AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಕೃಷಿ ವಿವಿಯಲ್ಲಿ ಉದ್ಯೋಗಾವಕಾಶ: ಸಹಾಯಕ ವೈದ್ಯಾಧಿಕಾರಿ ಹುದ್ದೆಗೆ ನೇರ ಸಂದರ್ಶನ

ಧಾರವಾಡ ಕೃಷಿ ವಿಶ್ವವಿದ್ಯಾಲಯವು (UAS Dharwad) ಸಹಾಯಕ ವೈದ್ಯಾಧಿಕಾರಿ (Assistant Medical Officer) ಹುದ್ದೆಗೆ ನೇಮಕಾತಿ ಕರೆದಿದೆ. MBBS/BAMS ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಒಟ್ಟು 1 ಹುದ್ದೆ ಇದ್ದು, ಮಾಸಿಕ 40,000 ರಿಂದ 60,000 ರೂ. ವೇತನ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಇಲ್ಲದೆ, ಡಿಸೆಂಬರ್ 11 ರಂದು ನೇರ ಸಂದರ್ಶನ (Walk-in-Interview) ಮೂಲಕ ಆಯ್ಕೆ ನಡೆಯಲಿದೆ.

ಧಾರವಾಡ ಕೃಷಿ ವಿವಿಯಲ್ಲಿ ಉದ್ಯೋಗಾವಕಾಶ: ಸಹಾಯಕ ವೈದ್ಯಾಧಿಕಾರಿ ಹುದ್ದೆಗೆ ನೇರ ಸಂದರ್ಶನ
ಉದ್ಯೋಗಾವಕಾಶ
ಅಕ್ಷತಾ ವರ್ಕಾಡಿ
|

Updated on: Nov 26, 2026 | 2:26 PM

Share

ಧಾರವಾಡ: ಕರ್ನಾಟಕ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಧಾರವಾಡ ಕೃಷಿ ವಿಶ್ವವಿದ್ಯಾಲಯವು (UAS Dharwad) ಖಾಲಿ ಇರುವ ಸಹಾಯಕ ವೈದ್ಯಾಧಿಕಾರಿ (Assistant Medical Officer) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನವೆಂಬರ್ 21 ರಂದು ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಕರ್ನಾಟಕ ಸರ್ಕಾರಿ ಸಂಸ್ಥೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ವೈದ್ಯಕೀಯ ಪದವೀಧರರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ಹುದ್ದೆಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ, ನೇರ ಸಂದರ್ಶನದ (Walk-in-Interview) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹುದ್ದೆ, ಸ್ಥಳ ಮತ್ತು ಮಾಸಿಕ ವೇತನದ ಮಾಹಿತಿ:

ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 01 ಸಹಾಯಕ ವೈದ್ಯಾಧಿಕಾರಿ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ವಿಜಯಪುರದ ಕೃಷಿ ಮಹಾವಿದ್ಯಾಲಯದಲ್ಲಿ ಉದ್ಯೋಗದ ಸ್ಥಳವನ್ನು ನಿಗದಿಪಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಪ್ರತಿ ತಿಂಗಳು 40,000 ದಿಂದ 60,000 ರೂ. ವರೆಗೆ ಆಕರ್ಷಕ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ನಿಯಮಗಳು:

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ BAMS ಅಥವಾ MBBS ಪದವಿಯನ್ನು ಪೂರ್ಣಗೊಳಿಸಿರಬೇಕು. ವಯೋಮಿತಿ ಮತ್ತು ವಯೋಮಿತಿ ಸಡಿಲಿಕೆಯು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಚಲಿತ ನಿಯಮಾವಳಿಗಳ ಪ್ರಕಾರ ಅನ್ವಯವಾಗುತ್ತದೆ.

ಇದನ್ನೂ ಓದಿ: ಮೊದಲ ಉದ್ಯೋಗ ಪಡೆಯುವುದು ಹೇಗೆ? ಫ್ರೆಶರ್‌ಗಳು ತಿಳಿದುಕೊಳ್ಳಬೇಕಾದ ಪ್ರಮುಖ ವಿಚಾರಗಳಿವು

ನೇರ ಸಂದರ್ಶನಕ್ಕೆ ಹಾಜರಾಗುವ ವಿಧಾನ ಮತ್ತು ವಿಳಾಸ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮುಂಚಿತವಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವ ಎಲ್ಲಾ ಅಗತ್ಯ ಮೂಲ ದಾಖಲೆಗಳು ಮತ್ತು ಪ್ರತಿಗಳೊಂದಿಗೆ ಡಿಸೆಂಬರ್ 11, ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಈ ಸಂದರ್ಶನವು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಅಧೀನದಲ್ಲಿರುವ ವಿಜಯಪುರದ ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ಅವರ ಕಚೇರಿ ಕೊಠಡಿಯಲ್ಲಿ (Room of the Dean (Agri), College of Agriculture, Vijayapura) ನಡೆಯಲಿದೆ.

ಪ್ರಮುಖ ದಿನಾಂಕಗಳು ಮತ್ತು ಅಧಿಕೃತ ವೆಬ್‌ಸೈಟ್:

ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ಮುನ್ನ ನೇಮಕಾತಿಯ ಕುರಿತಾದ ಹೆಚ್ಚಿನ ವಿವರಗಳು ಮತ್ತು ಅಧಿಕೃತ ಅಧಿಸೂಚನೆಯ ಪಿಡಿಎಫ್ (PDF) ಪ್ರತಿಯನ್ನು ಪಡೆಯಲು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಆದ uasd.edu ಗೆ ಭೇಟಿ ನೀಡಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಸದ್ಯ ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ರಾಜಕೀಯ, ಕ್ರೈಂ ಸುದ್ದಿಗಳನ್ನು ಬರೆಯುತ್ತಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More