AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ: ಮೈಸೂರಿನ ಫುಟ್​ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ ಹೈಕೋರ್ಟ್

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಳಿಗೆ ಪ್ರತಿಭಟನೆ ನಡೆಸಲು ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಇದರಂತೆ ಒಂದು ಲಕ್ಷ ರೂಪಾಯಿ ಬಾಂಡ್, ಶಾಂತಿಯುತ ಪ್ರತಿಭಟನೆ, ಮತ್ತು ಚಿತ್ರೀಕರಣ ಕಡ್ಡಾಯ. ಸರ್ಕಾರ ಕಾನೂನು ಸುವ್ಯವಸ್ಥೆಗೆ ಭಂಗ ಎಂದು ವಾದಿಸಿದರೆ, ಅರ್ಜಿದಾರರು ಶಾಂತಿಯುತ ಪ್ರತಿಭಟನೆಯ ಭರವಸೆ ನೀಡಿದರು.

ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ: ಮೈಸೂರಿನ ಫುಟ್​ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ ಹೈಕೋರ್ಟ್
ಹೈಕೋರ್ಟ್
Ramesha M
| Edited By: |

Updated on: Feb 24, 2025 | 1:43 PM

Share

ಮೈಸೂರು, ಫೆಬ್ರವರಿ 24: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ಸಂಬಂಧ ಮೈಸೂರಿನ ಫುಟ್​ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಪ್ರತಿಭಟನೆಗೆ ಅವಕಾಶ ಕೋರಿ ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿ ಪೊಲೀಸರಿಗೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಮಿತಿಯು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಪ್ರತಿಭಟನೆಗೆ ಅವಕಾಶ ನೀಡುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. ಜತೆಗೆ, 1 ಲಕ್ಷ ರೂಪಾಯಿ ಬಾಂಡ್ ನೀಡಲು ಆಯೋಜಕರಿಗೆ ನಿರ್ದೇಶನ ನೀಡಿದೆ.

ಹೈಕೋರ್ಟ್ ಷರತ್ತುಗಳೇನು?

1 ಲಕ್ಷ ರೂಪಾಯಿ ಬಾಂಡ್ ನೀಡಬೇಕು. ಪ್ರತಿಭಟನೆ ಶಾಂತಿಯುತವಾಗಿರಬೇಕು ಹಾಗೂ ಸಂಪೂರ್ಣ ಚಿತ್ರೀಕರಣ ಮಾಡಬೇಕು. ಶಾಂತಿಭಂಗವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಅಹಿತಕರ ಘಟನೆಯಾದರೆ ಅರ್ಜಿದಾರರನ್ನೇ ಹೊಣೆ ಮಾಡಲಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.

ಸಂಜೆ 3.30 ರಿಂದ ಪ್ರತಿಭಟನೆ ನಡೆಸಲು ಅವಕಾಶ ನೀಡಲು ಸೂಚನೆ ಮೈಸೂರಿನ ಪೊಲೀಸ್ ಆಯುಕ್ತರಿಗೆ ನ್ಯಾ.ಆರ್. ದೇವದಾಸ್ ಅವರಿದ್ದ ಪೀಠ ಸೂಚನೆ ನೀಡಿದೆ.

ಸರ್ಕಾರದ ಪರ ವಕೀಲರ ವಾದ ಏನು?

ಪ್ರತಿಭಟನೆಗೆ ಅವಕಾಶ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಬಹುದು. 8 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ, 9 ಮಂದಿ ಪೊಲೀಸರಿಗೆ ಗಾಯವಾಗಿದೆ. ಬೇರೆ ಸಂಘಟನೆಗಳು ಧರಣಿ ನಡೆಸಲು ಅನುಮತಿ ಕೋರಿದ್ದರು, ನೀಡಿಲ್ಲ. ಸೂಕ್ಷ್ಮತೆ ಪರಿಗಣಿಸಿ ಪ್ರತಿಭಟನೆ ನಿರ್ಬಂಧಿಸಿ ನಿಷೇಧಾಜ್ಞೆ ಹೇರಲಾಗಿದೆ ಎಂದು ಸರ್ಕಾರದ ಪರ ಹೆಚ್ಚುವರಿ ಎಜಿ ಭಾನು ಪ್ರಕಾಶ್ ಹೈಕೋರ್ಟ್​​ಗೆ ತಿಳಿಸಿದರು. ಜತೆಗೆ, ಫುಟ್​ಬಾಲ್ ಮೈದಾನ, ಮಹಾರಾಜ ಕಾಲೇಜ್ ಗ್ರೌಂಡ್​ನಲ್ಲಿ‌ ಅವಕಾಶ ನೀಡಬಹುದು, ಆದರೆ 300ಕ್ಕಿಂತ ಹೆಚ್ಚಿನ ಜನರಿಗೆ ಅವಕಾಶ ನೀಡದಂತೆ ಮನವಿ ಮಾಡಿದರು.

ಅರ್ಜಿದಾರರ ವಾದವೇನು?

ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿಯ ರಿಟ್ ಅರ್ಜಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಪ್ರತಿಭಟನೆಗೆ ಅನುಮತಿ ನೀಡಲು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಏನಾದರೂ ಅಹಿತಕರ ಘಟನೆ ನಡೆದರೆ ಯಾರು ಹೊಣೆ? ರಸ್ತೆ ಬಿಟ್ಟು ಬೇರೆ ಮೈದಾನದಲ್ಲಿ ಪ್ರತಿಭಟನೆ ನಡೆಸಿದರೆ ಪರಿಗಣಿಸುವುದಾಗಿ ತಿಳಿಸಿತು.

ಇದನ್ನೂ ಓದಿ: ಹೈಕಮಾಂಡ್ ಏಟಿಗೆ ರೆಬೆಲ್ ಯತ್ನಾಳ್ ಸೈಲೆಂಟ್: ಮೈಸೂರು ಚಲೋ ಮೂಲಕ ಬಿವೈ ವಿಜಯೇಂದ್ರ ಶಕ್ತಿ ಪ್ರದರ್ಶನ

ನಂತರ ಸೂಕ್ತ ಸ್ಥಳ ತಿಳಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಕೆಲಕಾಲ ಮುಂದೂಡಿತು. ನಂತರ ಸರ್ಕಾರದ ಪರ ವಕೀಲರ ವಾದ ಆಲಿಸಿ, ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್