಲಕ ಕೈಲಾಸ್ ಪರಾಂಡೆ(23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ವ್ಯಕ್ತಿ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಇವರಗಾಂವ್ ಗ್ರಾಮದ ನಿವಾಸಿ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬಾದಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Venkatesh Iyer: ಹಾರ್ದಿಕ್ ಪಾಂಡ್ಯ ಜಾಗಕ್ಕೆ ಈಗಾಗಲೇ ಹೊಸ ಆಟಗಾರನ ಎಂಟ್ರಿ ಆಗಿದೆಯಂತೆ

Published On - 9:01 am, Tue, 14 December 21